IND vs AUS: ಎದುರಾಳಿಗಳ ಎದೆ ನಡುಗಿಸಿದ ಜಸ್ಪ್ರಿತ್‌ ಬೂಮ್ರಾ..! 5 ವಿಕೆಟ್‌ ಪಡೆದು ಕಪಿಲ್‌ ದೇವ್‌ ದಾಖಲೆ ಮುರಿದ ಭಾರತದ ವೇಗಿ

Sun, 15 Dec 2024-1:20 pm,

Jasprit Bumrah: ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರು ಗಬ್ಬಾ ಟೆಸ್ಟ್ನಲ್ಲಿ 5 ವಿಕೆಟ್‌ ಪಡೆದು ಅದ್ಭುತ ಪ್ರದರ್ಶನ ನೀಡಿದ್ದಾರೆ. ಈ ಮೂಲಕ ವೇಗಿ 12 ನೇ ಬಾರಿ 5 ವಿಕೆಟ್‌ ಪಡೆದ ಸಾಧನೆ ಮಾಡಿದ್ದಾರೆ.  

ಆಸ್ಟ್ರೇಲಿಯಾ ವಿರುದ್ಧ ಬುಮ್ರಾ ಮೂರನೇ ಬಾರಿಗೆ ಈ ಸಾಧನೆ ಮಾಡಿದ್ದು, ಕುತೂಹಲಕಾರಿ ಸಂಗತಿಯೆಂದರೆ ಅವರು ಈ  5 ವಿಕೆಟ್‌ಗಳ ಸಾಧನೆಯನ್ನು ಮಾಡಿದ್ದಾರೆ.  

ಈ ಸರಣಿಯಲ್ಲಿ ಬುಮ್ರಾ ಎರಡನೇ ಭಾರಿಗೆ 5 ವಿಕೆಟ್‌ ಪಡೆದ ಸಾಧನೆ ಮಾಡಿದ್ದಾರೆ. ಮೊದಲ ಟೆಸ್ಟ್‌ನಲ್ಲೂ ಬೂಮ್ರಾ ತಮ್ಮ ಬೌಲಿಂಗ್‌ನ ಮೂಲಕ ಎದುರಾಳಿಯ ಎದೆ ನಡುಗಿಸಿದರು.   

ಆಸ್ಟ್ರೇಲಿಯಾದ ಐವರು ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳನ್ನು ಬುಮ್ರಾ ಔಟ್ ಮಾಡಿದರು. ಬುಮ್ರಾ ಉಸ್ಮಾನ್ ಖವಾಜಾ, ನಾಥನ್ ಮೆಕ್‌ಸ್ವೀನಿ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವ್ ಸ್ಮಿತ್ ಮತ್ತು ಟ್ರಾವಿಸ್ ಹೆಡ್ ಅವರನ್ನು ಪೆವಿಲಿಯನ್‌ಗೆ ಕಳುಹಿಸಿದರು.  

ಸ್ಟೀವ್ ಸ್ಮಿತ್ (101) ಮತ್ತು ಟ್ರಾವಿಸ್ ಹೆಡ್ (152) ನಂತಹ ಪ್ರಮುಖ ವಿಕೆಟ್‌ಗಳನ್ನು ಪಡೆಯುವಲ್ಲಿ ಯಶಸ್ವಿಯಾದರು. ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್‌ಗಳ ವಿರುದ್ಧ ಬುಮ್ರಾ ಏಕಾಂಗಿಯಾಗಿ ಹೋರಾಟವನ್ನು ಮುಂದುವರೆಸಿದರು.  

ಜಸ್ಪ್ರೀತ್ ಬುಮ್ರಾ ಅವರು SENA ದೇಶಗಳಲ್ಲಿ (ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ) 5 ವಿಕೆಟ್ ಕಬಳಿಸುವ ವಿಷಯದಲ್ಲಿ ಹೊಸ ದಾಖಲೆಯನ್ನು ಬರೆದಿದ್ದಾರೆ.   

ಈ ದೇಶಗಳಲ್ಲಿ 7 ಬಾರಿ ಈ ಸಾಧನೆ ಮಾಡಿದ್ದ ಬುಮ್ರಾ 8 ಬಾರಿ 5 ವಿಕೆಟ್ ಕಬಳಿಸುವ ಮೂಲಕ ಕಪಿಲ್ ದೇವ್ ಅವರ ದಾಖಲೆಯನ್ನು ಮುರಿದಿದ್ದಾರೆ.  

ಆಸ್ಟ್ರೇಲಿಯಾ ನೆಲದಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಜಸ್ಪ್ರೀತ್ ಬುಮ್ರಾ ಮತ್ತೊಂದು ಸಾಧನೆ ಮಾಡಿದ್ದಾರೆ. ಆಸ್ಟ್ರೇಲಿಯಾದಲ್ಲಿ ಗರಿಷ್ಠ 5 ವಿಕೆಟ್ ಪಡೆದ ಭಾರತೀಯ ಬೌಲರ್‌ಗಳ ವಿಷಯದಲ್ಲಿ ಬುಮ್ರಾ ಇದುವರೆಗೆ ಬಿಷನ್ ಸಿಂಗ್ ಬೇಡಿ ಮತ್ತು ಭಾಗವತ್ ಚಂದ್ರಶೇಖರ್ ಅವರನ್ನು ಸರಿಗಟ್ಟಿದ್ದಾರೆ.  

ZEENEWS TRENDING STORIES

By continuing to use the site, you agree to the use of cookies. You can find out more by Tapping this link