Photo Gallery: ‘ಗೃಹಪ್ರವೇಶ’ ಮಾಡಿದ ಕಿರುತೆರೆ ಫೇಮಸ್ ಜೋಡಿ ಚಂದನ್-ಕವಿತಾ

ಕಿರುತೆರೆಯ ಫೇಮಸ್​ ಜೋಡಿ ಚಂದನ್ ಕುಮಾರ್ ಹಾಗೂ ಕವಿತಾ ಗೌಡ  ಹೊಸ ಮನೆಯ ಗೃಹಪ್ರವೇಶ ಮಾಡಿದ್ದಾರೆ.

ಬೆಂಗಳೂರು: ಕಿರುತೆರೆಯ ಫೇಮಸ್​ ಜೋಡಿ ಚಂದನ್ ಕುಮಾರ್ ಹಾಗೂ ಕವಿತಾ ಗೌಡ  ಹೊಸ ಮನೆಯ ಗೃಹಪ್ರವೇಶ ಮಾಡಿದ್ದಾರೆ. ಇತ್ತೀಚೆಗಷ್ಟೇ ತಾವು ಹೊಸ ಮನೆ ಖರೀದಿಸಿರುವುದಾಗಿ ಅಭಿಮಾನಿಗಳ ಜೊತೆಗೆ ಈ ದಂಪತಿ ಮಾಹಿತಿ ಹಂಚಿಕೊಂಡಿತ್ತು. ಇದೀಗ ಅದ್ದೂರಿಯಾಗಿ ಗೃಹಪ್ರವೇಶ ಮಾಡಿದ್ದು, ಅಭಿಮಾನಿಗಳು ಶುಭ ಹಾರೈಕೆಗಳನ್ನು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /5

ಕಿರುತೆರೆಯ ಫೇಮಸ್​ ಜೋಡಿ ಚಂದನ್ ಕುಮಾರ್ ಹಾಗೂ ಕವಿತಾ ಗೌಡ  ಹೊಸ ಮನೆಯ ಗೃಹಪ್ರವೇಶ ಮಾಡಿದ್ದಾರೆ.

2 /5

ನಟಿ ಕವಿತಾಗೌಡ ಮತ್ತು ನಟ ಚಂದನ್ ಕುಮಾರ್ ಹೊಸ ಮನೆ ಖರೀದಿಸಿದ್ದಾರೆ. ಈ ಬಗ್ಗೆ ಇತ್ತೀಚೆಗಷ್ಟೇ ಅಭಿಮಾನಿಗಳ ಜೊತೆಗೆ ಈ ಜೋಡಿ ಮಾಹಿತಿ ಹಂಚಿಕೊಂಡಿತ್ತು. ಇದೀಗ ಆಪ್ತರ ಸಮ್ಮುಖದಲ್ಲಿ ಅದ್ದೂರಿ ಗೃಹಪ್ರವೇಶ ಮಾಡಿದ್ದಾರೆ.

3 /5

ಚಂದು ಮತ್ತು ಕವಿತಾ ದಂಪತಿಯ ಗೃಹಪ್ರವೇಶದ ಫೋಟೋಗಳು ಮತ್ತು ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿವೆ. ಸಾವಿರಾರು ಅಭಿಮಾನಿಗಳು ಕಾಮೆಂಟ್ಸ್ ಮಾಡುವ ಮೂಲಕ ಜೋಡಿಗೆ ಶುಭ ಹಾರೈಸಿದ್ದಾರೆ.

4 /5

ಗೃಹಪ್ರವೇಶದ ದಿನ ಚಂದನ್ ಮತ್ತು ಕವಿತಾ ಟ್ರೇಡಿಷನಲ್‌ ಉಡುಪಿನಲ್ಲಿ ಮಿಂಚಿದರು. ಈ ಫೋಟೋಗಳ ಮೂಲಕ ಈ ಜೋಡಿಯ ಮದುವೆಯನ್ನು ಅಭಿಮಾನಿಗಳು ಮತ್ತೊಮ್ಮೆ ನೆನಪಿಸಿಕೊಂಡಿದ್ದಾರೆ.

5 /5

‘ಲಕ್ಷ್ಮಿ ಬಾರಮ್ಮ’ ಧಾರಾವಾಹಿ ಮೂಲಕ ಕನ್ನಡ ಕಿರುತೆರೆ ವೀಕ್ಷಕರಿಗೆ ಹತ್ತಿರವಾಗಿದ್ದ ಜೋಡಿ ಚಂದನ್ ಮತ್ತು ಕವಿತಾ ಪೋಷಕರ ಒಪ್ಪಿಗೆ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.