ಬೆಂಗಳೂರಿನಲ್ಲಿದೆ ಭಾರತದ ಮೊದಲ ಎಸಿ ರೈಲ್ವೆ ನಿಲ್ದಾಣ.. ಈ ಅತ್ಯಾಧುನಿಕ ನಿಲ್ದಾಣದ ಫೋಟೋಗಳನ್ನು ಟ್ವಿಟ್ ಮೂಲಕ ರೈಲ್ವೆ ಸಚಿವರು ಹಂಚಿಕೊಂಡಿದ್ದಾರೆ.
ಬೆಂಗಳೂರು : ಶೀಘ್ರದಲ್ಲೇ ವಿಮಾನ ನಿಲ್ದಾನದಂಥಹ ರೈಲು ನಿಲ್ದಾಣವನ್ನು ಬೆಂಗಳೂರಿನಲ್ಲಿ ಕಾಣಬಹುದು. ಇಲ್ಲಿ ವಿಮಾಣ ನಿಲ್ದಾಣದಲ್ಲಿರುವಂತೆಯೇ ಎಲ್ಲಾ ಸೌಲಭ್ಯಗಳೂ ಇರಲಿವೆ. ಭಾರತದ ಮೊದಲ ಕೇಂದ್ರೀಕೃತ ಹವಾನಿಯಂತ್ರಿತ ರೈಲ್ವೆ ಟರ್ಮಿನಲ್ (India First Centralized AC Railway Terminal) ಬೆಂಗಳೂರಿನಲ್ಲಿ ಸಿದ್ಧವಾಗಿದೆ. ರೈಲ್ವೆ ಸಚಿವ ಪಿಯೂಷ್ ಗೋಯಲ್ ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
ದೇಶದ ಮೊದಲ ಕೇಂದ್ರೀಕೃತ ಹವಾನಿಯಂತ್ರಿತ ರೈಲ್ವೆ ನಿಲ್ದಾಣಕ್ಕೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಎಂದು ಹೆಸರಿಸಲಾಗಿದೆ. ಇದನ್ನು ಬೆಂಗಳೂರಿನಲ್ಲಿ ನಿರ್ಮಿಸಲಾಗಿದೆ. ಈ ಹವಾನಿಯಂತ್ರಿತ ಟರ್ಮಿನಲ್ ಬಹುತೇಕ ರೆಡಿಯಾಗಿದ್ದು, ಶೀಘ್ರದಲ್ಲೇ ಆರಂಭವಾಗಲಿದೆ.
ದೇಶದ ಮೊದಲ ಸಿ ಟರ್ಮಿನಲ್ ಅನ್ನು ಬೈಯಪ್ಪನಹಳ್ಳಿಯಲ್ಲಿ ನಿರ್ಮಿಸಲಾಗುತ್ತಿದೆ. ಈ ನಿಲ್ದಾಣ ಕಾರ್ಯಾರಂಭ ಮಾಡಲು ಶುರು ಮಾಡಿದರೆ, ನಂತರ ಕೆಎಸ್ ಆರ್ (KSR)ಮತ್ತು ಯಶವಂತಪುರ (Yashawanthpura) ರೈಲು ನಿಲ್ದಾಣದಲ್ಲಿ ಜನದಟ್ಟಣೆ ಕಡಿಮೆಯಾಗಲಿದೆ.
ಸರ್. ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿರ್ಮಾಣಕ್ಕಾಗಿ ಸುಮಾರು 314 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ. 2021 ಫೆಬ್ರವರಿಯಲ್ಲಿ ಈ ಟರ್ಮಿನಲ್ ಕಾರ್ಯಾರಂಭ ಮಾಡಬೇಕಿತ್ತು. ಆದರೆ ಕರೋನಾ (Coronavirus) ಕಾರಣದಿಂದಾಗಿ ಕೆಲಸ ಸ್ಥಗಿತಗೊಂಡಿದ್ದು, ಇದೀಗ ಟರ್ಮಿನಲ್ ಪೂರ್ತಿಯಾಗಿ ರೆಡಿಯಾಗಿ ನಿಂತಿದೆ.
ದೇಶದ ಮೊದಲ ಎಸಿ ಟರ್ಮಿನಲ್ ನಿರ್ಮಾಣದೊಂದಿಗೆ ಇನ್ನು ಬೆಂಗಳೂರಿಗೆ ಹೆಚ್ಚು ಎಕ್ಸ್ ಪ್ರೆಸ್ ರೈಲುಗಳ ಸಂಚಾರ ಆರಂಭವಾಗಲಿದೆ. ಈ ಕಾರಣದಿಂದಾಗಿ ಬಹುತೇಕ ಎಲ್ಲಾ ಜಿಲ್ಲೆಗಳಿಂದಲೂ ಬೆಂಗಳೂರಿಗೆ ರೈಲು ಸಂಚಾರ ಸಾಧ್ಯವಾಗಲಿದೆ.
ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಎಸಿ ಟರ್ಮಿನಲ್ ಅನ್ನು ನಿರ್ಮಿಸಲಾಗಿದೆ. ಈ ನಿಲ್ದಾಣ ಯಾವ ವಿಮಾನ ನಿಲ್ದಾಣಕ್ಕೂ ಕಡಿಮೆ ಇಲ್ಲ ಎನ್ನಲಾಗಿದೆ. ರೈಲ್ವೆ ಯಾವ ರೀತಿ ಈ ನಿಲ್ದಾಣವನ್ನು ನಿರ್ಮಿಸಲಾಗಿದೆ ಎಂದರೆ, ನವಭಾರತದ ಝಲಕ್ ಇಲ್ಲಿ ಕಾಣಬಹುದು..