Karnataka Election Photos : ದೇವನಹಳ್ಳಿಯಲ್ಲಿ ಅಮಿತ್ ಶಾ ರೋಡ್ ಶೋ ಹೇಗಿತ್ತು ನೋಡಿ
ಚುನಾವಣಾ ಸಿದ್ಧತೆ ಕುರಿತು ಸಂಜೆ ಪಕ್ಷದ ಹಿರಿಯ ಪದಾಧಿಕಾರಿಗಳ ಜೊತೆ ಅಮಿತ್ ಶಾ ಸಭೆ ನಡೆಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ದೆಹಲಿಗೆ ವಾಪಸಾಗುವ ಮುನ್ನ ಶನಿವಾರ ಖಾಸಗಿ ಸುದ್ದಿವಾಹಿನಿಯೊಂದು ಆಯೋಜಿಸಿರುವ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ.
ದೇವನಹಳ್ಳಿಯಲ್ಲಿ ಅಮಿತ್ ಶಾ ಅವರು ಬಿಜೆಪಿ ಅಭ್ಯರ್ಥಿ ಪಿಳ್ಳ ಮುನಿಶಾಮಪ್ಪ ಪರ ಪ್ರಚಾರ ನಡೆಸಿದ್ದಾರೆ. ಜೆಡಿಎಸ್ ಹಾಲಿ ಶಾಸಕ ಎಲ್.ಎನ್.ನಾರಾಯಣಸ್ವಾಮಿ ಹಾಗೂ ಮಾಜಿ ಕೇಂದ್ರ ಸಚಿವ ಹಾಗೂ 7 ಬಾರಿ ಸಂಸದರಾಗಿದ್ದ ಕಾಂಗ್ರೆಸ್ ಅಭ್ಯರ್ಥಿ ಕೆ.ಮುನಿಯಪ್ಪ ವಿರುದ್ಧ ಮಿನಿಶಾಮಪ್ಪ ಸ್ಪರ್ಧಿಸಿದ್ದಾರೆ.
2019ರ ಲೋಕಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದ ಕೆ.ಎಚ್.ಮುನಿಯಪ್ಪ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದಾರೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ನಾರಾಯಣಸ್ವಾಮಿ (86,966 ಮತಗಳು) ಮತ್ತು ವೆಂಕಟಸ್ವಾಮಿ (69,956) ನಡುವೆ ಸ್ಪರ್ಧೆ ಏರ್ಪಟ್ಟಿತ್ತು. ಬಿಜೆಪಿ ಅಭ್ಯರ್ಥಿ ಕೆ.ನಾಗೇಶ್ 9,820 ಮತಗಳನ್ನು ಪಡೆದು 3ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರು.
ಕರ್ನಾಟಕದ 224 ವಿಧಾನಸಭಾ ಸ್ಥಾನಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಮೇ 10ರಂದು ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಹೊರಬೀಳಲಿದೆ. ಕರ್ನಾಟಕದಲ್ಲಿ 5.21 ಕೋಟಿ ಮತದಾರರಿದ್ದಾರೆ. ಇದರಲ್ಲಿ ಪುರುಷ ಮತದಾರರ ಸಂಖ್ಯೆ 2.6 ಕೋಟಿ ಆದರೆ, ಮಹಿಳಾ ಮತದಾರರ ಸಂಖ್ಯೆ 2.5 ಕೋಟಿ ಇದೆ.
ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಎಲ್ಲಾ ರಾಜಕೀಯ ಪಕ್ಷಗಳ ನಾಯಕರು ಅಬ್ಬರ ಪ್ರಚಾರ ನಡೆಸುತ್ತಿದ್ದಾರೆ. ಆಡಳಿತಾರೂಢ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಮತದಾರರನ್ನು ತಮ್ಮ ಕಡೆಗೆ ಸೆಳೆಯಲು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. ಎಲ್ಲಾ ಪಕ್ಷಗಳು ತಮ್ಮ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿವೆ.