India vs England 3rd Test: ಅಭ್ಯಾಸ ಆರಂಭಿಸಿದ ಕೊಹ್ಲಿ ಅಂಡ್ ಕಂಪನಿ
)
ಆಂಗ್ಲರ ವಿರುದ್ಧ ಸರಣಿ ಗೆಲ್ಲುವ ಗುರಿಯೊಂದಿಗೆ 3ನೇ ಟೆಸ್ಟ್ ಪಂದ್ಯಕ್ಕೆ ಕಣಕ್ಕಿಳಿಯಲು ಕೊಹ್ಲಿ ಪಡೆ ಸಜ್ಜಾಗಿದೆ. ನಾಯಕ ಕೊಹ್ಲಿ, ಉಪನಾಯಕ ಅಜಿಂಕ್ಯ ರಹಾನೆ, ಹಿಟ್ ಮ್ಯಾನ್ ರೋಹಿತ್ ಶರ್ಮಾ, ಕನ್ನಡಿಗ ಕೆ.ಎಲ್.ರಾಹುಲ್ ಹಾಗೂ ವಿಕೇಟ್ ಕೀಪರ್ ಬ್ಯಾಟ್ಸ್ ಮನ್ ರಿಷಬ್ ಪಂತ್ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿದ್ದಾರೆ.
)
ಟೀಂ ಇಂಡಿಯಾದ ಪ್ರಮುಖ ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ, ಸ್ವಿನ್ನರ್‌ಗಳಾದ ರವೀಚಂದ್ರನ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಮೈದಾನದಲ್ಲಿ ಬೆವರು ಹರಿಸಿದರು.
)
ಬರೋಬ್ಬರಿ 19 ವರ್ಷಗಳ ನಂತರ ಟೀ ಇಂಡಿಯಾ ಹೆಡಿಂಗ್ಲೆಯಲ್ಲಿ ಟೆಸ್ಟ್ ಪಂದ್ಯವನ್ನು ಆಡಲು ಸಜ್ಜಾಗಿದೆ. 2002ರಲ್ಲಿ ಭಾರತ ಇಲ್ಲಿ ತನ್ನ ಕೊನೆಯ ಟೆಸ್ಟ್ ಪಂದ್ಯವನ್ನು ಆಡಿತ್ತು. ಆ ಟೆಸ್ಟ್ ಪಂದ್ಯದಲ್ಲಿ ಭಾರತ ಇನ್ನಿಂಗ್ಸ್ ಹಾಗೂ 46 ರನ್‌ಗಳಿಂದ ಜಯ ದಾಖಲಿಸಿತ್ತು.
ಟ್ರೇಂಟ್‌ಬ್ರಿಡ್ಜ್ ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಮೇಲುಗೈ ಸಾಧಿಸಿದ್ದ ಭಾರತ ಸುಲಭವಾಗಿ ಗೆಲುವು ದಾಖಲಿಸಬಹುದಿತ್ತು. ಆದರೆ ಆ ಪಂದ್ಯ ಡ್ರಾನಲ್ಲಿ ಅಂತ್ಯ ಕಂಡಿತು. ಲಂಡನ್‌ನ ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದ 5ನೇ ಹಾಗೂ ಕೊನೆಯ ದಿನದಾಟದಲ್ಲಿ ನಾಟಕೀಯ ತಿರುವು ಪಡೆದು ಡ್ರಾ ಹಾದಿ ಹಿಡಿದಿದ್ದ ಟೆಸ್ಟ್ ಪಂದ್ಯದಲ್ಲಿ ಭಾರತ ಗೆಲುವು ದಾಖಲಿಸಿ ಐತಿಹಾಸಿಕ ಸಾಧನೆಯೊಂದಿಗೆ ಸರಣಿಯಲ್ಲಿ 1-0 ರ ಮುನ್ನಡೆ ಸಾಧಿಸಿತು. ಇದೀಗ ಸರಣಿ ಗೆಲುವಿನ ಮೇಲೆ ಕಣ್ಣು ಇಟ್ಟಿರುವ ಕೊಹ್ಲಿ ಪಡೆ ಆ ನಿಟ್ಟಿನಲ್ಲಿ ತಯಾರಿ ನಡೆಸಿದೆ.
ಭಾರತದ ವೇಗದ ಬೌಲರ್ ಶಾರ್ದೂಲ್ ಠಾಕೂರ್ 3ನೇ ಟೆಸ್ಟ್ ಗೆ ಫಿಟ್ ಆಗಿದ್ದಾರೆ. ಆದರೆ ಇನ್ನೂ ಅವರಿಗೆ ಇಲೆವೆನ್‌ನಲ್ಲಿ ಸ್ಥಾನ ಖಾತರಿಯಾಗಿಲ್ಲ. ಶಾರ್ದೂಲ್ ಫಿಟ್ ಅಂಡ್ ಫೈನ್ ಆಗಿದ್ದು ಆಂಗ್ಲರ ವಿರುದ್ಧ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಈ ಬಗ್ಗೆ ಯೋಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಅಂತಾ ಟೀಂ ಇಂಡಿಯಾ ಉಪನಾಯಕ ಅಜಿಂಕ್ಯ ರಹಾನೆ ಹೇಳಿದ್ದಾರೆ.