PM Modi In Tumkur: ಕಲ್ಪವೃಕ್ಷದ ಬೀಡು ತುಮಕೂರಿನಲ್ಲಿ ‘ನಮೋ’ ಅಬ್ಬರದ ಮತಬೇಟೆ!

PM Modi In Tumkur: ತುಮಕೂರಿನಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. 'ಬಿಜೆಪಿ ಅಧಿಕಾರದಲ್ಲಿದ್ದಾಗ ಬಡವರು ಮತ್ತು ಗ್ರಾಮೀಣ ಪ್ರದೇಶಗಳೆರಡೂ ದಾಖಲೆ ಮಟ್ಟದಲ್ಲಿ ಅಭಿವೃದ್ಧಿಯಾಗುತ್ತಿವೆ’ ಎಂದು ಹೇಳಿದರು.

PM Modi In Tumkur: ಕಲ್ಪವೃಕ್ಷದ ಬೀಡು ತುಮಕೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಅಬ್ಬರದ ಪ್ರಚಾರ ನಡೆಸಿದರು. ವಿಧಾನಸಭಾ ಚುನಾವಣೆ ಪ್ರಚಾರ ನಿಮಿತ್ತ ತುಮಕೂರು ಗ್ರಾಮಾಂತರ ಭಾಗದ ಸರ್ಕಾರಿ ಕಾಲೇಜು ಮೈದಾನದಲ್ಲಿ ನಡೆದ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ‘ಬಿಜೆಪಿಯಿಂದ ಮಾತ್ರ ಕರ್ನಾಟಕದ ಅಭಿವೃದ್ಧಿ ಸಾಧ್ಯ’ ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಶುಕ್ರವಾರ ತುಮಕೂರು ಗ್ರಾಮಾಂತರ ಭಾಗದ ಸರ್ಕಾರಿ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಬೃಹತ್ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಬೃಹತ್ ಹಾರವನ್ನು ಹಾಕುವ ಮೂಲಕ ಸನ್ಮಾನಿಸಲಾಯಿತು.

2 /5

ತುಮಕೂರಿನಲ್ಲಿ ನಡೆದ ಸಮಾವೇಶದಲ್ಲಿ ತಮಗೆ ನೀಡಿದ ವಿಶೇಷ ಉಡುಗೊರೆಯನ್ನು ಖುಷಿಯಿಂದ ಸ್ವೀಕರಿಸಿದ ಪ್ರಧಾನಿ ಮೋದಿ.  

3 /5

ತುಮಕೂರಿನಲ್ಲಿ ಪ್ರಧಾನಿ ಮೋದಿಯವರು ಬಿಜೆಪಿ ಅಭ್ಯರ್ಥಿಗಳ ಪರ ಮತಬೇಟೆ ನಡೆಸಿದರು. ರೋಡ್ ಶೋ ಮಾಡುವ ಮೂಲಕ ಪ್ರಧಾನಿ ಮೋದಿಯವರು ಪ್ರಚಾರ ನಡೆಸಿದರು.

4 /5

ತುಮಕೂರಿನಲ್ಲಿ ರೋಡ್ ಶೋ ವೇಳೆ ಪುಟಾಣಿಯೊಬ್ಬಳು ಪ್ರಧಾನಿ ಮೋದಿಯವರತ್ತ ಕೈಬಿಸಿ ಖುಷಿ ವ್ಯಕ್ತಪಡಿಸಿದ್ದು ಹೀಗೆ ನೋಡಿ.

5 /5

ಪ್ರಧಾನಿ ಮೋದಿಯವರ ರೋಡ್ ಶೋ ಹಿನ್ನೆಲೆ ತುಮಕೂರಿನ ಬೀದಿಗಳಲ್ಲಿ ನೆರೆದಿದ್ದ ಜನಸ್ತೋಮ.