ಹಲಸಿನ ಹಣ್ಣಿನ ಬೀಜ ಹೀಗೆ ತಿಂದರೆ ಮಧುಮೇಹಿಗಳಿಗೆ ಎಷ್ಟೊಂದು ಲಾಭ..! ಗೊತ್ತಿದ್ದರೆ ಬಿಡುವುದೇ ಇಲ್ಲ

Fri, 29 Nov 2024-10:23 am,

ಹಲಸಿನ ಹಣ್ಣು.. ಬಹುತೇಕ ಎಲ್ಲರಿಗೂ ಗೊತ್ತು. ಅದರ ರುಚಿ ಮತ್ತು ಪರಿಮ ಬಾಯಲ್ಲಿ ನೀರೂರಿಸುತ್ತದೆ. ರುಚಿಗೆ ಮಾತ್ರವಲ್ಲ, ಆರೋಗ್ಯಕ್ಕೂ ಹಲಸು ಒಳ್ಳೆಯದು ಎನ್ನುತ್ತಾರೆ ಪೌಷ್ಟಿಕತಜ್ಞರು. ಅನೇಕ ಜನರು ಹಲಸಿನ ತೊಳೆಗಳನ್ನು ತಿನ್ನುತ್ತಾರೆ ಮತ್ತು ಬೀಜಗಳನ್ನು ಬಿಡುತ್ತಾರೆ. 

ಹಲಸಿನ ಬೀಜಗಳಲ್ಲಿ ಪ್ರೋಟೀನ್, ಫೈಬರ್, ಆರೋಗ್ಯಕರ ಕೊಬ್ಬುಗಳಾದ ಒಮೆಗಾ 3 ಮತ್ತು ಒಮೆಗಾ 6, ವಿಟಮಿನ್ ಎ, ಸಿ, ಇ, ಬಿ, ಕಬ್ಬಿಣ, ಮೆಗ್ನೀಸಿಯಮ್, ಪೊಟ್ಯಾಸಿಯಮ್ ಮತ್ತು ಸತುವು ಸಮೃದ್ಧವಾಗಿದೆ. ಮಲಬದ್ಧತೆ ತಡೆಯಲು ಇದು ಒಳ್ಳೆಯದು. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. 

ಹಲಸಿನ ಬೀಜಗಳಲ್ಲಿ ಫೈಬರ್ ಕೂಡ ಸಮೃದ್ಧವಾಗಿದೆ, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ. ಹಲಸಿನ ಬೀಜಗಳಲ್ಲಿರುವ ಫೈಬರ್ ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. 

ಹಲಸಿನ ಬೀಜದಲ್ಲಿರುವ ಆಂಟಿಆಕ್ಸಿಡೆಂಟ್‌ಗಳು ದೇಹವನ್ನು ಸ್ವತಂತ್ರ ರಾಡಿಕಲ್‌ಗಳಿಂದ ಉಂಟಾಗುವ ಹಾನಿಯಿಂದ ರಕ್ಷಿಸುತ್ತದೆ. ಹಲಸಿನ ಬೀಜದಲ್ಲಿರುವ ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್ ಹೃದಯದ ಆರೋಗ್ಯಕ್ಕೆ ಪ್ರಮುಖ ಖನಿಜಗಳಾಗಿವೆ. 

ಪೊಟ್ಯಾಸಿಯಮ್ ರಕ್ತನಾಳಗಳನ್ನು ಸಡಿಲಗೊಳಿಸುತ್ತದೆ ಮತ್ತು ಹೃದಯವನ್ನು ಆರೋಗ್ಯಕರವಾಗಿರಿಸುತ್ತದೆ ಎಂದು ವಿವರಿಸಲಾಗಿದೆ. ಹಲಸಿನ  ಬೀಜದಲ್ಲಿರುವ ಆಂಟಿಆಕ್ಸಿಡೆಂಟ್‌ಗಳು ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯುತ್ತದೆ.

ತೂಕ ಇಳಿಸಿಕೊಳ್ಳಲು ಬಯಸುವವರು, ಹಲಸಿನ ಬೀಜಗಳನ್ನು ಸೇವಿಸುವುದರಿಂದ ಉತ್ತಮ ಫಲಿತಾಂಶವನ್ನು ನೀಡುತ್ತದೆ. ಏಕೆಂದರೆ ಹಲಸಿನ ಬೀಜದಲ್ಲಿರುವ ನಾರಿನಂಶವು ಹೆಚ್ಚು ಕಾಲ ಹೊಟ್ಟೆ ತುಂಬಿರುತ್ತದೆ. 

ಇದು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಅತಿಯಾಗಿ ತಿನ್ನುವುದನ್ನು ತಡೆಯುತ್ತದೆ. ಹಲಸಿನ ಬೀಜಗಳಲ್ಲಿ ಕಬ್ಬಿಣದ ಅಂಶ ಹೇರಳವಾಗಿದೆ. ಇದು ಕೆಂಪು ರಕ್ತ ಕಣಗಳನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಚರ್ಮ ಮತ್ತು ಕೂದಲಿನ ಆರೋಗ್ಯವನ್ನು ಸುಧಾರಿಸುತ್ತದೆ. ಹಲಸಿನ ಬೀಜಗಳಲ್ಲಿನ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳಿದ್ದು ಚರ್ಮದ ಸುಕ್ಕುಗಳನ್ನು ಕಡಿಮೆ ಮಾಡಲು ಮತ್ತು ಕೂದಲು ಉದುರುವಿಕೆಯನ್ನು ತಡೆಯಲು ಹಲಸಿನ ಬೀಜಗಳು ಸಹಾಯ ಮಾಡುತ್ತವೆ ಎಂದು ಹೇಳಲಾಗುತ್ತದೆ.

ಮಧುಮೇಹಿಗಳು ಹಲಸಿನ ಬೀಜಗಳನ್ನು ಬೇಯಿಸಿ ಅಥವಾ ಹುರಿದು ತಿನ್ನಬಹುದು. ಇದರಿಂದ ರಕ್ತದಲ್ಲಿನ ಸಕ್ಕರೆಯ ಮಟ್ಟ ನಿಯಂತ್ರಣಕ್ಕೆ ಬರುವುದು. 

ಸೂಚನೆ: ಪ್ರಿಯ ಓದುಗರೇ, ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link