Gajlakshmi Rajyog 2024: ಗುರು-ಶುಕ್ರರ ಯುತಿಯಿಂದ ಗಜಲಕ್ಷ್ಮಿ ರಾಜಯೋಗ, 3 ರಾಶಿಯವರಿಗೆ ಭಾರೀ ಅದೃಷ್ಟ

Wed, 31 Jan 2024-7:01 am,

ಜ್ಯೋತಿಷ್ಯ ಶಾಸ್ತ್ರದಲ್ಲಿ, ಕೆಲವು ಯೋಗಗಳನ್ನು ಶುಭ ಯೋಗಗಳು ಎಂದು ಪರಿಗಣಿಸಲಾಗಿದೆ. ಅಂತಹ ಶುಭ ಯೋಗಗಳಲ್ಲಿ ಗಜಲಕ್ಷ್ಮಿ ರಾಜಯೋಗವೂ ಒಂದು. 

ಪ್ರಸ್ತುತ, ದೇವಗುರು ಬೃಹಸ್ಪತಿಯು ಮೇಷ ರಾಶಿಯಲ್ಲಿ ನೆಲೆಸಿದ್ದಾರೆ. 

ಜ್ಯೋತಿಷ್ಯ ಶಾಸ್ತ್ರದಲ್ಲಿ ಐಷಾರಾಮಿ ಜೀವನದ ಅಂಶ ಎಂದು ಪರಿಗಣಿಸಲಾಗಿರುವ ಶುಕ್ರ ಏಪ್ರಿಲ್ 24ರಂದು ಮೇಷ ರಾಶಿಗೆ ಪ್ರವೇಶಿಸಲಿದ್ದಾನೆ. 

ಏಪ್ರಿಲ್ 24ರಂದು ಮೇಷ ರಾಶಿಗೆ ಶುಕ್ರನ ಪ್ರವೇಶದೊಂದಿಗೆ ಮೇಷ ರಾಶಿಯಲ್ಲಿ ಗುರು-ಶುಕ್ರರ ಸಂಯೋಗ ಏರ್ಪಟ್ಟು ಅತ್ಯಂತ ಮಂಗಳಕರ ಯೋಗಗಳಲ್ಲಿ ಒಂದಾದ ಗಜಲಕ್ಷ್ಮಿ ರಾಜಯೋಗ ನಿರ್ಮಾಣವಾಗಲಿದೆ.

ಗಜಲಕ್ಷ್ಮಿ ರಾಜಯೋಗದ ಪ್ರಭಾವ ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಈ ಸಮಯವನ್ನು ಕೆಲವು ರಾಶಿಯವರಿಗೆ ಅದೃಷ್ಟದ ಸಮಯ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳು ಯಾವುವೆಂದರೆ...

ಮೇಷ ರಾಶಿ:  ಗಜಲಕ್ಷ್ಮಿ ರಾಜಯೋಗವು ಮೇಷ ರಾಶಿಯವರ ಜೀವನದಲ್ಲಿ ಶುಭ ಫಲಗಳನ್ನು ತರಲಿದೆ. ಈ ಸಮಯದಲ್ಲಿ ನೀವು ಕೈ ಹಾಕಿದ ಪ್ರತಿ ಕೆಲಸದಲ್ಲಿಯೂ ಯಶಸ್ಸನ್ನು ಪಡೆಯುತ್ತೀರಿ. ವ್ಯಾಪಾರದಲ್ಲಿ ಲಾಭ, ಉದ್ಯೋಗ ಕ್ಷೇತ್ರದಲ್ಲಿ ಪ್ರಗತಿಯನ್ನು ಕಾಣುವಿರಿ. 

ಮಿಥುನ ರಾಶಿ:  ಗುರು-ಶುಕ್ರರ ಸಂಯೋಗದಿಂದ ರೂಪುಗೊಳ್ಳಲಿರುವ ಗಜಲಕ್ಷ್ಮಿ ರಾಜಯೋಗವು ಮಿಥುನ ರಾಶಿಯವರಿಗೆ ಅನಿರೀಕ್ಷಿತ ಹಣಕಾಸಿನ ಲಾಭವನ್ನು ನೀಡಲಿದೆ. ಇದರಿಂದ ಆರ್ಥಿಕ ಸ್ಥಿತಿ ಮೊದಲಿಗಿಂತ ಉತ್ತಮವಾಗಿರುತ್ತದೆ. ನಿಮ್ಮ ವೃತ್ತಿಜೀವನದಲ್ಲಿಯೂ ನೀವು ಅಪಾರ ಯಶಸ್ಸನ್ನು ಕಾಣಬಹುದು. 

ಕರ್ಕಾಟಕ ರಾಶಿ:  ಗಜಲಕ್ಷ್ಮಿ ರಾಜಯೋಗವು ಕರ್ಕಾಟಕ ರಾಶಿಯವರ ಅದೃಷ್ಟವನ್ನು ಬೆಳಗಿಸಲಿದೆ. ಈ ಸಮಯದಲ್ಲಿ ನೀವು ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಯಶಸ್ಸನ್ನು ಪಡೆಯುವ ಸಾಧ್ಯತೆ ಇದೆ. ವ್ಯಾಪಾರ ಕ್ಷೇತ್ರದಲ್ಲಿ ಲಾಭ ಪಡೆಯುವಿರಿ. ಹೊಸ ಕೆಲಸ ಆರಂಭಿಸಲು ಯೋಚಿಸುತ್ತಿದ್ದರೆ ಇದು ಅತ್ಯುತ್ತಮ ಸಮಯ ಎಂತಲೇ ಹೇಳಬಹುದು. 

ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link