ಈ ತರಕಾರಿ ಕಚ್ಚಿ ತಿಂದರೆ ಸಾಕು ತಕ್ಷಣ ಡೌನ್ ಆಗುತ್ತೆ ಶುಗರ್ ಲೆವಲ್; ದಿನಕ್ಕೊಮ್ಮೆ ತಿಂದರೆ ಬರೋದೇ ಇಲ್ಲ ಮಧುಮೇಹ!
ತೊಂಡೆಕಾಯಿ ದೇಹದ ಆರೋಗ್ಯಕ್ಕೆ ಬೇಕಾದ ಪೋಷಕಾಂಶಗಳನ್ನು ಹೊಂದಿದ್ದು ಮಧುಮೇಹ ನಿಯಂತ್ರಣದಲ್ಲಿ ಪ್ರಮುಖ ಪಾತ್ರವಹಿಸುತ್ತದೆ.
ತೊಂಡೆಕಾಯಿ ಸೇವಿಸುವುದರಿಂದ ಹಲವಾರು ರೀತಿಯ ಸಮಸ್ಯೆಗಳನ್ನು ಕಡಿಮೆ ಮಾಡಬಹುದು. ತೊಂಡೆಕಾಯಿ ತಿನ್ನುವುದರಿಂದ ಜೀರ್ಣಕ್ರಿಯೆ ಸಮಸ್ಯೆ ದೂರವಾಗುವುದು.
ಮೆದುಳು ಸಂಬಂಧಿ ಸಮಸ್ಯೆಯಿಂದ ಬಳಲುತ್ತಿರುವವರು ತಪ್ಪದೇ ತೊಂಡೆಕಾಯಿ ಸೇವಿಸಬೇಕು. ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರು ತೊಂಡೆಕಾಯಿ ತಿನ್ನುವುದರಿಂದ ಹಲವು ಲಾಭಗಳನ್ನು ಪಡೆಯಬಹುದು.
ಮಧುಮೇಹದಿಂದ ಬಳಲುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸಕ್ಕರೆ ಮಟ್ಟ ನಿಯಂತ್ರಿಸುವುದನ್ನು ಹೊರತುಪಡಿಸಿ ಯಾವುದೇ ಚಿಕಿತ್ಸೆ ಇಲ್ಲ.
ತೊಂಡೆಕಾಯಿ ತಿನ್ನುವುದರಿಂದ ಶುಗರ್ ಲೆವೆಲ್ ಕಂಟ್ರೋಲ್ ಆಗುತ್ತದೆ. ಇದರಲ್ಲಿರುವ ಫೈಬರ್ ಮತ್ತು ಆಂಟಿಆಕ್ಸಿಡೆಂಟ್‌ಗಳು ದೇಹವು ಗ್ಲೂಕೋಸ್ ಅನ್ನು ನಿಧಾನವಾಗಿ ಹೀರಿಕೊಳ್ಳುವಂತೆ ಮಾಡುತ್ತದೆ.
ರಕ್ತದಲ್ಲಿನ ಸಕ್ಕರೆಯ ಮಟ್ಟ ಹೆಚ್ಚಾಗುವುದನ್ನು ತೊಂಡೆಕಾಯಿ ತಡೆಯುತ್ತದೆ. ಮಧುಮೇಹದಿಂದ ಬಳಲುತ್ತಿರುವವರು ತೊಂಡೆಕಾಯಿಯನ್ನು ಆಗಾಗ್ಗೆ ಸೇವಿಸಿದರೆ ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ಕಡಿಮೆ ಮಾಡಬಹುದು.
ತೊಂಡೆಕಾಯಿ ಜ್ಯೂಸ್ ಕೂಡ ಕುಡಿಯಬಹುದು. ತೊಂಡೆಕಾಯಿ ಎಲೆಗಳ ರಸವನ್ನು ಸೇವಿಸುವುದರಿಂದ ಮಧುಮೇಹವನ್ನು ನಿಯಂತ್ರಿಸಬಹುದು.
ತೊಂಡೆಕಾಯಿ ಎಲೆಗಳ ಕಷಾಯವನ್ನು ಕುಡಿಯುವುದರಿಂದ ಜ್ವರ, ಜಾಂಡೀಸ್ ಮತ್ತು ಕ್ಯಾನ್ಸರ್ ಸಮಸ್ಯೆಗಳು ಕಡಿಮೆಯಾಗುತ್ತವೆ. ಎಲೆಗಳ ಪೇಸ್ಟ್ ಮಾಡಿ ಹಚ್ಚಿದರೆ ಚರ್ಮದ ಸಮಸ್ಯೆಗಳನ್ನು ನಿವಾರಿಸಿ.
ಸೂಚನೆ: ಪ್ರಿಯ ಓದುಗರೇ, ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.