ಮಧುಮೇಹದಿಂದ ತೂಕ ಇಳಿಕೆವರೆಗೆ ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿ ತಿನ್ನುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ
ಬೆಟ್ಟದ ನೆಲ್ಲಿಕಾಯಿ ಅಥವಾ ಆಮ್ಲಾದಲ್ಲಿ ವಿಟಮಿನ್ ಸಿ, ಟ್ಯಾನಿನ್, ರಂಜಕ, ಕಬ್ಬಿಣ ಮತ್ತು ಕ್ಯಾಲ್ಸಿಯಂ ಹೇರಳವಾಗಿದ್ದು ಇದು ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿ ಆಗಿದೆ.
ಪ್ರತಿ ದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿಯನ್ನು ನೇರವಾಗಿ ತಿನ್ನುವುದರಿಂದ ಅಥವಾ ಅದರ ಜ್ಯೂಸ್ ತಯಾರಿಸಿ ಕುಡಿಯುವುದರಿಂದ ಇದು ಸರ್ವತೋಮುಖ ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ಸಾಬೀತುಪಡಿಸಲಿದೆ.
ಆಮ್ಲಾ ಜ್ಯೂಸ್ ನಲ್ಲಿ ಚಿಟಿಕೆ ಅರಿಶಿನ ಬೆರೆಸಿ ನಿತ್ಯ ಸೇವಿಸುವುದರಿಂದ ಮಧುಮೇಹಿಗಳಲ್ಲಿ ಎಂದಿಗೂ ಕೂಡ ಬ್ಲಡ್ ಶುಗರ್ ಹೆಚ್ಚಾಗುವುದಿಲ್ಲ ಎನ್ನಲಾಗುತ್ತದೆ.
ಬೆಟ್ಟದ ನೆಲ್ಲಿಕಾಯಿಯನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಇದು ಅಧಿಕ ರಕ್ತದೊತ್ತಡ ಸಮಸ್ಯೆಯಿಂದಲೂ ಪರಿಹಾರ ನೀಡುತ್ತದೆ.
ನಿತ್ಯ ನೆಲ್ಲಿಕಾಯಿ ತಿನ್ನುವುದರಿಂದ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗಿ ಹೃದ್ರೋಗದ ಅಪಾಯವನ್ನು ತಪ್ಪಿಸಬಹುದು.
ಬೆಟ್ಟದ ನೆಲ್ಲಿಕಾಯಿಯ ಬಳಕೆಯು ಚರ್ಮ ಸಮಸ್ಯೆಗಳಿಂದ ರಕ್ಷಣೆ ನೀಡಿ ಸೌಂದರ್ಯವನ್ನು ವೃದ್ಧಿಸುತ್ತದೆ.
ನಿಯಮಿತವಾಗಿ ಬೆಟ್ಟದ ನೆಲ್ಲಿಕಾಯಿ ತಿನ್ನುವುದರಿಂದ ಅಥವಾ ಇದರ ಜ್ಯೂಸ್ ಕುಡಿಯುವುದರಿಂದ ದೃಷ್ಟಿ ಸಂಬಂಧಿತ ಸಮಸ್ಯೆಗಳಿಂದ ಪರಿಹಾರ ಪಡೆಯಬಹುದು.
ನಿತ್ಯ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕರವಾಗಿ ವೇಗವಾಗಿ ತೂಕ ಇಳಿಸಬಹುದು.
ನಿತ್ಯ ನೆಲ್ಲಿಕಾಯಿ ಬಳಕೆಯಿಂದ ಕೂದಲುದುರುವಿಕೆ, ಅಜೀರ್ಣ, ಅಸಿಡಿಟಿ, ಥೈರಾಯ್ಡ್ ಸಮಸ್ಯೆಗಳಿಂದಲೂ ಪರಿಹಾರ ಪಡೆಯಬಹುದು.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.