ನಿತ್ಯ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದು ಒಳ್ಳೆಯದೇ?

ನಿತ್ಯ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಉದರ ಸಂಬಂಧಿತ ಹಲವು ಸಮಸ್ಯೆಗಳಿಂದ ದೂರ ಉಳಿಯಬಹುದು ಎಂದು ಹೇಳಲಾಗುತ್ತದೆ. 

Drinking Water in Empty Stomach Benefits: ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ದೇಹವನ್ನು ಚೆನ್ನಾಗಿ ಶುದ್ಧೀಕರಿಸಲು ಸಾಧ್ಯವಾಗುತ್ತದೆ. ಈ ಅಭ್ಯಾಸವು ಮಲಬದ್ದತೆ ಸಮಸ್ಯೆಗೂ ಸಹ ಪರಿಹಾರವನ್ನು ನೀಡುತ್ತದೆ. ಮಾತ್ರವಲ್ಲ, ನಿತ್ಯ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಉದರ ಸಂಬಂಧಿತ ಹಲವು ಸಮಸ್ಯೆಗಳಿಂದ ದೂರ ಉಳಿಯಬಹುದು ಎಂದು ಹೇಳಲಾಗುತ್ತದೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ನಮ್ಮ ಜೀವನವನ್ನು ನೀರಿಲ್ಲದೆ ಊಹಿಸಿಕೊಳ್ಳಲೂ ಸಾಧ್ಯವಿಲ್ಲ. ನೀರು ನಮ್ಮ ಜೀವನದ ಪ್ರಮುಖ ಭಾಗವಾಗಿದೆ. ದಿನಕ್ಕೆ 10ರಿಂದ 12 ಗ್ಲಾಸ್ ನೀರು ಕುಡಿಯುವುದರಿಂದ ಆರೋಗ್ಯವಾಗಿರಬಹುದು ಎಂದು ಹೇಳಲಾಗುತ್ತದೆ. ಹಲವರಿಗೆ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವ ಅಭ್ಯಾಸವೂ ಇದೆ. ಆದರೆ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದು ಆರೋಗ್ಯಕ್ಕೆ ಪ್ರಯೋಜನಕಾರಿಯೇ ಅಥವಾ ಇಲ್ಲವೇ ಎಂದು ನಿಮಗೆ ತಿಳಿದಿದೆಯೇ?

2 /5

ಬೆಳಿಗ್ಗೆ ಎದ್ದ ನಂತರ ನೀರು ಕುಡಿಯುವುದರಿಂದ ಕರುಳಿನಲ್ಲಿ ಸಂಗ್ರಹವಾದ ಮಲವನ್ನು ಹೊರಹಾಕಲು ಸುಲಭವಾಗುತ್ತದೆ. ಈ ಕಾರಣದಿಂದಾಗಿ, ಹೊಟ್ಟೆಯನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲು ಸಹಕಾರಿ ಆಗಿದೆ.

3 /5

ತಜ್ಞರ ಪ್ರಕಾರ, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದು ದೇಹದ ಉತ್ತಮ ಶುದ್ಧೀಕರಣಕ್ಕೆ ಸಹಾಯ ಮಾಡುತ್ತದೆ ಮತ್ತು ಮಲಬದ್ಧತೆಗೆ ಪರಿಹಾರವನ್ನು ನೀಡುತ್ತದೆ. ಇದರೊಂದಿಗೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಬಹಳ ಮಟ್ಟಿಗೆ ದೂರವಾಗುತ್ತವೆ.

4 /5

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದು ಒತ್ತಡವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಇದರೊಂದಿಗೆ, ನೀವು ದಿನವಿಡೀ ತಾಜಾ ತನವನ್ನು ಅನುಭವಿಸುತ್ತೀರಿ. ನೀವು ಎದ್ದಾಗ, ನಿಮ್ಮ ಮನಸ್ಸು ಶಾಂತವಾಗಿರುತ್ತದೆ. ಆ ಸಮಯದಲ್ಲಿ ನೀರು ಕುಡಿಯುವುದರಿಂದ ಮನಸ್ಸು ತಾಜಾವಾಗಿರುತ್ತದೆ.

5 /5

ಅಧಿಕ ರಕ್ತದೊತ್ತಡ ಮತ್ತು ಮಧುಮೇಹ ಹೊಂದಿರುವ ರೋಗಿಗಳು ಪ್ರತಿದಿನ ಬೆಳಿಗ್ಗೆ ನೀರನ್ನು ಕುಡಿಯುವುದರಿಂದ ಪ್ರಯೋಜನ ಪಡೆಯಬಹುದು. ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ಖಂಡಿತವಾಗಿಯೂ ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.