ಜೈಲಿನಲ್ಲಿರುವ ದರ್ಶನ್ ಕಳೆದ 16 ದಿನದಲ್ಲಿ ಎಷ್ಟು ಕೆಜಿ ತೂಕ ಕಳೆದುಕೊಂಡಿದ್ದಾರೆ ಗೊತ್ತಾ? ತಿಳಿದ್ರೆ ಪ್ಯಾನ್ಸ್ ಶಾಕ್ ಆಗ್ತಾರೆ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಾಯಕ ದರ್ಶನ್ ತೂಗುದೀಪ್ ಬಂಧನವಾಗಿ ಇಂದಿಗೆ ಒಂದು ತಿಂಗಳಾಗಿದೆ. ಹೊರಗಡೆ ಐಷಾರಾಮಿ ಜೀವನ ನಡೆಸುತ್ತಿದ್ದ ದರ್ಶನ್ ಈಗ ಜೈಲಿನಲ್ಲಿ ಕಾಲ ಕಳೆಯುತ್ತಿದ್ದಾರೆ.
ಪ್ರತಿದಿನ ಪಾರ್ಟಿಗಳಲ್ಲಿ ನಾನ್ ವೆಜ್ ತಿನಿಸುಗಳಲ್ಲೇ ಕಾಲ ಕಳೆಯುತ್ತಿದ್ದ ಈ ಸ್ಟಾರ್ ಹೀರೋ ಈಗ ಜೈಲಿನ ನಾಲ್ಕು ಗೋಡೆಗಳ ಮಧ್ಯೆ ಬಂಧಿಯಾಗಿದ್ದಾರೆ. ದರ್ಶನ್ ಜೈಲು ಸೇರಿದ ಬಳಿಕ ಅವರ ಆರೋಗ್ಯದ ಮೇಲೂ ಸಾಕಷ್ಟು ಪರಿಣಾಮ ಬೀರಿದೆ. ಪರಪ್ಪನ ಅಗ್ರಹಾರದ ಅಧಿಕಾರಿಗಳಲ್ಲಿ ಆತಂಕ ಮೂಡಿದಂತಿದೆ.
ರೇಣುಕಾಸ್ವಾಮಿ ಹತ್ಯೆಯ ನಂತರ ಜೂನ್ 11 ರಂದು ದರ್ಶನ್ ಅವರನ್ನು ಬಂಧಿಸಲಾಗಿತ್ತು. ಅಂದಿನಿಂದ ದರ್ಶನ್ ಜೈಲಿನಲ್ಲಿದ್ದಾರೆ. ಪ್ರಕರಣದಿಂದ ಮಾನಸಿಕ ಖಿನ್ನತೆಗೆ ಒಳಗಾಗಿರುವ ದರ್ಶನ್ ಜೈಲಿನಲ್ಲಿ ಸರಿಯಾದ ಊಟ ತಿನ್ನದೆ ತೂಕ ಇಳಿಸಿಕೊಂಡಿದ್ದಾರೆ.
ಕಳೆದ ಹದಿನಾರು ದಿನಗಳಲ್ಲಿ ದರ್ಶನ್ ತೂಕ 10 ಕೆಜಿ ಇಳಿಕೆ ಆಗಿದೆ ಎನ್ನಲಾಗಿದೆ. ದರ್ಶನ್ ಆರೋಗ್ಯದ ಬಗ್ಗೆ ಪರಪ್ಪನ ಅಗ್ರಹಾರ ಜೈಲಿನ ಅಧಿಕಾರಿಗಳು ಚಿಂತಾಕ್ರಾಂತರಾಗಿದ್ದಾರೆ. ನಿತ್ಯವೂ ದರ್ಶನ್ ತೂಕ ಇಳಿಯುತ್ತಿದ್ದು, ಅನಾರೋಗ್ಯಕ್ಕೆ ತುತ್ತಾಗುವ ಸಾಧ್ಯತೆ ಇರುವ ಕಾರಣ ಅಧಿಕಾರಿಗಳು ನಿಗಾ ಇಟ್ಟಿದ್ದಾರೆ ಎನ್ನಲಾಗಿದೆ.
ದರ್ಶನ್ ಜೈಲಿನಲ್ಲಿ ಒಬ್ಬಂಟಿಯಾಗಿರಲು ಇಷ್ಟಪಡುತ್ತಾರೆ ಮತ್ತು ಯಾರೊಂದಿಗೂ ಹೆಚ್ಚು ಮಾತನಾಡುವುದಿಲ್ಲ ಎನ್ನಲಾಗಿದೆ. ಇದೆಲ್ಲವೂ ದರ್ಶನ್ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದ್ದು, ಜೈಲು ಅಧಿಕಾರಿಗಳು ದರ್ಶನ್ ಆರೋಗ್ಯದ ಮೇಲೆ ನಿಗಾ ಇಟ್ಟಿದ್ದಾರೆ.
ಈ ಹಿಂದೆ ದರ್ಶನ್ ಮತ್ತು ಪವಿತ್ರಾ ಗೌಡ ಇಬ್ಬರೂ ಪೊಲೀಸ್ ಕಸ್ಟಡಿಯಲ್ಲಿದ್ದಾಗ ಪವಿತ್ರ ಗೌಡ ಎರಡು ಬಾರಿ ಅಸ್ವಸ್ಥರಾಗಿದ್ದರು. ದರ್ಶನ್ ಗೆ ಯಾವುದೇ ಆರೋಗ್ಯ ಸಮಸ್ಯೆ ಎದುರಾಗಿಲ್ಲ. ಆದರೆ ಜೈಲಿಗೆ ಸೇರಿದ ನಂತರ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ.
ಅವರ ದೇಹದ ತೂಕವೂ ಕಡಿಮೆಯಾಗುತ್ತಿದೆ. ದರ್ಶನ್ ಮತ್ತು ಇತರ ಆರೋಪಿಗಳ ನ್ಯಾಯಾಂಗ ಬಂಧನ ಜುಲೈ 4 ರಂದು ಕೊನೆಗೊಂಡಿತು. ಆದರೆ ನ್ಯಾಯಾಧೀಶರು ಆರೋಪಿಗಳ ನ್ಯಾಯಾಂಗ ಬಂಧನವನ್ನು ಜುಲೈ 18ರವರೆಗೆ ವಿಸ್ತರಿಸಿದರು.