Photo Gallery: ಭಾರತದ ಆಲ್ರೌಂಡ್ ಪ್ರದರ್ಶನಕ್ಕೆ ಶರಣಾದ ಇಂಗ್ಲೆಂಡ್ ತಂಡ
ಭಾರತದ ಆಲ್ ರೌಂಡರ್ ರವೀಂದ್ರ ಜಡೇಜಾ ಕೇವಲ 29 ಎಸೆತಗಳಲ್ಲಿ ಐದು ಬೌಂಡರಿಗಳ ನೆರವಿನಿಂದ 46 ರನ್ ಗಳಿಸಿದರು.
ರಿಷಬ್ ಪಂತ್ ತಮ್ಮ T20I ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಬ್ಯಾಟಿಂಗ್ ಆರಂಭಿಸಿದರು. ಸೌತ್ ಪಾವ್ 15 ಎಸೆತಗಳಲ್ಲಿ ನಾಲ್ಕು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 26 ರನ್ ಗಳಿಸಿದರು.
ಟಿ20 ಅಂತರಾಷ್ಟ್ರೀಯ ಚೊಚ್ಚಲ ಪಂದ್ಯವನ್ನಾಡಿದ ಇಂಗ್ಲೆಂಡ್ ವೇಗಿ ರಿಚರ್ಡ್ ಗ್ಲೀಸನ್ ಈ ಪಂದ್ಯದಲ್ಲಿ ಮೂರು ವಿಕೆಟ್ ಪಡೆದರು. ಅವರು ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ರಿಷಬ್ ಪಂತ್ ಅವರನ್ನು ಔಟ್ ಮಾಡಿದರು.
ಲಿಯಾಮ್ ಲಿವಿಂಗ್‌ಸ್ಟೋನ್ ಮತ್ತು ಸ್ಯಾಮ್ ಕರ್ರಾನ್ ಅವರನ್ನು ಔಟ್ ಮಾಡುವ ಮೂಲಕ ಜಸ್ಪ್ರೀತ್ ಬುಮ್ರಾ ಎರಡು ಪ್ರಮುಖ ವಿಕೆಟ್ ಪಡೆದರು.