ಈ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಭಾರೀ ಮಳೆ, ಗುಡುಗು ಮಿಂಚು ಸಹಿತ ವರುಣಾರ್ಭಟ.. 19 ಡಿಗ್ರಿ ಸೆಲ್ಸಿಯಸ್ಗೆ ಕುಸಿಯಲಿದೆ ತಾಪಮಾನ.!
ರಾಜ್ಯಾದ್ಯಂತ ನವೆಂಬರ್ 19 ರಿಂದ 25 ರವರೆಗೆ ಒಣ ಹವೆ ಇರಲಿದೆ. ನವೆಂಬರ್ 26 ಮತ್ತು 27 ರಂದು ಮಳೆಯಾಗುವ ನಿರೀಕ್ಷೆಯಿದೆ.
ಇಂದು ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ತುಂತುರು ಮಳೆ ಆಗಲಿದೆ.ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ 24 ಗಂಟೆಗಳು ಮೋಡ ಕವಿದ ವಾತಾವರಣ ಇರಲಿದ್ದು, ಕೆಲವೆಡೆ ಮಂಜು ಮುಸುಕಲಿದೆ.
ಮುಂದಿನ 24 ಗಂಟೆಗಳಲ್ಲಿ ಕೆಲವೆಡೆ ಮಳೆಯಾಗಬಹುದು. ಗರಿಷ್ಠ 28 ಮತ್ತು ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರುತ್ತದೆ ಎಂದು ಹೇಳಲಾಗಿದೆ.
ಕೆಲವು ತಾಪಮಾನ 19 ಡಿಗ್ರಿ ಸೆಲ್ಸಿಯಸ್ ತಲುಪುವುದರಿಂದ ಮೈ ಕೊರೆಯುವ ಚಳಿ ಬಿಡಬಹುದು ಎನ್ನಲಾಗಿದೆ.