ಚೇತನ್ ಕುಮಾರ್ ನಿರ್ದೇಶನದ ಮುಂದಿನ ಚಿತ್ರಕ್ಕೆ ಇಶಾನ್ ನಾಯಕ

Thu, 21 Jul 2022-7:08 pm,

"ರೆಮೋ" ಚಿತ್ರದ ಬಿಡುಗಡೆ ನಂತರ ಈ ಚಿತ್ರ ಆರಂಭವಾಗಲಿದೆ. ಶೀಘ್ರದಲ್ಲೇ ಈ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡುವುದಾಗಿ ಚೇತನ್ ಕುಮಾರ್ ತಿಳಿಸಿದ್ದಾರೆ.

ಸದ್ಯದಲ್ಲೇ ಚೇತನ್ ಕುಮಾರ್ ನಿರ್ದೇಶನದ ಚಿತ್ರವೊಂದು ಆರಂಭವಾಗಲಿದೆ. "ರೆಮೋ" ಚಿತ್ರದ ಹಾಡುಗಳು, ಟೀಸರ್  ಮೂಲಕ ಈಗಾಗಲೇ ಎಲ್ಲರ ಗಮನ ಸೆಳೆದಿರುವ ಸುರದ್ರೂಪಿ ನಟ ಇಶಾನ್ ಈ ಚಿತ್ರದ ನಾಯಕನಾಗಿ ನಟಿಸಲಿದ್ದಾರೆ. 

"ಜೇಮ್ಸ್" ನಂತರ ನಿರ್ದೇಶಕ ಚೇತನ್ ಕುಮಾರ್ ಅವರ ಮುಂದಿನ ಸಿನಿಮಾ ಯಾವುದು? ಎಂಬ ಕುತೂಹಲ ಎಲ್ಲರಲ್ಲೂ ಇತ್ತು.ಆ ಕುತೂಹಲ ಕ್ಕೆ ಈಗ ತೆರೆ ಬಿದ್ದಿದೆ. 

 " ಜೇಮ್ಸ್" ಸಿನಿಮಾವನ್ನು ಪುನೀತ್ ರಾಜಕುಮಾರ್  ಅವರ ಅಭಿಮಾನಿಗಳು ದೊಡ್ಡಮಟ್ಟದ ಯಶಸ್ಸು ಮಾಡಿದ್ದು ಎಲ್ಲರಿಗೂ ತಿಳಿದ ಸಂಗತಿ.  

ZEENEWS TRENDING STORIES

By continuing to use the site, you agree to the use of cookies. You can find out more by Tapping this link