Apple Benefits: ರಕ್ತದೊತ್ತಡದಿಂದ ತೂಕ ನಷ್ಟದವರೆಗೆ.. ಸೇಬು ತಿಂದರೆ ಸಿಗುತ್ತೆ ಇಷ್ಟೆಲ್ಲಾ ಲಾಭ!
ಆಪಲ್ ಕಡಿಮೆ ಕ್ಯಾಲೋರಿಯುಕ್ತ ಹಣ್ಣುಗಳಲ್ಲಿ ಒಂದಾಗಿದೆ. ಮಧ್ಯಮ ಗಾತ್ರದ ಒಂದು ಸೇಬು ಕೇವಲ 60 ಕ್ಯಾಲೊರಿಗಳನ್ನು ಹೊಂದಿರುತ್ತದೆ. ಅಂದರೆ ಇದನ್ನು ಸೇವಿಸುವುದರಿಂದ ತೂಕ ಅಥವಾ ಸಕ್ಕರೆ ಪ್ರಮಾಣ ಹೆಚ್ಚಾಗುವುದಿಲ್ಲ.
ಸೇಬು ಹಣ್ಣಿನ ಜ್ಯೂಸ್ ಸಹ ಆರೋಗ್ಯಕ್ಕೆ ಉತ್ತಮ. ಇದರಿಂದ ದೇಹದ ಶಕ್ತಿ ಹೆಚ್ಚಾಗುವುದು.
ಸೇಬುಗಳಲ್ಲಿ ಫೈಬರ್ ಅಧಿಕವಾಗಿರುತ್ತದೆ. ಇದು ಹೊಟ್ಟೆ ಬೇಗನೆ ಹಸಿವಾಗದಂತೆ ತಡೆಯುತ್ತದೆ. ಇದು ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸುತ್ತದೆ.
ಸೇಬಿನಲ್ಲಿ ಆ್ಯಂಟಿಆಕ್ಸಿಡೆಂಟ್‌ಗಳು ಹೆಚ್ಚಿವೆ ಎನ್ನುತ್ತಾರೆ ಆರೋಗ್ಯ ತಜ್ಞರು. ಇದು ಅನೇಕ ದೀರ್ಘಕಾಲದ ಕಾಯಿಲೆಗಳನ್ನು ತಡೆಯಲು ಸಹಾಯ ಮಾಡುತ್ತದೆ. ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.
ಸೇಬುಗಳನ್ನು ಸೇವಿಸುವುದರಿಂದ ಮಧುಮೇಹ ರೋಗಿಗಳಿಗೆ ಆರೋಗ್ಯ ಪ್ರಯೋಜನಗಳಿವೆ. ಹೆಚ್ಚಿನ ಫೈಬರ್ ಮತ್ತು ಕಡಿಮೆ ಸಕ್ಕರೆ ಹೊಂದಿರುವ ಕಾರಣ ಗ್ಲೂಕೋಸ್ ಮಟ್ಟವನ್ನು ಸ್ಥಿರವಾಗಿರಿಸಿಕೊಳ್ಳುತ್ತದೆ.
ಅಧಿಕ ರಕ್ತದೊತ್ತಡಕ್ಕೂ ಸೇಬು ತಿನ್ನುವುದು ಪ್ರಯೋಜನಕಾರಿ. ಅನೇಕ ಅಧ್ಯಯನಗಳು ಸೇಬುಗಳನ್ನು ತಿನ್ನುವುದು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಕಂಡುಹಿಡಿದಿದೆ.
ಸೇಬುಗಳು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ ಎಂದು ತಿಳಿದುಬಂದಿದೆ. ಈ ಸೇಬು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಸೂಚನೆ: ಈ ಲೇಖನ ಬರೆಯುವಲ್ಲಿ ನಾವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯ ಸಹಾಯವನ್ನು ಪಡೆದಿದ್ದೇವೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ಪಡೆಯಬೇಕು. ಈ ಮಾಹಿತಿಯನ್ನು ಜೀ ಮೀಡಿಯಾ ಖಚಿತಪಡಿಸುವುದಿಲ್ಲ.