ಸೂಚನೆ

  • Oct 04, 2023, 20:12 PM IST
1 /6

ದೇಹದಲ್ಲಿ ಕಾಡುವ ಹೆಚ್ಚುವರಿ ತೂಕವು ಒಂದಕ್ಕಿಂತ ಹೆಚ್ಚು ರೀತಿಯಲ್ಲಿ ನಮ್ಮ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಸಂಶೋಧನೆಯಲ್ಲಿ ಸಾಬೀತಾಗಿದೆ. ತೂಕವನ್ನು ಕಳೆದುಕೊಳ್ಳಲು, ಕೆಲವರು ಆಹಾರಕ್ರಮವನ್ನು ಬದಲಾಯಿಸುತ್ತಾರೆ. ಇನ್ನೂ ಕೆಲವರು ವ್ಯಾಯಾಮ, ಜಿಮ್ ಎನ್ನುತ್ತಾ ಸುತ್ತಾಡುತ್ತಾರೆ.

2 /6

ಈ ಪಾನೀಯವನ್ನು ಸೇವಿಸುವ ಮೂಲಕ ತೂಕವನ್ನು ಕಳೆದುಕೊಳ್ಳಬಹುದು. ಅಷ್ಟಕ್ಕೂ ಈ ಪಾನೀಯ ಯಾವುದು ಎಂದು ಯೋಚಿಸುತ್ತಿದ್ದೀರಾ…? ಇದು ಜೀರಿಗೆ ನೀರು. ತೂಕ ನಷ್ಟಕ್ಕೆ ಜೀರಿಗೆ ನೀರು ಬೆಸ್ಟ್ ಮನೆಮದ್ದು ಎಂದೇ ಹೇಳಲಾಗುತ್ತದೆ.

3 /6

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಪಾನೀಯವನ್ನು ಸೇವಿಸಿದರೆ ತೂಕ ಇಳಿಕೆ ಸುಲಭವಾಗಿ ಆಗುತ್ತದೆ. ಇನ್ನು ಜೀರಿಗೆ ನೀರನ್ನು ಮನೆಯಲ್ಲಿಯೇ ತಯಾರಿಸಬಹುದು. ಈ ನೀರು ತೂಕವನ್ನು ಕಳೆದುಕೊಳ್ಳಲು ಮತ್ತು ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅಷ್ಟೇ ಅಲ್ಲದೆ, ಜೀರಿಗೆ ನೀರು ನಿಮ್ಮನ್ನು ಹೈಡ್ರೀಕರಿಸುವಲ್ಲಿ ಸಹಾಯ ಮಾಡುತ್ತದೆ.

4 /6

1 ಚಮಚ ಜೀರಿಗೆಯನ್ನು ಒಂದು ಕಪ್ ನೀರಿನಲ್ಲಿ ನೆನೆಸಿಡಿ. ಬೆಳಿಗ್ಗೆ 5 ನಿಮಿಷಗಳ ಕಾಲ ಕುದಿಸಿ, ನಂತರ ಅದನ್ನು ಫಿಲ್ಟರ್ ಮಾಡಿ ಸೇವಿಸಿ.

5 /6

ಜೀರಿಗೆ ನೀರು ಹೃದಯದ ಆರೋಗ್ಯವನ್ನು ಸುಧಾರಿಸಲು ಸಹ ಸಹಾಯ ಮಾಡುತ್ತದೆ. ಅಷ್ಟೇ ಅಲ್ಲದೆ, ಜೀರ್ಣಕ್ರಿಯೆಯು ಸುಧಾರಿಸುತ್ತದೆ. ತೂಕ ನಷ್ಟದ ಜೊತೆಗೆ, ಜೀರಿಗೆ ನೀರು ಚಯಾಪಚಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

6 /6

(ಸೂಚನೆ: ಆತ್ಮೀಯ ಓದುಗರೇ, ನಮ್ಮ ಸುದ್ದಿಗಳನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಈ ಸುದ್ದಿಯನ್ನು ನಿಮಗೆ ಅರಿವು ಮೂಡಿಸುವ ಉದ್ದೇಶದಿಂದ ಬರೆಯಲಾಗಿದೆ. ಇದನ್ನು ಬರೆಯುವಲ್ಲಿ ನಾವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯ ಸಹಾಯವನ್ನು ತೆಗೆದುಕೊಂಡಿದ್ದೇವೆ. ಅಳವಡಿಸಿಕೊಳ್ಳುವ ಮೊದಲು ಖಂಡಿತವಾಗಿಯೂ ವೈದ್ಯರನ್ನು ಸಂಪರ್ಕಿಸಿ.)