ಹೊಸ ವರ್ಷದ ಮೊದಲ ನಾಲ್ಕು ತಿಂಗಳಲ್ಲಿ ಮೇಷ ರಾಶಿಯಲ್ಲಿ ಗುರುವಿನ ಸಂಚಾರ, ಈ ಜನರ ಧನ-ಸಂಪತ್ತಿನಲ್ಲಿ ಅಪಾರ ವೃದ್ದಿ!

Tue, 19 Dec 2023-3:41 pm,

Guru Gochar 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಹೊಸ ವರ್ಷಾರಂಭದಲ್ಲಿ ಮೊದಲ ನಾಲ್ಕು ತಿಂಗಳು ಗುರು ಮೇಷ ರಾಶಿಯಲ್ಲಿಯೇ ಸಂಚರಿಸಲಿದ್ದಾನೆ. ಇದರಿಂದ ಕೆಲ ರಾಶಿಗಳ ಜನರಿಗೆ ಭಾರಿ ಧನ ಸಂಪತ್ತಿನ ಲಾಭ ಸಿಗಲಿದೆ. Spiritual News In Kannada

ಮಿಥುನ ರಾಶಿ: ಈ ಅವಧಿಯಲ್ಲಿ ಗುರು ನಿಮ್ಮ ಗೋಚರ ಜಾತಕದ ಏಕಾದಶ ಭಾವದಲ್ಲಿ ಸಂಚರಿಸಲಿದ್ದಾನೆ. ಇದರಿಂದ ನಿಮಗೆ ಭಾಗ್ಯದ ಸಂಪೂರ್ಣ ಬೆಂಬಲ ಸಿಗಲಿದೆ. ಲಾಭ ಹಾಗೂ ಉನ್ನತಿಯ ಹಲವು ಅವಕಾಶಗಳು ನಿಮಗೆ ಲಭಿಸಲಿವೆ. ಆದಾಯದ ಹೊಸ ಮೂಲಗಳು ತೆರೆದುಕೊಳ್ಳಲಿವೆ. ಈ ಅವಧಿಯಲ್ಲಿ ನಿಮ್ಮ ಆದಾಯ ಕೂಡ ಹೆಚ್ಚಾಗಲಿದೆ. ಹಳೆ ಹೂಡಿಕೆಗಳಿಂದ ನಿಮಗೆ ಲಾಭ ಸಿಗಲಿದೆ. ವ್ಯಾಪಾರ ವರ್ಗದ ಜನರು ಹಲವು ಮಹತ್ವದ ಒಪ್ಪಂದಗಳನ್ನು ಮಾಡಿಕೊಳ್ಳುವರು. ಈ ಒಪ್ಪಂದಗಳು ನಿಮಗೆ ಅತ್ಯಂತ ಶುಭ ಸಾಬೀತಾಗಲಿವೆ. ವಾಹನ-ಸಂಪತ್ತು ಸುಖ ಪ್ರಾಪ್ತಿಯಾಗಲಿದೆ. ಎಲ್ಲ ಕೆಲಸಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ಈ ಅವಧಿ ಹೂಡಿಕೆಗೆ ಉತ್ತಮ ಅವಧಿಯಾಗಿದೆ. 

ಸಿಂಹ ರಾಶಿ: ಗುರು ಈ ಅವಧಿಯಲ್ಲಿ ನಿಮ್ಮ ಗೋಚರ ಜಾತಕದ ನವಮ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಅದೃಷ್ಟದ ಸಂಪೂರ್ಣ ಬೆಂಬಲ ಸಿಗಲಿದೆ. ಉನ್ನತ ಶಿಕ್ಷಣ ಪಡೆದುಕೊಳ್ಳಲು ಬಯಸುವ ಜನರಿಗೆ ಅವಧಿ ಅವರ ಪರವಾಗಿರಲಿದೆ. ವೃತ್ತಿ ಜೀವನದಲ್ಲಿಯೂ ಕೂಡ ನಿಮಗೆ ಒಂದರ ಮೇಲೊಂದರಂತೆ ಯಶಸ್ಸು ಸಿಗಲಿದೆ. ಮನೆ ಅಥವಾ ಕುಟುಂಬದಲ್ಲಿ ಧಾರ್ಮಿಕ ಅಥವಾ ಮಂಗಳ ಕಾರ್ಯ ನಡೆಯುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಕೆಲಸ ಕಾರ್ಯಗಳ ನಿಮಿತ್ತ ಯಾತ್ರೆ ಸಂಭವಿಸುವ ಸಾಧ್ಯತೆ ಇದೆ. ಈ ಯಾತ್ರೆ ನಿಮಗೆ ಶುಭ ಫಲಗಳನ್ನು ನೀಡಲಿದೆ. ನೌಕರವರ್ಗದ ಜನರಿಗೆ ಪದೋನ್ನತಿಯ ಎಲ್ಲಾ ಸಂಕೇತಗಳು ಗೋಚರಿಸುತ್ತಿವೆ. 

ಮೀನ ರಾಶಿ: ಗುರುಗ್ರಹ ನಿಮ್ಮ ಗೋಚರ ಜಾತಕದ ಚಣ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ಪ್ರತಿಷ್ಠಿತ ವ್ಯಕ್ತಿಗಳ ಜೊತೆಗೆ ನಿಮ್ಮ ಒಡನಾಟ ಹೆಚ್ಚಾಗಲಿದೆ. ದೂರದ ಪ್ರಯಾಣ ಸಂಭವಿಸುವ ಸಾಧ್ಯತೆ ಇದೆ. ಕಾಲಕಾಲಕ್ಕೆ ಧನಲಾಭ ಕೂಡ ಉಂಟಾಗಲಿದೆ. ಈ ಅವಧಿಯಲ್ಲಿ ನಿಮ್ಮ ಮಾತಿನ ಪ್ರಭಾವ ಹೆಚ್ಚಾಗಲಿದ್ದು, ಜನರು ನಿಮ್ಮತ್ತ  ಆಕರ್ಷಿತರಾಗಲಿದ್ದಾರೆ. ಈ ಅವಧಿಯಲ್ಲಿ ನಿಮಗೆ ಭಾಗ್ಯದ ಸಂಪೂರ್ಣ ಬೆಂಬಲ ಕೂಡ ಪ್ರಾಪ್ತಿಯಾಗಲಿದೆ. ಆರ್ಥಿಕ ಸ್ಥಿತಿ ಕೂಡ ಸುಧಾರಣೆಯಾಗಲಿದೆ.  ಅದೃಷ್ಟದ ಬೆಂಬಲ ಇರುವ ಕಾರಣ ಉನ್ನತಿಯ ಎಲ್ಲಾ ಮಾರ್ಗಗಳು ತೆರೆದುಕೊಳ್ಳಲಿವೆ ಮತ್ತು ನಿಮಗೆ ಉತ್ತಮ ಧನಲಾಭವಾಗುವ ಸಾಧ್ಯತೆ ಇದೆ. 

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)

ZEENEWS TRENDING STORIES

By continuing to use the site, you agree to the use of cookies. You can find out more by Tapping this link