Karnataka Rain Update: ಮುಂದಿನ 3 ದಿನ ಬಹುತೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ಯಾವ್ಯಾವ ಜಿಲ್ಲೆಯಲ್ಲಿದೆ ವರ್ಷಧಾರೆ?
ಕರ್ನಾಟಕದಲ್ಲಿ ಒಂದೆಡೆ ಚುನಾವಣೆ ಬಿಸಿ ಇದ್ದರೆ, ಮತ್ತೊಂದೆಡೆ ಮಳೆರಾಯ ಕೊಂಚ ತಂಪೆರೆಯುತ್ತಿದ್ದಾನೆ. ಇನ್ನೂ ಕೂಡ ಮುಂದಿನ 3 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯಾವ್ಯಾವ ಜಿಲ್ಲೆಗಳಲ್ಲಿ ಮಳೆರಾಯನ ಅಬ್ಬರ ಇರಲಿದೆ ಎಂದು ನೋಡೋಣ.
ಬೆಂಗಳೂರು, ಉಡುಪಿ, ರಾಯಚೂರು, ಯಾದಗಿರಿ, ಕಲಬುರಗಿ, ವಿಜಯಪುರ, ಬೀದರ್, ಕೊಪ್ಪಳ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಮನಗರ, ಹೊಸಕೋಟೆ, ಕನಕಪುರ, ರಾಯಚೂರು, ಕೃಷ್ಣರಾಜಸಾಗರ, ಹಾಸನ, ಚಾಮರಾಜನಗರ, ಬೀದರ್, ಶ್ರೀರಂಗಪಟ್ಟಣ, ಚಿಕ್ಕನಹಳ್ಳಿ, ಬೆಳ್ಳೂರು, ಮೈಸೂರಿನಲ್ಲಿ ಮಳೆಯಾಗಲಿದೆ.
ಈಗಾಗಲೇ ಬಂಗಾಳ ಕೊಲ್ಲಿಯಲ್ಲಿ ಮೋಚಾ ಚಂಡಮಾರುತದ ರಚನೆಯಾಗಿದ್ದು, ಅದರ ಪ್ರಭಾವ ತೀವ್ರಗೊಳ್ಳುತ್ತಿದೆ. ಇದೇ ಕಾರಣದಿಂದ ವ್ಯಾಪಕವಾದ ಗುಡುಗು ಸಹಿತ ಮಳೆಯಾಗಲಿದೆ.
ಆದರೆ ಇನ್ನೇನು ಕೆಲವೇ ದಿನಗಳಲ್ಲಿ ಮತದಾನ ಪ್ರಕ್ರಿಯೆ ಪ್ರಾರಂಭಗೊಳ್ಳಲಿದೆ. ಈ ಸಂದರ್ಭದಲ್ಲಿ ಇವಿಎಂಗಳು ಮತ್ತು ವಿವಿಪ್ಯಾಟ್ ಯಂತ್ರಗಳ ರವಾನೆ ಸಂದರ್ಭದಲ್ಲಿ ಸಮಸ್ಯೆ ಎದುರಾಗಲಿದೆ ಎಂದು ಕರ್ನಾಟಕದ ಮುಖ್ಯ ಚುನಾವಣಾ ಕಚೇರಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.