IND vs BAN: ಸಂಕಷ್ಟದಲ್ಲಿ ಟೀಂ ಇಂಡಿಯಾ..ಬಾಂಗ್ಲಾದೇಶದೊಂದಿಗಿನ ಟೆಸ್ಟ್‌ನಿಂದ ಬೂಮ್ರಾ ದೂರ..!
ಟೀಂ ಇಂಡಿಯಾದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಬಾಂಗ್ಲಾದೇಶ ವಿರುದ್ಧ ನಡೆಯಲಿರುವ ಟೆಸ್ಟ್‌ನಿಂದ ದೂರ ಉಳಿಯಲಿದ್ದಾರೆ. ತವರಿನಲ್ಲಿ ನಡೆಯಲಿರುವ ಎರಡು ಟೆಸ್ಟ್ ಪಂದ್ಯಗಳ ಸರಣಿಯಿಂದ ಬೂಮ್ರಾ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ.
ಕೆಲಸದ ಹೊರೆ ನಿರ್ವಹಣೆಯ ಭಾಗವಾಗಿ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಿಂದ ಬೂಮ್ರಾ ಅವರಿಗೆ ವಿಶ್ರಾಂತಿ ನೀಡಲು ಆಯ್ಕೆದಾರರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.
ಟೀಂ ಇಂಡಿಯಾ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಟೆಸ್ಟ್ ಪಂದ್ಯ ಸೆಪ್ಟೆಂಬರ್ 19 ರಿಂದ ಶುರುವಾಗಲಿದ್ದು, ಇದು ಎರಡು ಪಂದ್ಯಗಳ ಟೆಸ್ಟ್ ಸರಣಿಯಾಗಿದೆ.
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2025 ರ ಭಾಗವಾಗಿರುವ ಈ ಸರಣಿಯನ್ನು ಗೆಲ್ಲುವುದು ಭಾರತಕ್ಕೆ ಅನಿವಾರ್ಯವಾಗಿದ್ದು, ಶಸ್ತ್ರ ಚಿಕಿತ್ಸೆಯ ನಂತರ ಭಾರತ ತಂಡದಿಂದ ದೂರ ಉಳಿದಿರುವ ಮೊಹಮ್ಮದ್ ಶಮಿ ಈ ಸರಣಿಯಲ್ಲಿ ರೀ ಎಂಟ್ರಿ ಕೊಡಲಿದ್ದಾರೆ. ಸುಮಾರು 10 ತಿಂಗಳ ಸುದೀರ್ಘ ಅಂತರದ ನಂತರ ಶಮಿ ಅಖಾಡಕ್ಕೆ ಇಳಿಯಲಿದ್ದಾರೆ.
ಮುಂಬರುವ ಟೆಸ್ಟ್ ಸರಣಿಯ ಹಿನ್ನೆಲೆಯಲ್ಲಿ ಅವರಿಗೆ ವಿಶ್ರಾಂತಿ ನೀಡಲು ಟೀಂ ಇಂಡಿಯಾ ಮ್ಯಾನೇಜ್‌ಮೆಂಟ್ ಬಯಸಿದೆ ಎನ್ನಲಾಗಿದ್ದು, ಬುಮ್ರಾಗೆ ವಿಶ್ರಾಂತಿ ನೀಡುವ ಬಗ್ಗೆ ಆಯ್ಕೆಗಾರರು ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಎಂದು ತಿಳಿದುಬಂದಿದೆ.
ನವೆಂಬರ್‌ನಲ್ಲಿ ಸರಣಿ ಆರಂಭವಾಗಲಿದ್ದು, ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯ ನಂತರ ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಮೂರು ಟೆಸ್ಟ್ ಸರಣಿಯನ್ನು ಆಡಲಿದೆ.
ಟಿ20 ವಿಶ್ವಕಪ್ ಗೆದ್ದ ನಂತರ ವಿಶ್ರಾಂತಿಯಲ್ಲಿರುವ ಬೂಮ್ರಾ ಶ್ರೀಲಂಕಾ ಪ್ರವಾಸದಿಂದ ಹೊರಗುಳಿದಿದ್ದರು. ಶ್ರೀಲಂಕಾ ಪ್ರವಾಸದಲ್ಲಿ ಯುವ ತಂಡ ಟಿ20 ಪಂದ್ಯವನ್ನು ಗೆದ್ದುಕೊಂಡಿತ್ತಾದರೂ, ರೋಹಿತ್ ಶರ್ಮಾ ನಾಯಕತ್ವದಲ್ಲಿ ODI ಪಂದ್ಯ ಗೆಲ್ಲುವಲ್ಲಿ ಬ್ಯೂ ಬಾಯ್ಸ್ ಎಡವಿದ್ದರು.
2023 ರ ಏಕದಿನ ವಿಶ್ವಕಪ್ ನಂತರ ತಂಡದಿಂದ ದೂರವಿದ್ದ ಮೊಹಮ್ಮದ್ ಶಮಿ ತಂಡಕ್ಕೆ ರೀ ಎಂಟ್ರಿ ಕೊಡುತ್ತಿದ್ದು, ಪಂದ್ಯದಲ್ಲಿ ಬೂಮ್ರಾ ಅವರ ಅನುಪಸ್ಥಿತಿಯನ್ನು ಶಮಿ ತುಂಬಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.