IND vs SL: ಟಿ20 ಕ್ರಿಕೆಟ್‌ನಲ್ಲಿ ಶ್ರೀಲಂಕಾ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಆಟಗಾರರು

IND vs SL: ಈ ಫೋಟೋ ಗ್ಯಾಲರಿಯಲ್ಲಿ ಟಿ20 ಕ್ರಿಕೆಟ್‌ನಲ್ಲಿ ಶ್ರೀಲಂಕಾ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಆಟಗಾರರ ಬಗ್ಗೆ ತಿಳಿಯೋಣ.

IND vs SL: ಏಕದಿನ ವಿಶ್ವಕಪ್‌ನಲ್ಲಿ ಭಾರತ 2011ರಲ್ಲಿ  ಶ್ರೀಲಂಕಾ ತಂಡವನ್ನು 6 ವಿಕೆಟ್‌ಗಳಿಂದ ಮಣಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತ್ತು. ಇದೀಗ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಟೀಂ ಇಂಡಿಯಾ ಶ್ರೀಲಂಕಾ ವಿರುದ್ಧ ಮೂರು ಟಿ20 ಪಂದ್ಯಗಳ ಸರಣಿಯನ್ನು ಆಡಲು ಸಜ್ಜಾಗಿದೆ. ಈ ಸಮಯದಲ್ಲಿ ಟಿ20 ಕ್ರಿಕೆಟ್‌ನಲ್ಲಿ ಶ್ರೀಲಂಕಾ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಆಟಗಾರರ ಬಗ್ಗೆ ತಿಳಿಯೋಣ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ರೋಹಿತ್ ಶರ್ಮಾ:  ಟೀಂ ಇಂಡಿಯಾ ಕ್ರಿಕೆಟ್‌ನ ನಿಯಮಿತ ನಾಯಕ ರೋಹಿತ್ ಶರ್ಮಾ ಶ್ರೀಲಂಕಾ ಕ್ರಿಕೆಟ್ ತಂಡದ ವಿರುದ್ಧ ಅತಿ ಹೆಚ್ಚು ರನ್ ಗಳಿಕೆಯ ದಾಖಲೆ ಹೊಂದಿದ್ದಾರೆ. ಇದುವರೆಗೂ ಶ್ರೀಲಂಕಾ ತಂಡದ ವಿರುದ್ದ 19 ಪಂದ್ಯಗಳನ್ನು ಆಡಿರುವ ಇವರು ಒಟ್ಟು 411 ರನ್ ಗಳಿಸಿ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

2 /5

ಶಿಖರ್ ಧವನ್:  ಕ್ರಿಕೆಟ್‌ನಲ್ಲಿ ಶ್ರೀಲಂಕಾ ತಂಡದ ವಿರುದ್ಧ 12 ಪಂದ್ಯಗಳಲ್ಲಿ 375 ರನ್ ಗಳಿಸಿರುವ ಶಿಖರ್ ಧವನ್ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

3 /5

ವಿರಾಟ್ ಕೊಹ್ಲಿ: ಶ್ರೀಲಂಕಾ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ ಟೀಂ ಇಂಡಿಯಾ ಆಟಗಾರರಲ್ಲಿ ರನ್ ಮಿಶನ್ ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಇವರು ಶ್ರೀಲಂಕಾ ವಿರುದ್ಧ 8 ಪಂದ್ಯಗಳನ್ನು ಆಡಿದ್ದು ಇದರಲ್ಲಿ 339 ರನ್ ಗಳಿಸಿದ್ದಾರೆ. 

4 /5

ಕೆ.ಎಲ್. ರಾಹುಲ್: ಟೀಂ ಇಂಡಿಯಾದಲ್ಲಿ ಉತ್ತಮ ಆಟಗಾರರಾಗಿ ಗುರುತಿಸಿಕೊಂಡಿರುವ ಹೆಮ್ಮೆಯ ಕನ್ನಡಿಗ ಕೆ.ಎಲ್. ರಾಹುಲ್ ಶ್ರೀಲಂಕಾ ವಿರುದ್ಧ ಇದುವರೆಗೂ 9 ಪಂದ್ಯಗಳನ್ನು ಆಡಿದ್ದು  301 ರನ್ ಗಳಿಸಿದ್ದಾರೆ. ಈ ಮೂಲಕ ಅವರು ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನವನ್ನು ಅಲಂಕರಿಸಿದ್ದಾರೆ.

5 /5

ಶ್ರೇಯಸ್ ಅಯ್ಯರ್:  ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ಆಗಿರುವ ಶ್ರೇಯಸ್ ಅಯ್ಯರ್ ಶ್ರೀಲಂಕಾ ವಿರುದ್ಧ 9 ಪಂದ್ಯಗಳಲ್ಲಿ 296 ರನ್ ಗಳಿಸಿದ್ದಾರೆ. ಈ ಮೂಲಕ ಅವರು ಈ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದಾರೆ.