Rain Alert: ದೇಶದ ಈ ಭಾಗಗಳಿಗೆ ಕೆಲವೇ ಗಂಟೆಗಳಲ್ಲಿ ವರುಣನ ಎಂಟ್ರಿ! ಗುಡುಗು ಸಹಿತ ಬಿರುಗಾಳಿಯ ಮುನ್ಸೂಚನೆ
ಮಂಗಳವಾರ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಇಂದು ಕೆಲವೆಡೆ ಮಧ್ಯಾಹ್ನ-ಸಂಜೆ ವೇಳೆಗೆ ಬಲವಾದ ಗಾಳಿಯೊಂದಿಗೆ ಲಘು ಮಳೆ ಅಥವಾ ತುಂತುರು ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 41 ಡಿಗ್ರಿ ಸೆಲ್ಸಿಯಸ್ ಮತ್ತು 26 ಡಿಗ್ರಿ ಸೆಲ್ಸಿಯಸ್ ಎಂದು ನಿರೀಕ್ಷಿಸಲಾಗಿದೆ.
ಹವಾಮಾನ ಇಲಾಖೆಯ ಪ್ರಕಾರ, ದೆಹಲಿ, ಲೋನಿ ದೇಹತ್, ಹಿಂಡನ್ ಎಎಫ್ ಸ್ಟೇಷನ್, ಗಾಜಿಯಾಬಾದ್, ಇಂದಿರಾಪುರಂ, ಛಪ್ರೌಲಾ, ಸೋನಿಪತ್, ರೋಹ್ಟಕ್, ಖಾರ್ಖೋಡಾ (ಹರಿಯಾಣ) ಬರೌತ್, ಬಾಗ್ಪತ್, ಮೀರತ್, ಮೋದಿನಗರ, ಗಢಮುಕ್ತೇಶ್ವರ, ಹಾಪುರ್, ಸಿಯಾನಾ, ಸಿಕಂದರಾಬಾದ್, ಬುಲಂದ್‌ಶಹರ್, ಜಹಾಂಗೀರಾಬಾದ್ (ಯುಪಿ) ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.
ಉತ್ತರ ದೆಹಲಿ, ಈಶಾನ್ಯ ದೆಹಲಿ, ವಾಯುವ್ಯ ದೆಹಲಿ, ಪಶ್ಚಿಮ ದೆಹಲಿ, ಮಧ್ಯ-ದೆಹಲಿ, ಪೂರ್ವ ದೆಹಲಿ ಮತ್ತು NCR ನ ಇತರ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು.
ಇಲಾಖೆಯ ಪ್ರಕಾರ, ಮೇ 18 ರಂದು, ರಾಷ್ಟ್ರ ರಾಜಧಾನಿಯಲ್ಲಿ ಹಗಲಿನಲ್ಲಿ ಬಲವಾದ ಗಾಳಿ ಬೀಸಬಹುದು, ಮೇ 19 ರಂದು ಅತಿ ಕಡಿಮೆ ಮಳೆ ಅಥವಾ ಬಲವಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಇನ್ನು ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ.
ಕಳೆದ 2 ದಿನಗಳ ಹಿಂದೆ ಸುರಿದ ಧಾರಾಕಾರ ಮಳೆಗೆ ಬೆಟ್ಟಗುಡ್ಡಗಳು ಕುಸಿದಿವೆ. ಇನ್ನು ಕೆಲವೆಡೆ ಕೃಷಿ ಭೂಮಿಗಳು ಕೂಡ ಜಲಾವೃತವಾಗಿದೆ. ಮೋಕಾ ಚಂಡಮಾರುತದ ಅಪಾಯವಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಕರಾವಳಿ ಭಾಗದ ಮೀನುಗಾರರಿಗೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.