Jupiter Venus Yuti 2024: ಹನ್ನೆರಡು ವರ್ಷಗಳ ಬಳಿಕ ಗುರು-ಶುಕ್ರರ ಮೈತ್ರಿ, ಧನ ಕುಬೇರ ಕೃಪೆಯಿಂದ ಈ ಜನರ ಜೀವನದಲ್ಲಿ ಗೋಲ್ಡನ್ ಟೈಮ್ ಆರಂಭ!
Jupiter Venus Yuti 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಮೇಷ ರಾಶಿಯಲ್ಲಿ ಗುರು ಹಾಗೂ ಶುಕ್ರರ ಯುತಿ ನೆರವೇರಲಿದ್ದು, ಧನ ಕುಬೇರ ಕೃಪೆಯಿಂದ ಈ ರಾಶಿಗಳ ಜನರ ಜೀವನದಲ್ಲಿ ಚಿನ್ನದಂತಹ ಕಾಲ ಆರಂಭಗೊಳ್ಳಲಿದೆ. (Spiritual News In Kannada)
ಮೇಷ ರಾಶಿ: ನಿಮ್ಮ ಗೋಚರ ಜಾತಕದ ಲಗ್ನ ಭಾವದಲ್ಲಿ ಈ ಯುತಿ ನೆರವೇರುತ್ತಿದೆ. ಇದರಿಂದ ನಿಮ್ಮ ವ್ಯಕ್ತಿತ್ವದಲ್ಲಿ ಹೊಸ ಹೊಳಪು ಕಾಣಲು ನಿಮಗೆ ಸಿಗಲಿದೆ. ಸಾಮಾಜಿಕ ಕ್ಷೇತ್ರದಲ್ಲಿ ಪ್ರಭಾವ ಪ್ರತಿಷ್ಠೆಯ ಲಾಭ ನಿಮಗೆ ಸಿಗಲಿದೆ. ನೌಕರಿಯಲ್ಲಿ ಅಧಿಕಾರಿ ವರ್ಗದವರ ಪ್ರೋತ್ಸಾಹ ಹಾಗೂ ಲಾಭ ಸಿಗಲಿದೆ. ಈ ಅವಧಿಯಲ್ಲಿ ನೀವು ಸಾಕಷ್ಟು ಯೋಚಿಸಿ ನಿರ್ಧಾರಗಳನ್ನು ಕೈಗೊಳ್ಳುವಿರಿ. ಆರ್ಥಿಕ ಸ್ಥಿತಿಯಲ್ಲಿ ಅಪಾರ ಸುಧಾರಣೆ ಕಂಡು ಬರಲಿದೆ. ಆಸೆ ಆಕಾಂಕ್ಷೆಗಳು ಈಡೇರಲಿವೆ. ಹೊಸ ಕೆಲಸ ಆರಂಭಿಸಲು ಇದು ಯೋಗ್ಯ ಕಾಲ.
ತುಲಾ ರಾಶಿ: ಈ ಮೈತ್ರಿ ನಿಮ್ಮ ಗೋಚರ ಜಾತಕದ ಸಪ್ತಮ ಭಾವದಲ್ಲಿ ನಾರವೆರುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ವಿವಾಹಿತರ ವೈವಾಹಿಕ ಜೀವನ ಸುಮಧುರವಾಗಿರಲಿದೆ. ಸಂಗಾತಿಗಳ ನಡುವೆ ಒಳ್ಳೆಯ ಸಮತೋಲನ ಇರಲಿದೆ. ಅವಿವಾಹಿತರಿಗೆ ವಿವಾಹ ಪ್ರಸ್ತಾಪಗಳು ಬರುವ ಸಾಧ್ಯತೆಗಳಿವೆ. ಒಂದು ವೇಳೆ ನೀವು ಪಾರ್ಟ್ನರ್ ಶಿಪ್ ನಲ್ಲಿ ವ್ಯಾಪಾರ ಮಾಡುತ್ತಿದ್ದರೆ, ನಿಮಗೆ ಉತ್ತಮ ಧನಲಾಭ ಉಂಟಾಗುವ ಸಾಧ್ಯತೆ ಇದೆ. ಸಾಹಸ ಸಾಮರ್ಥ್ಯ ಹೆಚ್ಚಾಗಲಿದೆ. ನೌಕರಿಯಲ್ಲಿ ನಿಮಗೆ ಪ್ರಮೋಷನ್ ಸಿಗುವ ಸಾಧ್ಯತೆ ಇದೆ.
ಮೀನ ರಾಶಿ: ಈ ಮೈತ್ರಿ ನಿಮ್ಮ ಗೋಚರ ಜಾತಕದ ಧನ ಹಾಗೂ ವಾಣಿಯ ಭಾವದಲಿ ನೆರವೇರುತ್ತಿದೆ. ಇದರಿಂದ ಈ ಅವಧಿಯಲ್ಲಿ ನಿಮಗೆ ಕಾಲಕಾಲಕ್ಕೆ ಆಕಸ್ಮಿಕ ಧನಲಾಭ ಸಿಗಲಿದೆ. ನಿಮ್ಮ ಮಾತನಾಡುವ ಶೈಲಿಯಲ್ಲಿ ಬದಲಾವಣೆಯನ್ನು ನೀವು ಗಮನಿಸಬಹುದು. ಸುಖ ಸೌಕರ್ಯಗಳು ಪ್ರಾಪ್ತಿಯಾಗಲಿವೆ. ಈ ಅವಧಿಯಲ್ಲಿ ನಿಮಗೆ ವಾಹನ ಸುಖ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಈ ಅವಧಿಯಲ್ಲಿ ಅವರ ಸಿಲುಕಿಹಾಕಿಕೊಂಡ ಧನ ಅವರತ್ತ ಮರಳಲಿದೆ.
(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)