Karnataka Weather Update 09-06-2023: ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತ ಇದೀಗ ಚಂಡಮಾರುತವಾಗಿ ಮಾರ್ಪಟ್ಟಿದೆ. ‘ಬಿಪರ್‌ಜೋಯ್’ ಹೆಸರಿನ ಚಂಡಮಾರುತ ಉತ್ತರಾಭಿಮುಖವಾಗಿ ಚಲಿಸಲು ಆರಂಭಿಸಿದ್ದು, ಕರ್ನಾಟಕದ ಕರಾವಳಿ ಭಾಗಕ್ಕೆ ಭಾರೀ ಸಂಕಷ್ಟ ಎದುರಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಕರ್ನಾಟಕ, ಮಹಾರಾಷ್ಟ್ರ, ಕೇರಳ, ಗುಜರಾತ್ ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಚಂಡಮಾರುತವು ಮುಂಗಾರು ಆಗಮನಕ್ಕೆ ಅಡ್ಡಿಯಾಗಿದೆ. ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ ಪ್ರಕಾರ ಜೂನ್ 8 ಅಥವಾ 9 ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸಬಹುದು. ಆದರೆ ಅದು ಬಲವಾಗಿರುವುದಕ್ಕಿಂತ ದುರ್ಬಲವಾಗಿರುತ್ತದೆ ಎಂದು ಹೇಳಲಾಗಿದೆ.
ಈ ಚಂಡಮಾರುತಕ್ಕೆ ಬೆಂಗಾಲಿ ಭಾಷೆಯಲ್ಲಿ ಬಿಪರ್ಜೋಯ್ (ವಿಪತ್ತು) ಎಂದು ಹೆಸರಿಸಲಾಗಿದೆ. ಬಾಂಗ್ಲಾದೇಶವು ಈ ಹೆಸರನ್ನು ಸೂಚಿಸಿದೆ. ಈ ಚಂಡಮಾರುತದ ಪ್ರಭಾವದಿಂದಾಗಿ ಭಾರತದ ಪಶ್ಚಿಮ ಕರಾವಳಿಯಲ್ಲಿ ಮಳೆಯಾಗಲಿದೆ ಎಂದು ಹೇಳಲಾಗುತ್ತಿದೆ
ಈ ಚಂಡಮಾರುತವು ಗೋವಾದ ನೈಋತ್ಯಕ್ಕೆ 950 ಕಿಮೀ, ಮುಂಬೈನಿಂದ 1,100 ಕಿಮೀ ದೂರದಲ್ಲಿದೆ. ಇನ್ನು ಪೋರಬಂದರ್ ನಿಂದ 1,490 ಕಿ.ಮೀ. ದೂರದಲ್ಲಿ ಕಂಡುಬಂದಿದೆ. ಈ ಚಂಡಮಾರುತ ಉತ್ತರಾಭಿಮುಖವಾಗಿ ಚಲಿಸುತ್ತಿದ್ದು, ಜೂನ್ 8 ರಂದು ಗೋವಾ, ಮಹಾರಾಷ್ಟ್ರದ ಕರಾವಳಿಯಲ್ಲಿ ಪ್ರಕ್ಷುಬ್ಧ ವಾತಾವರಣ ಇರಲಿದೆ ಎಂದು ಇಲಾಖೆ ತಿಳಿಸಿತ್ತು.
ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ಕರಾವಳಿಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಮೀನುಗಾರರು ನೀರಿಗಿಳಿಯದಂತೆ ಮತ್ತು ದಡಕ್ಕೆ ಮರಳುವಂತೆ ಎಚ್ಚರಿಕೆ ನೀಡಲಾಗಿದೆ. ದಿನ ಕಳೆದಂತೆ ಚಂಡಮಾರುತ ತೀವ್ರಗೊಳ್ಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಚಂಡಮಾರುತವು ವಾಯುವ್ಯ ದಿಕ್ಕಿನಲ್ಲಿ ಚಲಿಸುವ ಸಾಧ್ಯತೆ ಹೆಚ್ಚಿರುವುದರಿಂದ ಅದು ಭಾರತದ ಯಾವ ಕರಾವಳಿಗೆ ಅಪ್ಪಳಿಸಬಹುದು ಎಂಬುದು ಸ್ಪಷ್ಟವಾಗಿಲ್ಲ. ಈ ಚಂಡಮಾರುತವು ಈ ಹಿಂದೆ ಹವಾಮಾನ ಇಲಾಖೆ ಅಂದಾಜಿಸಿದಂತೆ ಜೂನ್ 3 ರಂದು ಆಗಮಿಸಬೇಕಿದ್ದ ಮುಂಗಾರು ವಿಳಂಬಕ್ಕೂ ಕಾರಣವಾಗಿದೆ. ಈಗ ಮುಂಗಾರು ಮತ್ತಷ್ಟು ವಿಳಂಬವಾಗಲಿದೆ ಎನ್ನಲಾಗುತ್ತಿದ್ದು, ನಿಖರ ದಿನಾಂಕವನ್ನು ಹವಾಮಾನ ಇಲಾಖೆ ಸ್ಪಷ್ಟವಾಗಿ ಹೇಳಿಲ್ಲ.