Aadhaar Card: ಡಿಜಿಟಲ್ ಭಾರತದಲ್ಲಿ ಆಧಾರ್ ಕಾರ್ಡ್ ಕೇವಲ ಗುರುತಿನ ಚೀಟಿಯಲ್ಲ. ಪ್ರತಿ ಕೆಲಸಕ್ಕೂ ಅತ್ಯಗತ್ಯವಾಗಿ ಬೇಕಾಗಿರುವ ದಾಖಲೆಯಾಗಿದೆ. ಇದೀಗ ಆಧಾರ್ ಕಾರ್ಡ್‌ಗೆ ಸಂಬಂಧಿಸಿದಂತೆ ಯುಐಡಿಎಐ ಮಹತ್ವದ ಅಪ್ಡೇಟ್ ನೀಡಿದೆ. ಇದು 10ವರ್ಷ ಹಿಂದಿನ ಆಧಾರ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್ ಎಂತಲೇ ಹೇಳಬಹುದು.
1/6ಇತ್ತೀಚಿನ ದಿನಗಳಲ್ಲಿ ಮಗುವನ್ನು ಶಾಲೆಗೆ ಸೇರಿಸುವುದರಿಂದ ಹಿಡಿದು ಬ್ಯಾಂಕ್ ಖಾತೆ ತೆರೆಯುವವರೆಗೂ ಪ್ರತಿ ಕೆಲಸಕ್ಕೂ ಆಧಾರ್ ಕಾರ್ಡ್ ಅಗತ್ಯ ದಾಖಲೆಯಾಗಿದೆ. ಆದರೆ, ನಿಮ್ಮ ಆಧಾರ್ ಕಾರ್ಡ್ 10 ವರ್ಷಕ್ಕಿಂತ ಹಳೆಯದಾಗಿದ್ದರೆ ಇದನ್ನು ನವೀಕರಿಸುವುದು ಕೂಡ ಅತ್ಯಗತ್ಯವಾಗಿದೆ.
2/6ಯಾವುದೇ ಸಮಸ್ಯೆಯಿಲ್ಲದೆ ಎಲ್ಲಾ ಸರ್ಕಾರಿ ಸೇವೆಗಳನ್ನು ಪಡೆಯಲು ಜನರು ಆಧಾರ್ ಅನ್ನು ನವೀಕರಿಸುವುದು ಕಡ್ಡಾಯವಾಗಿದೆ. ಇದೀಗ ಆಧಾರ್ ಕಾರ್ಡ್ ನವೀಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಶುಭ ಸುದ್ದಿಯನ್ನು ನೀಡಿದೆ.
3/6ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಮತ್ತೊಮ್ಮೆ ಉಚಿತ ಆಧಾರ್ ಅಪ್ಡೇಟ್ ಸೌಲಭ್ಯವನ್ನು ಜೂನ್ 14, 2026 ರವರೆಗೆ ವಿಸ್ತರಿಸಿದೆ.
4/6ಯುಐಡಿಎಐ ನೀಡಿರುವ ಮಾಹಿತಿಯ ಪ್ರಕಾರ, ಜೂನ್ 14, 2026 ರವರೆಗೆ ಆನ್‌ಲೈನ್‌ನಲ್ಲಿ ಉಚಿತವಾಗಿ ಆಧಾರ್ ಕಾರ್ಡ್ ನವೀಕರಿಸಬಹುದಾಗಿದೆ.
5/6ಆಧಾರ್ ಬಳಕೆದಾರರು MyAadhaar ಪೋರ್ಟಲ್‌ನಲ್ಲಿ ಹೆಸರು, ವಿಳಾಸ, ಜನ್ಮ ದಿನಾಂಕ ಅಥವಾ ಲಿಂಗವನ್ನು ಬದಲಾಯಿಸಬಹುದಾಗಿದೆ.
6/6ವಿಶೇಷ ಸೂಚನೆ: ನೀವು ಆಧಾರ್ ಕಾರ್ಡ್ ಅನ್ನು ಆನ್‌ಲೈನ್‌ನಲ್ಲಿ ನವೀಕರಿಸುವುದು ಉಚಿತವಾಗಿರುತ್ತದೆ. ಆದರೆ, ಆಧಾರ್ ಕೇಂದ್ರದಲ್ಲಿ ಆಧಾರ್ ನವೀಕರಣಕ್ಕಾಗಿ ನಿಗದಿತ ಶುಲ್ಕವನ್ನು ಪಾವತಿಸಬೇಕಾಗುತ್ತದೆ.