Kedar Rajyog 2024: ಬುಧ-ಶುಕ್ರರ ಕೃಪೆಯಿಂದ ಕೇದಾರ ರಾಜಯೋಗ ರಚನೆ, ಐಶ್ವರ್ಯ ಲಕ್ಷ್ಮಿಯ ಕೃಪೆಯಿಂದ ಈ ಜನರು ಮುಟ್ಟಿದೆಲ್ಲಾ ಚಿನ್ನವಾಗಲಿದೆ!

Fri, 02 Feb 2024-3:01 pm,

Kedar Rajyog 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಐದು ಶತಮಾನಗಳ ಬಳಿಕ ಕೇದಾರ ರಾಜಯೋಗ ರಚನೆಯಾಗುತ್ತಿದೆ. ಈ ರಾಜಯೋಗ ನಿರ್ಮಾಣದಿಂದ ಕೆಲ ರಾಶಿಗಳ ಜನರ ಬಾಳಲ್ಲಿ ಹಣದ ಹೊಳೆಯೇ ಹರಿಯಲಿದ್ದು, ಜೀವನದಲ್ಲಿ ಚಿನ್ನದಂತಹ ಕಾಲ ಆರಂಭವಾಗಲಿದೆ (Spiritual News In Kannada)  

ಮೇಷ ರಾಶಿ:ನಿಮ್ಮ ಗೋಚರ ಜಾತಕದ ಭಾಗ್ಯ ಸ್ಥಾನದಲ್ಲಿ ಮಂಗಳ, ಶುಕ್ರ ಹಾಗೂ ಬುಧ ಸ್ಥಿತರಾಗಿದ್ದಾರೆ. ಇದರ ಜೊತೆಗೆ ಸೂರ್ಯ ದಶಮ ಹಾಗೂ ಶನಿ ಆದಾಯ ಸ್ಥಾನದಲ್ಲಿ ಸ್ಥಿತರಾಗಿದ್ದಾರೆ. ಇದರಿಂದ ನಿಮಗೆ ನಿಮ್ಮ ವೃತ್ತಿ ಜೀವನ ಮತ್ತು ವ್ಯಾಪಾರದಲ್ಲಿ ಅಪಾರ ಯಶಸ್ಸು ಸಿಗಲಿದೆ. ಆದಾಯದ ಹೊಸ ಮಾರ್ಗಗಳು ತೆರೆದುಕೊಳ್ಳಲಿವೆ. ಆದಾಯದಲ್ಲಿ ಹೆಚ್ಚಳ ಸಂಭವಿಸಲಿದೆ. ಹೊಸ ಕೆಲಸದಲ್ಲಿ ಯಶಸ್ಸು ನಿಮ್ಮದಾಗಲಿದೆ. ನಿಮ್ಮ ಎಲ್ಲಾ ಆಸೆ ಆಕಾಕ್ಷೆಗಳು ಈಡೇರಲಿದ್ದು, ಹೂಡಿಕೆಯಿಂದ ನಿಮಗೆ ಸಾಕಷ್ಟು ಲಾಭ ಸಿಗಲಿದೆ.   

ಮಿಥುನ ರಾಶಿ: ಸೂರ್ಯ ನಿಮ್ಮ ಗೋಚರ ಜಾತಕದ ಅಷ್ಟಮ ಸ್ಥಾನದಲ್ಲಿ ಸ್ಥಿತನಾಗಿದ್ದು, ಶನಿ ಏಕಾದಶ ಭಾವದಲ್ಲಿದ್ದಾನೆ. ಇದರಿಂದ ವ್ಯಾಪಾರಿಗಳಿಗೆ ವ್ಯಾಪಾರದಲ್ಲಿ ಉತ್ತಮ ಲಾಭ ಸಿಗಲಿದೆ. ಅವಿವಾಹಿತರಿಗೆ ವಿವಾಹ ಪ್ರಸ್ತಾಪಗಳು ಬರಲಿವೆ. ಪ್ರೇಮ ಸಂಬಂಧದಲ್ಲಿರುವವರ ವಿವಾಹ ನೆರವೇರಲಿದೆ. ವಿದ್ಯಾರ್ಥಿಗಳ ಪಾಲಿಗೆ ಸಮಯ ಸಾಕಷ್ಟು ಅನುಕೂಲಕರವಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ಈ ಅವಧಿಯಲ್ಲಿ ನಿಮ್ಮ ಆಸೆಗಳು ಈಡೇರಲಿವೆ. ಹೊಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ.   

ತುಲಾ ರಾಶಿ: ನಿಮ್ಮ ಪಾಲಿಗೆ ಕೇದಾರ ರಾಜಯೋಗ ಸಾಕಷ್ಟು ಅನುಕೂಲಕರವಾಗಿದೆ. ಈ ಅವಧಿಯಲ್ಲಿ ನಿಮ್ಮ ಸ್ಥಾನಮಾನ ಪ್ರತಿಷ್ಠೆ ಹೆಚ್ಚಾಗಲಿದೆ. ನಿಮ್ಮ ವೃತ್ತಿ ಚಿತ್ರೋದ್ಯಮ, ಆಟೋಟಕ್ಕೆ ಸಂಬಂಧಿಸಿದ್ದರೆ, ನಿಮಗೆ ಅಪಾರ ಯಶಸ್ಸು ಸಿಗಲಿದೆ. ರಾಜಕೀಯ ಕ್ಷೇತ್ರಕ್ಕೆ ಸಂಬಧಿಸಿದ ಜನರಿಗೆ ಸ್ಥಾನಮಾನ ಪ್ರಾಪ್ತಿಯಾಗಲಿದೆ. ಈ ಅವಧಿಯಲ್ಲಿ ನಿಮಗೆ ಕಾಲಕಾಲಕ್ಕೆ ಆಕಸ್ಮಿಕ ಧನ ಪ್ರಾಪ್ತಿಯಾಗಲಿದೆ. ಕುಟುಂಬದಲ್ಲಿ ವಿವಾಹ ಮತ್ತು ಉತ್ಸಾಹದ ಸಂಯೋಜನೆ ಇರಲಿದೆ. ಶಿಕ್ಷಣ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಪರಾಪ್ತಿಯಾಗಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಪ್ರಾಪ್ತಿಯಾಗಲಿದೆ.   

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)  

ZEENEWS TRENDING STORIES

By continuing to use the site, you agree to the use of cookies. You can find out more by Tapping this link