150 ರೂಪಾಯಿ ಇದ್ರೆ ಫೋಟೋ ಸಿನಿಮಾ ನೋಡಬಹುದು...ಮಾ.15ಕ್ಕೆ ಬರ್ತಿದೆ ಲಾಕ್ ಡೌನ್ ಕಥೆ

Sun, 10 Mar 2024-11:56 pm,

ಫೋಟೋ ಸಿನಿಮಾವನ್ನು 'ನಿರ್ದಿಗಂತ'ದ ಮೂಲಕ ಪ್ರಕಾಶ್ ರಾಜ್ ಪ್ರೆಸೆಂಟ್ ಮಾಡುತ್ತಿದ್ದಾರೆ. ಈ ಚಿತ್ರದ ಮೂಲಕ ಉತ್ಸವ್ ಗೋನವಾರ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ‘ಮಸಾರಿ ಟಾಕೀಸ್’ ಬ್ಯಾನರ್ ಅಡಿಯಲ್ಲಿ ಸಿನಿಮಾ ನಿರ್ಮಾಣ ಆಗಿದೆ.ಮಹಾದೇವ ಹಡಪದ್, ಜಹಾಂಗೀರ್, ಸಂಧ್ಯಾ ಅರಕೆರೆ, ಮತ್ತು ವೀರೇಶ್ ಗೊನ್ವಾರ್ ಈ ಚಿತ್ರದಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ದಿನೇಶ್ ದಿವಾಕರನ್ ಛಾಯಾಗ್ರಹಣ, ರವಿ ಹಿರೇಮಠ್ ಶಬ್ದ ವಿನ್ಯಾಸ, ಶಿವರಾಜ್ ಮೆಹೂ ಸಂಕಲನ ಮಾಡಿದ್ದಾರೆ. ಮಾರ್ಚ್ 15ಕ್ಕೆ ಸಿನಿಮಾ ರಿಲೀಸ್ ಆಗುತ್ತಿದೆ.

ಫೋಟೋದಂತಹ ಸಾಮಾಜಿಕ ಕಳಕಳಿಯುಳ್ಳ ಸಿನಿಮಾ ಪ್ರೇಕ್ಷಕರಿಗೆ ತಲುಪಿಸಬೇಕು ಎಂಬ ಉದ್ದೇಶದಿಂದ ಚಿತ್ರದ ಟಿಕೆಟ್ ಬೆಲೆಯನ್ನು ಕಡಿಮೆ ಮಾಡಲಾಗಿದೆ. ಮಲ್ಟಿಪ್ಲೆಕ್ಸ್​ನಲ್ಲಿ ಹಾಯಾಗಿ ಸಿನಿಮಾ ನೋಡಬೇಕು ಎಂಬುದು ಪ್ರೇಕ್ಷಕರ ಆಸೆ. ಆದರೆ ದುಬಾರಿಯಾದ ಸಿನಿಮಾಗಳ ಟಿಕೆಟ್​ ದರ ನೋಡಿ ಎಷ್ಟೋ ಜನರು ಮಲ್ಟಿಪ್ಲೆಕ್ಸ್​ ಕಡೆಗೆ ತಲೆ ಹಾಕುವುದಿಲ್ಲ. ಕುಟುಂಬ ಸಮೇತರಾಗಿ ಸಿನಿಮಾ ನೋಡಲು ಹೋದರೆ ಜೇಬಿಗೆ ಹೊರೆಯಾಗುತ್ತದೆ ಎಂದು ಚಿಂತಿಸುವ ವರ್ಗ ಕೂಡ ದೊಡ್ಡದಿದೆ. ಅಂಥವರಿಗೆಲ್ಲ ಫೋಟೋ ತಂಡ ಗುಡ್​ ನ್ಯೂಸ್​ ಕೊಟ್ಟಿದೆ. ಕೇಲವ 150 ಟಿಕೆಟ್ ಬೆಲೆಯನ್ನು ನಿಗದಿ ಮಾಡಿದೆ.

 

ನಿಮ್ಮ ಸಂಗ ಎಂಬ ಜನಪದ ಶೈಲಿಯ ಹಾಡು ಫೋಟೋ ಸಿನಿಮಾದ ಅಂತರಂಗವನ್ನು ಬಿಚ್ಚಿಟ್ಟಿದೆ. ನಿರ್ದೇಶಕ ಉತ್ಸವ್ ಸಾಹಿತ್ಯ ಬರೆದಿರುವ ಹಾಡಿಗೆ ಶಿಲ್ಪಾ ಮುಡ್ಬಿ ಧ್ವನಿಯಾಗಿದ್ದಾರೆ. ಲಾಕ್ ಡೌನ್ ಸಂದರ್ಭದಲ್ಲಿ ಎದುರಿಸಿ ಕಷ್ಟಗಳನ್ನು ಹಾಡಿನಲ್ಲಿ ಕಟ್ಟಿಕೊಡಲಾಗಿದೆ.

ನಿರ್ದೇಶಕ ಉತ್ಸವ್ ಮಾತನಾಡಿ, ಫೋಟೋ ಸಿನಿಮಾ ರಿಲೀಸ್ ಮಾಡುವುದು ಹೇಗೆ ಎಂಬ ಪ್ರಶ್ನೆ ಇತ್ತು. ಪ್ರಕಾಶ್ ಸರ್ ಬಂದಿದ್ದು  ನಮಗೆ ದೊಡ್ಡ ಶಕ್ತಿ. ಉತ್ಸವ್ ಗೆ ಶಕ್ತಿ ಆಗಲ್ಲ. ನನ್ನ  ತರ ಸಿನಿಮಾ ಮಾಡುವವರಿಗೆ ನಂಬಿಕೆ. ಮುಂದಿನ ಸಿನಿಮಾ ಮಾಡಲು ಪ್ರಕಾಶ್ ಸರ್ ಧೈರ್ಯ ಕೊಟ್ಟಿದ್ದಾರೆ ಎಂದರು.

 

ZEENEWS TRENDING STORIES

By continuing to use the site, you agree to the use of cookies. You can find out more by Tapping this link