IPL 2024: ಅತಿ ಹೆಚ್ಚು ಸಂಭಾವನೆ ಪಡೆಯುತ್ತಿರುವ ಟಾಪ್ 5 ಭಾರತೀಯ ಆಟಗಾರರು!
ಲಖನೌ ಸೂಪರ್ ಜೈಂಟ್ಸ್ ತಂಡವು ಕನ್ನಡಿಗ ಕೆ.ಎಲ್.ರಾಹುಲ್‌ರನ್ನು ಉಳಿಸಿಕೊಂಡಿದ್ದು, 17 ಕೋಟಿ ರೂ. ಸಂಭಾವನೆ ನೀಡುತ್ತಿದೆ. ಸದ್ಯದ ಮಟ್ಟಿಗೆ ರಾಹುಲ್ ಭಾರತೀಯ ಆಟಗಾರರ ಪೈಕಿ ಅತಿಹೆಚ್ಚು ಸಂಭಾವನೆ ಪಡೆಯುತ್ತಿರುವ ಅಗ್ರ ಆಟಗಾರನಾಗಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ಸಹ ಆಲ್‌ರೌಂಡರ್ ರವೀಂದ್ರ ಜಡೇಜಾರನ್ನು ಉಳಿಸಿಕೊಂಡಿದ್ದು, 16 ಕೋಟಿ ರೂ. ಸಂಭಾವನೆ ನೀಡುತ್ತಿದೆ. 2023ರಲ್ಲಿ ಚೆನ್ನೈ ತಂಡವು ಚಾಂಪಿಯನ್ ಆಗುವಲ್ಲಿ ಜಡೇಜಾ ಪ್ರಮುಖ ಪಾತ್ರವಹಿಸಿದ್ದರು.
ಕಳೆದ ವರ್ಷ ಸಂಭವಿಸಿದ್ದ ಅಪಘಾತ ಕಾರಣ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದ ರಿಷಬ್ ಪಂತ್ ಈಗ ಫಿಟ್ ಅಂಡ್ ಫೈನ್ ಆಗಿದ್ದಾರೆ. ಇಷ್ಟುದಿನ ತಂಡದಿಂದ ದೂರ ಉಳಿದಿದ್ದ ನಾಯಕ ಮತ್ತು ವಿಕೆಟ್ ಕೀಪರ್-ಬ್ಯಾಟರ್ ಪಂತ್‌ರನ್ನು ಉಳಿಸಿಕೊಂಡಿದ್ದು, ಅವರಿಗೆ 16 ಕೋಟಿ ರೂ. ಸಂಭಾವನೆ ನೀಡುತ್ತಿದೆ.
ಮುಂಬೈ ಇಂಡಿಯನ್ಸ್ ತಂಡವು ರೋಹಿತ್ ಶರ್ಮಾರನ್ನು ಉಳಿಸಿಕೊಂಡಿದ್ದು, 16 ಕೋಟಿ ರೂ. ಸಂಭಾವನೆ ನೀಡುತ್ತಿದೆ. ಆದರೆ ಈ ಬಾರಿ ತಂಡವನ್ನು ರೋಹಿತ್ ಬದಲು ಹಾರ್ದಿಕ್ ಪಾಂಡ್ಯ ಮುನ್ನಡೆಸುತ್ತಿದ್ದಾರೆ.
2022ರಲ್ಲಿ ನಡೆದ ಮೆಗಾ ಹರಾಜಿನಲ್ಲಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಯುವ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್‌ರನ್ನು 15.25 ಕೋಟಿ ರೂ. ನೀಡಿ ಖರೀದಿಸಿದೆ.
2008ರಿಂದ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಆಡುತ್ತಿದ್ದಾರೆ. RCB ಮ್ಯಾನೇಜ್ಮೆಂಟ್ ಕೊಹ್ಲಿಯನ್ನು ಉಳಿಸಿಕೊಂಡಿದ್ದು, 15 ಕೋಟಿ ರೂ. ಸಂಭಾವನೆ ನೀಡುತ್ತಿದೆ.