ಮಹಿಳಾ ಕ್ರಿಕೆಟ್ ನಲ್ಲಿ ಇತಿಹಾಸ ರಚಿಸಿದ ಭಾರತ, 603ರನ್ ಗಳ ದಾಖಲೆ ಬರೆದ ಹರ್ಮನ್ ಪ್ರೀತ್ ಕೌರ್ ಪಡೆ!!
ಭಾರತೀಯ ಕ್ರಿಕೆಟ್ ತಂಡ ಮಹಿಳಾ ಟೆಸ್ಟ್ ಕ್ರಿಕೆಟ್ ನಲ್ಲಿ ಹೊಸ ದಾಖಲೆಯೊಂದನ್ನು ಬರೆದಿದೆ. ಎಂ ಎ ಚಿದಂಬರಂ ಕ್ರೀಡಾಂಗಣದಲ್ಲಿ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಮೊದಲ ಇನ್ನಿಂಗ್ಸ್ ನಲ್ಲಿ 6 ವಿಕೆಟ್ ಕಳೆದುಕೊಳ್ಳುವ ಮೂಲಕ 603 ರನ್ ಗಳಿಸಿ ಡಿಕ್ಲೇರ್ ಘೋಷಿಸಿತು.
603ರನ್ ಗಳಿಸುವ ಮೂಲಕ ಮಹಿಳಾ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಗೆ ಭಾರತ ಮಹಿಳಾ ಕ್ರಿಕೆಟ್ ತಂಡ ಪಾತ್ರವಾಗಿದೆ.
ಈ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಮೊದಲ ದಿನ 4 ವಿಕೆಟ್ ಕಳೆದುಕೊಳ್ಳುವ ಮೂಲಕ 525 ರನ್ ಗಳಿಸಿತು, ಇದು ಕೂಡ ಒಂದೇ ದಿನದಲ್ಲಿ ದಾಖಲಾದ ಗರಿಷ್ಠ ಮೊತ್ತದ ರನ್ ಆಗಿದೆ.
ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಆಟಗಾರ್ತಿ ಶಫಾಲಿ ವರ್ಮ ಮೊದಲ ದಿನದ ಆಟದಲ್ಲಿ 194 ಎಸೆತಗಳಲ್ಲಿ 205 ರನ್ ಗಳಿಸುವ ಮೂಲಕ ಅತಿ ವೇಗದ ದ್ವೀಶತಕ ಬಾರಿಸಿದ ಆಟಗಾರ್ತಿ ಎಂಬ ಹಿರಿಮೆಗೆ ಪಾತ್ರರಾಗಿದ್ದಾರ
ಈ ಮೂಲಕ ಭಾರತ ಮಹಿಳಾ ತಂಡ ಮಹಿಳಾ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ಮತ್ತು 600ಕ್ಕೂ ಹೆಚ್ಚು ರನ್ ಗಳಿಸಿದ ಮೊದಲ ತಂಡ ಎಂಬ ಕೀರ್ತಿಗೆ ಪಾತ್ರವಾಗುವ ಮೂಲಕ ಐತಿಹಾಸಿಕ ಕ್ಷಣವನ್ನು ನಿರ್ಮಾಣ ಮಾಡಿದ್ದಾರೆ