ಹೊಸಕೋಟೆಯಲ್ಲಿ ಶರತ್ ಪತ್ನಿಯ ಕಾರು ಧ್ವಂಸ

                                    

Karnataka Assembly Election: ರಾಜ್ಯದಲ್ಲಿ ಚುನಾವಣಾ ಕಾವು ದಿನೇ ದಿನೇ ಹೆಚ್ಚಾಗುತ್ತಿದೆ. ರಾಜಕೀಯ ಪಕ್ಷಗಳು ಮತಬೇಟೆಗಾಗಿ ಅಬ್ಬರದ ಪ್ರಚಾರವನ್ನು ಮುಂದುವರೆಸಿವೆ. ಈ ಮಧ್ಯೆ, ದುಷ್ಕರ್ಮಿಗಳು ಹೊಸಕೋಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡ ಪತ್ನಿ ಪ್ರತಿಭಾ ಶರತ್ ಅವರ ಇನ್ನೂವಾ ಕ್ರಿಸ್ಟಾ ಕಾರಿ‌ನ ಗ್ಲಾಸ್ ಗಳನ್ನು ಹೊಡೆದು ಹಾಕಿ ದುಷ್ಕೃತ್ಯ ಎಸಗಿದ್ದಾರೆ. 
 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /5

ಹೊಸಕೋಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡರ ಪತ್ನಿ ಪ್ರತಿಭಾ ಶರತ್ ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. 

2 /5

ಇಂದು ಬೆಳಿಗ್ಗೆ ಹೊಸಕೋಟೆ ನಗರದ ಪಾರ್ವತಿಪುರದಲ್ಲಿ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದ ವೇಳೆ ಪ್ರತಿಭಾ ಶರತ್ ಅವರ ಕಾರಿನ ಗಾಜುಗಳನ್ನು ಪುಡಿ ಪುಡಿ ಮಾಡಿರುವ ಕಿಡಿಗೇಡಿಗಳು.

3 /5

ಕಿಡಿಗೇಡಿಗಳಿಂದ ಇನ್ನೂವಾ ಕ್ರಿಸ್ಟಾ ಕಾರಿ‌ನ ಸೈಡ್ ಗ್ಲಾಸ್ಗಳನ್ನ ಹೊಡೆದು ಅಟ್ಟಹಾಸ.

4 /5

ಹೊಸಕೋಟೆಯಲ್ಲಿ ತನ್ನ ಪತಿ ಶರತ್ ಬಚ್ಚೇಗೌಡರ ಪರ ಬಿರುಸಿನ ಪ್ರಚಾರದಲ್ಲಿ ತೊಡಗಿರುವ ಪ್ರತಿಭಾ ಶರತ್. ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರನ್ನು ನಿಲ್ಲಿಸಿ ಪ್ರಚಾರದಲ್ಲಿ ತೊಡಗಿದ್ದ ವೇಳೆ ಈ ಘಟನೆ ನಡೆದಿದ್ದು, ಯುವಕ ಕಾರ್ ಮೇಲೆ ಕಲ್ಲು ತೂರಾಟ ನಡೆಸಿ ಪರಾರಿಯಾಗುತ್ತಿರುವ ದೃಶ್ಯ ಸೆರೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. 

5 /5

ಇನ್ನು ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಚುನಾವಣಾ ಅಧಿಕಾರಿಗಳು ಮತ್ತು ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.