IND vs SL: ಶ್ರಿಲಂಕಾ ವಿರುದ್ಧದ ಪಂದ್ಯಕ್ಕೆ ಕಪ್ಪು ಪಟ್ಟಿ ಧರಿಸಿ ಫೀಲ್ಡ್‌ಗೆ ಎಂಟ್ರಿ ಕೊಟ್ಟ ಟೀಂ ಇಂಡಿಯಾ ಆಟಗಾರರು..ಕಾರಣ ಏನು ಗೊತ್ತಾ..?
ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ತಮ್ಮ ಕೈಗಳಿಗೆ ಕಪ್ಪು ಪಟ್ಟಿಯನ್ನು ಧರಿಸಿದ್ದರು. ಭಾರತದ ಆಟಗಾರರು ಕೈಗೆ ಕಪ್ಪು ಪಟ್ಟಿ ಧರಿಸಿದ್ದು ಏಕೆ..?ಎಂದು ಅನೇಕ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಇದಕ್ಕೆ ಕಾರಣ ಏನು ಎಂದು ತಿಳಿಯಲು ಮುಂದೆ ಓದಿ..
ಮಾಜಿ ಆಟಗಾರ ಮತ್ತು ಭಾರತ ತಂಡದ ಮಾಜಿ ಕೋಚ್ ಅಂಶುಮಾನ್ ಗಾಯಕ್ವಾಡ್ (71) ಕಳೆದ ಬುಧವಾರ ನಿಧನರಾದರು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಅನೇಕ ದಿನಗಳ ಹೋರಾಟದ ನಂತರ ನರಳಿ ಪ್ರಾಣ ಬಿಟ್ಟರು. ಕಳೆದ ಕೆಲವು ದಿನಗಳಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಬಿಸಿಸಿಐ ಅವರಿಗೆ ವೈದ್ಯಕೀಯ ನೆರವಿಗಾಗಿ ಒಂದು ಕೋಟಿ ರೂಪಾಯಿ ನೀಡಿತ್ತು. ಈ ಸ್ಥಿತಿಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಾಜಿ ಆಟಗಾರ ಹಾಗೂ ಕೋಚ್ ಸವನ್ನಪ್ಪಿದರು. ಇವರ ಸಾವಿಗೆ ಸ್ಮರಣಾರ್ಥವಾಗಿ ಭಾರತ ತಂಡದ ಆಟಗಾರರು ಕಪ್ಪುಪಟ್ಟಿ ಧರಿಸಿ ಆಟವಾಡಿದರು.
ಅಂಶುಮಾನ್ ಗಾಯಕ್ವಾಡ್ ಅವರು ಭಾರತಕ್ಕಾಗಿ 15 ODI ಮತ್ತು 40 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಅವರು 1975 ರಿಂದ 1987 ರವರೆಗೆ ಭಾರತ ತಂಡದಲ್ಲಿ ಆಡಿದ್ದರು. ಅವರು ಟೆಸ್ಟ್ ಪಂದ್ಯಗಳಲ್ಲಿ 1985 ರನ್ ಗಳಿಸಿದ್ದಾರೆ. ಅವರು ಎರಡು ಶತಕ ಮತ್ತು ಹತ್ತು ಅರ್ಧಶತಕಗಳನ್ನು ಗಳಿಸಿದ್ದಾರೆ. ಅವರು ಏಕದಿನದಲ್ಲಿ 269 ರನ್ ಗಳಿಸಿದ್ದಾರೆ. ಅವರು ಕೇವಲ ಒಂದು ಅರ್ಧಶತಕ ಗಳಿಸಿದ್ದಾರೆ. ಅವರು ಭಾರತ ತಂಡದ ಆಯ್ಕೆ ಸಮಿತಿಯ ಸದಸ್ಯರಾಗಿ ಮತ್ತು ಭಾರತ ತಂಡದ ಕೋಚ್ ಆಗಿದ್ದಾರೆ. ಅವರ ನಿಧನಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಸಿಸಿಐ ಕಾರ್ಯದರ್ಶಿ ಜೈ ಶಾ ಸಂತಾಪ ಸೂಚಿಸಿದ್ದಾರೆ.
ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅಂಶುಮಾನ್ ಗಾಯಕ್ವಾಡ್ ಅವರೊಂದಿಗಿನ ಕೆಲವು ನೆನಪುಗಳನ್ನು ಹಂಚಿಕೊಂಡಿದ್ದಾರೆ. ಕೆಲವು ತಿಂಗಳ ಹಿಂದೆ ಬಿಸಿಸಿಐ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರೊಂದಿಗೆ ಕೆಲವು ನಿಮಿಷಗಳ ಕಾಲ ಮಾತನಾಡಿದ್ದೆ ಮತ್ತು ಈ ಹಿಂದೆ ರಣಜಿ ಟ್ರೋಫಿಯಲ್ಲಿ ಆಡಿದಾಗ ಅವರೊಂದಿಗೆ ಮಾತನಾಡಿದ್ದೆ ಎಂದು ರೋಹಿತ್ ಶರ್ಮಾ ಉಲ್ಲೇಖಿಸಿದ್ದಾರೆ.