T20 World Cup: ವಿಶ್ವಕಪ್ ಕದನದಲ್ಲಿ ಬಲಿಷ್ಠ ತಂಡಗಳ ವಿರುದ್ಧ ಅಬ್ಬರಿಸಲಿರುವ ಸ್ಟಾರ್ ಆಟಗಾರರು

ಪಾಕ್ ಎದುರಿಸಲು ಕೊಹ್ಲಿ ನೇತೃತ್ವದ ಭಾರತ ತಂಡ ಸಂಪೂರ್ಣ ಸಿದ್ಧವಾಗಿದೆ. ಟೀಂ ಇಂಡಿಯಾದಲ್ಲಿ ಬದಲಾವಣೆಯ ಸಾಧ್ಯತೆಗಳು ತೀರಾ ಕಡಿಮೆ.

ಭಾನುವಾರ ಸಂಜೆ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್‌ನ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಸಾಂಪ್ರದಾಯಿಕ ಬದ್ಧ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ. ಈ ಎರಡೂ ತಂಡಗಳು ಐಸಿಸಿ ಟೂರ್ನಿಗಳಲ್ಲಿ ಮಾತ್ರ ಮುಖಾಮುಖಿಯಾಗುತ್ತಿವೆ. ಹೀಗಿರುವಾಗ ಇಡೀ ವಿಶ್ವದ ಕಣ್ಣು ಈ ಎರಡು ತಂಡಗಳ ಮೇಲಿರುತ್ತದೆ. ಪಾಕ್ ಎದುರಿಸಲು ಕೊಹ್ಲಿ ನೇತೃತ್ವದ ಭಾರತ ತಂಡ ಸಂಪೂರ್ಣ ಸಿದ್ಧವಾಗಿದೆ. ಟೀಂ ಇಂಡಿಯಾದಲ್ಲಿ ಬದಲಾವಣೆಯ ಸಾಧ್ಯತೆಗಳು ತೀರಾ ಕಡಿಮೆ. ಬಲಿಷ್ಠ ತಂಡಗಳ ವಿರುದ್ಧ ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಭರ್ಜರಿ ಪ್ರದರ್ಶನ ನೀಡಲಿರುವ ಟಾಪ್ ಆಟಗಾರರ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಈ ಆಟಗಾರರು ಹಿಂದಿನ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಗಮನಾರ್ಹ ಪ್ರದರ್ಶನ ನೀಡಿ ಗಮನ ಸೆಳೆದಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

1 /6

‘ರನ್ ಮಷಿನ್’ ಖ್ಯಾತಿಯ ವಿರಾಟ್ ಕೊಹ್ಲಿ ಆಕ್ರಮಣಕಾರಿ ಆಟಕ್ಕೆ ಹೆಸರುವಾಸಿಯಾಗಿದ್ದಾರೆ. ಯಾವುದೇ ರೀತಿಯ ಬಲಿಷ್ಠ ತಂಡದ ವಿರುದ್ಧವೂ ಸ್ಫೋಟಕ ಬ್ಯಾಟಿಂಗ್ ಮಾಡುವ, ಅತ್ಯುತ್ತಮ ಪ್ರದರ್ಶನ ನೀಡುವ ಸಾಮರ್ಥ್ಯವನ್ನು ಕೊಹ್ಲಿ ಹೊಂದಿದ್ದಾರೆ. ಪ್ರಸಕ್ತ ಟಿ-20 ಟೂರ್ನಿಯಲ್ಲಿಯೂ ಪಾಕ್ ಸೇರಿದಂತೆ ಬಲಿಷ್ಠ ತಂಡಗಳ ವಿರುದ್ಧ ಕೊಹ್ಲಿ ಅಬ್ಬರಿಸುವ ಸಾಧ್ಯತೆ ಇದೆ.  

2 /6

ರೋಹಿತ್ ಶರ್ಮಾರಂತೆ ಆರಂಭಿಕ ಆಟಗಾರ, ಕನ್ನಡಿಗ ಕೆ.ಎಲ್.ರಾಹುಲ್ ಕೂಡ ಪ್ರಸಕ್ತ ವಿಶ್ವಕಪ್ ಟೂರ್ನಿಯಲ್ಲಿ ಮಿಂಚುವ ಸಾಧ್ಯತೆ ಇದೆ. ಸ್ಫೋಟಕ ಬ್ಯಾಟಿಂಗ್ ಮಾಡುವ ರಾಹುಲ್ ಐಪಿಎಲ್ ನಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದರು. ಪಂಜಾಬ್ ಕಿಂಗ್ಸ್ ತಂಡದ ನಾಯಕರಾಗಿದ್ದ ರಾಹುಲ್ ಸದ್ಯ ಉತ್ತಮ ಫಾರ್ಮ್ ನಲ್ಲಿದ್ದಾರೆ.

3 /6

ರೋಹಿತ್ ಶರ್ಮಾರಂತೆ ಆರಂಭಿಕ ಆಟಗಾರ, ಕನ್ನಡಿಗ ಕೆ.ಎಲ್.ರಾಹುಲ್ ಕೂಡ ಪ್ರಸಕ್ತ ವಿಶ್ವಕಪ್ ಟೂರ್ನಿಯಲ್ಲಿ ಮಿಂಚುವ ಸಾಧ್ಯತೆ ಇದೆ. ಸ್ಫೋಟಕ ಬ್ಯಾಟಿಂಗ್ ಮಾಡುವ ರಾಹುಲ್ ಐಪಿಎಲ್ ನಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದರು. ಪಂಜಾಬ್ ಕಿಂಗ್ಸ್ ತಂಡದ ನಾಯಕರಾಗಿದ್ದ ರಾಹುಲ್ ಸದ್ಯ ಉತ್ತಮ ಫಾರ್ಮ್ ನಲ್ಲಿದ್ದಾರೆ.

4 /6

ಭಾರತ ತಂಡದ ಬಹುದೊಡ್ಡ ಶಕ್ತಿ ಎಂದೇ ಪರಿಗಣಿತವಾಗಿರುವ ಯುವ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಮೇಲೆಯೂ ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಹೆಚ್ಚಿನ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಎದುರಾಳಿ ತಂಡದ ಬ್ಯಾಟ್ಸ್ ಮನ್ ಗಳಿಗೆ ನಡುಕ ಹುಟ್ಟಿಸುವ ಬೌಲಿಂಗ್ ಪ್ರದರ್ಶನ ಅವರಿಂದ ಬರುವ ನಿರೀಕ್ಷೆ ಇದೆ. ತಮ್ಮ ಅಪಾಯಕಾರಿ ಯಾರ್ಕರ್ ಗಳ ಮೂಲಕ ಬೂಮ್ ಬೂಮ್ ಬುಮ್ರಾ ಎದುರಾಳಿ ತಂಡವನ್ನು ಕಟ್ಟಿಹಾಕುವ ಸಾಮರ್ಥ್ಯವನ್ನು ಹೊಂದಿದ್ದಾರೆ.

5 /6

ವಿಶ್ವದ ಅತ್ಯುತ್ತಮ ಆಲ್ ರೌಂಡರ್ ಗಳಲ್ಲಿ ಒಬ್ಬರಾಗಿರುವ ರವೀಂದ್ರ ಜಡೇಜಾ ಕೂಡ ಪ್ರಸಕ್ತ ವಿಶ್ವಕಪ್ ಟೂರ್ನಿಯಲ್ಲಿ ಮಿಂಚುವುದರಲ್ಲಿ ಡೌಟೇ ಇಲ್ಲ. ಬ್ಯಾಟಿಂಗ್, ಬೌಲಿಂಗ್ ಮತ್ತು ಫೀಲ್ಡಿಂಗ್ ಹೀಗೆ ಎಲ್ಲದರಲ್ಲಿಯೂ ಸರ್ ಜಡೇಜಾ ಅತ್ಯುತ್ತಮ ಪ್ರದರ್ಶನ ನೀಡುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಇವರು ಕೂಡ ಟೀಂ ಇಂಡಿಯಾದ ಶಕ್ತಿಯಾಗಿದ್ದಾರೆ.

6 /6

ವರುಣ್ ಚಕ್ರವರ್ತಿ ಒಬ್ಬ ಅದ್ಭುತ ಸ್ಪಿನ್ನರ್ ಎಂದು ಹೇಳಲಾಗುತ್ತದೆ. 14ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಫೈನಲ್ ಪ್ರವೇಶಿಸುವಲ್ಲಿ ವರುಣ್ ಪ್ರಮುಖ ಪಾತ್ರ ನಿರ್ವಹಿಸಿದ್ದರು. ತಮ್ಮ ಅದ್ಭುತ ಬೌಲಿಂಗ್ ಮೂಲಕ ಎದುರಾಳಿ ತಂಡಕ್ಕೆ ಆಘಾತ ನೀಡುವ ಸಾಮರ್ಥ್ಯವನ್ನು ವರುಣ್ ಹೊಂದಿದ್ದಾರೆ. ಪ್ರಸಕ್ತ ಟಿ-20 ವಿಶ್ವಕಪ್ ನಲ್ಲಿ ಅದ್ಭುತ ಪ್ರದರ್ಶನ ನೀಡುವ ಸಾಧ್ಯತೆ ಇದೆ.