ನನಸಾಗುವುದು ಸ್ವಂತ ಮನೆಯ ಕನಸು! ನಿಮ್ಮಲ್ಲಿ ಈ ದಾಖಲೆ ಇದ್ದರೆ ಮನೆ ನಿರ್ಮಾಣಕ್ಕೆ ಧನ ಸಹಾಯ ಮಾಡುವುದು ಕೇಂದ್ರ ಸರ್ಕಾರ

Wed, 25 Dec 2024-9:55 am,

ಆರ್ಥಿಕವಾಗಿ ದುರ್ಬಲವಾಗಿರುವ ಕುಟುಂಬಗಳಿಗೆ ಸ್ವಂತ ಮನೆಯ ಕನಸನ್ನು ನನಸಾಗಿಸಲು ಅವಕಾಶವನ್ನು ಒದಗಿಸುವುದು ಕೇಂದ್ರ ಸರ್ಕಾರದ ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಗ್ರಾಮೀಣ ಮತ್ತು ನಗರ ಪ್ರದೇಶದ ವಸತಿ ರಹಿತ ಕುಟುಂಬಗಳಿಗೆ ಈ ಯೋಜನೆಯ ಮೂಲಕ ಮನೆ ನೀಡಲಾಗುತ್ತದೆ. ಇದರ ಅಡಿಯಲ್ಲಿ ಸರ್ಕಾರವು ಫಲಾನುಭವಿಗಳಿಗೆ ಆರ್ಥಿಕ ನೆರವು ನೀಡುತ್ತದೆ. ಇದರ ಮೂಲಕ, ಈ ಕುಟುಂಬಗಳು ತಮಗಾಗಿ ಸುರಕ್ಷಿತ ಮತ್ತು ಸ್ವಂತ ಮನೆಗಳನ್ನು ನಿರ್ಮಿಸಿಕೊಳ್ಳಬಹುದು.

ಕೇಂದ್ರ ಸರ್ಕಾರ ಆರಂಭಿಸಿರುವ ಈ ಯೋಜನೆಯ ಹೆಸರು ಪ್ರಧಾನ ಮಂತ್ರಿ ಆವಾಸ್ ಯೋಜನೆ. ಯೋಜನೆಯ ಪ್ರಯೋಜನವನ್ನು ಪಡೆಯಬೇಕಾದರೆ ಕೆಲವೊಂದು ಅಂಶಗಳನ್ನು ಪೂರೈಸಬೇಕಾಗುತ್ತದೆ.

ಈ ಸಮೀಕ್ಷೆಯ ನಂತರ ಫಲಾನುಭವಿಯನ್ನು ಯೋಜನೆಗೆ ಆಯ್ಕೆ ಮಾಡಲಾಗುತ್ತದೆ.  ಈ ಸಮೀಕ್ಷೆಯಲ್ಲಿ ಹೆಸರಿಲ್ಲದವರು ಗ್ರಾಮ ಪಂಚಾಯತ್ ಕಾರ್ಯದರ್ಶಿ, ಗ್ರಾಮೀಣ ವಸತಿ ಸಹಾಯಕ ಮತ್ತು ಪಂಚಾಯತ್ ರೋಜ್ಕರ್ ಸೇವಕರ ಮೂಲಕ ಮುಂಬರುವ ಸಮೀಕ್ಷೆಯ ಸಮಯದಲ್ಲಿ ತಮ್ಮ ಹೆಸರನ್ನು ಸೇರಿಸಬಹುದು.

ಫಲಾನುಭವಿ ಈಗಾಗಲೇ ಶಾಶ್ವತ ಮನೆ ಹೊಂದಿರಬಾರದು.ಅವರ ಮಾಸಿಕ ಆದಾಯ ರೂ.15 ಸಾವಿರ ಮೀರಬಾರದು. ಫಲಾನುಭವಿಯ ಕ್ರೆಡಿಟ್ ಕಾರ್ಡ್ ಬಿಲ್ 50 ಸಾವಿರ ಮೀರಬಾರದು. ಅರ್ಜಿದಾರರು ಬೇರೆ ಯಾವುದೇ ಯೋಜನೆಯಡಿಯಲ್ಲಿ ವಸತಿ ಪಡೆದಿರಬಾರದು. 

ಈ ಯೋಜನೆಯಡಿ ಸರ್ಕಾರವು ಗ್ರಾಮೀಣ ಪ್ರದೇಶದ ಫಲಾನುಭವಿಗಳಿಗೆ ಮೂರು ಕಂತುಗಳಲ್ಲಿ 1.2 ಲಕ್ಷ ರೂ .ಮತ್ತು ನಗರ ಪ್ರದೇಶಗಳಲ್ಲಿ 2.5 ಲಕ್ಷದವರೆಗೆ ಸಹಾಯದ ಮೊತ್ತವನ್ನು ನೀಡಲಾಗುತ್ತದೆ. ಈ ಮೊತ್ತವನ್ನು ನೇರವಾಗಿ ಫಲಾನುಭವಿಯ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. 

ಯೋಜನೆಯ ಪಾರದರ್ಶಕತೆಯನ್ನು ಕಾಪಾಡಿಕೊಳ್ಳಲು, ಫಲಾನುಭವಿಗಳು ತಮ್ಮ ಹೆಸರನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸುವ ಸೌಲಭ್ಯವನ್ನು ಒದಗಿಸಲಾಗಿದೆ. ಫಲಾನುಭವಿಗಳು ತಮ್ಮ ಹೆಸರನ್ನು ಪರಿಶೀಲಿಸಲು pmayg.nic.in ಗೆ ಭೇಟಿ ನೀಡುವ  ಮೂಲಕ ಪರಿಶೀಲಿಸಿಕೊಳ್ಳಬಹುದು.   

ಹೆಸರು ಲಭ್ಯವಿದೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಲು, ಮೊದಲು Prammantri Awas Yojana (pmaymis.gov.in) ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.ಮುಖಪುಟದಲ್ಲಿ ಸಿಟಿಜನ್ ಅಸೆಸ್ಮೆಂಟ್ ಆಯ್ಕೆಯ ಮೇಲೆ ಕ್ಲಿಕ್ ಮಾಡಿ. ಅಲ್ಲಿ ನೀವು ಮೂರು ಆಯ್ಕೆಗಳಲ್ಲಿ ಒಂದನ್ನು ಆರಿಸಬೇಕಾಗುತ್ತದೆ.ನಿಮ್ಮ ಆಧಾರ್ ಕಾರ್ಡ್ ಸಂಖ್ಯೆಯನ್ನು ನಮೂದಿಸಬೇಕು.ನಂತರ ಚೆಕ್ ಮೇಲೆ ಕ್ಲಿಕ್ ಮಾಡಿ.ಇಲ್ಲಿ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದೀರಾ ಎನ್ನುವ ಮಾಹಿತಿ ತಿಳಿಯುತ್ತದೆ. 

ZEENEWS TRENDING STORIES

By continuing to use the site, you agree to the use of cookies. You can find out more by Tapping this link