King Kohli Aggressive Batting: ವಿರಾಟ್ ಕೊಹ್ಲಿ ಅವರ ಭರ್ಜರಿ ಅರ್ಧಶತಕ, ವಿಜಯಕುಮಾರ್ ವೈಶಾಕ್ ಮತ್ತು ಸಿರಾಜ್ ಅಹ್ಮದ್ ಅವರ ಬೆಂಕಿ ಬೌಲಿಂಗ್ ಎದುರು ದೆಹಲಿ ತಂಡ ಮಂಡಿಯೂರಿತು.
IPL 2023, RCB vs DC: ಶನಿವಾರ ನಡೆದ ಮಹತ್ವದ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಗೆಲುವು ಸಾಧಿಸಿದೆ. ಬ್ಯಾಟಿಂಗ್, ಬೌಲಿಂಗ್ ಸೇರಿದಂತೆ ಎಲ್ಲಾ ವಿಭಾಗದಲ್ಲಿಯೂ ಅತ್ಯುತ್ತಮ ಪ್ರದರ್ಶನ ನೀಡಿದ ರೆಡ್ ಆರ್ಮಿ ಪ್ರಸಕ್ತ ಟೂರ್ನಿಯಲ್ಲಿ 2ನೇ ಗೆಲುವು ಸಾಧಿಸಿ ಸಂಭ್ರಮಿಸಿತು. ವಿರಾಟ್ ಕೊಹ್ಲಿ ಅವರ ಭರ್ಜರಿ ಅರ್ಧಶತಕ, ವಿಜಯಕುಮಾರ್ ವೈಶಾಕ್ ಮತ್ತು ಸಿರಾಜ್ ಅಹ್ಮದ್ ಅವರ ಬೆಂಕಿ ಬೌಲಿಂಗ್ ಎದುರು ದೆಹಲಿ ತಂಡ ಮಂಡಿಯೂರಿತು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
ರನ್ ಮೆಷಿನ್ ಖ್ಯಾತಿಯ ವಿರಾಟ್ ಕೊಹ್ಲಿ ಬ್ಯಾಟಿಂಗ್ ಅಬ್ಬರ ಮುಂದುವರೆದಿದೆ. ಸತತ 2 ಸೋಲುಗಳಿಂದ ಕಂಗೆಟ್ಟಿದ RCB ತಂಡವು ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ.
ದೆಹಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಒಂದು ಕಡೆ RCB ವಿಕೆಟ್ಗಳು ಉರುಳುತ್ತಿದ್ದರೂ ವಿರಾಟ್ ಕೊಹ್ಲಿ ಏಕಾಂಗಿ ಹೋರಾಟ ನಡೆಸಿದರು. 34 ಎಸೆತಗಳಲ್ಲಿ 6 ಬೌಂಡರಿ, 1 ಸಿಕ್ಸರ್ ಇದ್ದ ಭರ್ಜರಿ ಅರ್ಧಶತಕ ಭಾರಿಸಿದರು.
ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಪಂದ್ಯದಲ್ಲಿ RCB ಬ್ಯಾಟಿಂಗ್, ಬೌಲಿಂಗ್ ಸೇರಿದಂತೆ ಎಲ್ಲಾ ವಿಭಾಗಗಳಲ್ಲಿಯೂ ಮಿಂಚಿತು. ಸತತ 2 ಸೋಲು ಕಂಡಿದ್ದ ತಂಡ ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆಯೇ ಅಭಿಮಾನಿಗಳ ಮೊಗದಲ್ಲಿ ಮಂದಹಾಸ ಮೂಡಿತು.
RCB ಪರ ಪಾದಾರ್ಪಣೆಯ ಪಂದ್ಯದಲ್ಲಿಯೇ ವಿಜಯಕುಮಾರ್ ವೈಶಾಕ್ 20ಕ್ಕೆ 3 ವಿಕೆಟ್ ಕಬಳಿಸಿ ಮಿಂಚಿದರೆ, ಸಿರಾಜ್ ಅಹ್ಮದ್ 23ಕ್ಕೆ 2 ವಿಕೆಟ್ ಗಳಿಸಿ ಬೆಂಕಿ ಬೌಲಿಂಗ್ ಮಾಡಿದರು.
ಆರಂಭಿಕರಾಗಿ ಕಣಕ್ಕಿಳಿದ ಕಿಂಗ್ ಕೊಹ್ಲಿ ದೆಹಲಿ ವಿರುದ್ಧ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಆಕರ್ಷಕ ಅರ್ಧಶತಕ(50) ಸಿಡಿಸಿದ ಕೊಹ್ಲಿ ಗೇಮ್ ಚೇಂಜರ್ ಆಫ್ ದಿ ಮ್ಯಾಚ್ ಪ್ರಶಸ್ತಿಗೆ ಪಾತ್ರರಾದರು.