ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ಈ ಭಾಗಗಳಲ್ಲಿ 2 ದಿನ ಗುಡುಗು-ಮಿಂಚು ಸಹಿತ ಕುಂಭದ್ರೋಣ ಮಳೆ ಭೀತಿ
ಮಳೆಯ ಜೊತೆಗೆ ಹಲವೆಡೆ ಆಲಿಕಲ್ಲು ಮಳೆಯೂ ಸುರಿದಿದ್ದು, ಜೋರಾದ ಗಾಳಿ ಬೀಸಿದೆ.
ಹವಾಮಾನ ಇಲಾಖೆ (IMD) ಅಂದಾಜಿನ ಪ್ರಕಾರ ಮುಂದಿನ 2 ದಿನಗಳ ಕಾಲ ಕೆಲವೆಡೆ ಭಾರೀ ಮಳೆಯಾಗಲಿದೆ. ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದೇ ಕಾರಣದಿಂದ ಕುಂಭದ್ರೋಣ ಮಳೆ ಬೀಳುವ ಮುನ್ನೆಚ್ಚರಿಕೆ ಇದೆ.
ಆದರೆ ಹಿಮಾಚಲ ಪ್ರದೇಶ, ಉತ್ತರಾಖಂಡ, ಜಮ್ಮು ಕಾಶ್ಮೀರ, ಲಡಾಖ್, ಸಿಕ್ಕಿಂ, ಅರುಣಾಚಲ ಪ್ರದೇಶದಂತಹ ಗುಡ್ಡಗಾಡು ರಾಜ್ಯಗಳಲ್ಲಿ ಸಂಪೂರ್ಣ ಚಳಿ ಶುರುವಾಗಿದೆ.
ಹವಾಮಾನ ಇಲಾಖೆಯ ಪ್ರಕಾರ ಆಗ್ನೇಯ ಅರೇಬಿಯನ್ ಸಮುದ್ರ ಮತ್ತು ಪಕ್ಕದ ಲಕ್ಷದ್ವೀಪ ಪ್ರದೇಶದ ಮೇಲೆ ಸರಾಸರಿ ಮಟ್ಟಕ್ಕಿಂತ 3.1 ಕಿ.ಮೀ ವರೆಗೆ ಚಂಡಮಾರುತದ ಪರಿಚಲನೆ ವಿಸ್ತರಿಸಿದೆ. ಮುಂದಿನ 24 ಗಂಟೆಗಳಲ್ಲಿ ಆಗ್ನೇಯ ಮತ್ತು ಪಕ್ಕದ ಪೂರ್ವ ಮಧ್ಯ ಅರೇಬಿಯನ್ ಸಮುದ್ರದ ಮೇಲೆ ಕಡಿಮೆ ಒತ್ತಡದ ಪ್ರದೇಶವು ಸೃಷ್ಟಿಯಾಗುವ ಸಾಧ್ಯತೆಯಿದೆ.
ಖಾಸಗಿ ಹವಾಮಾನ ಏಜೆನ್ಸಿ ಸ್ಕೈಮೆಟ್ ಪ್ರಕಾರ ಮುಂದಿನ 24 ಗಂಟೆಗಳಲ್ಲಿ ರಾಜಸ್ಥಾನ, ಪಂಜಾಬ್ ಮತ್ತು ಹರಿಯಾಣದ ಕೆಲವು ಭಾಗಗಳಲ್ಲಿ ಲಘುವಾಗಿ ಸಾಧಾರಣ ಮಳೆಯೊಂದಿಗೆ ಆಲಿಕಲ್ಲು ಮಳೆ ಬೀಳಬಹುದು.