Kendra Trikon Yog 2024: ಹತ್ತು ವರ್ಷಗಳ ಬಳಿಕ ಧನದಾತ ಶುಕ್ರನಿಂದ ಕೇಂದ್ರ ತ್ರಿಕೋನ ರಾಜಯೋಗ ರಚನೆ, ಈ ಜನರಿಗೆ ಭಾರಿ ಆಕಸ್ಮಿಕ ಧನಲಾಭ!
Kendra Trikon Rajyog 2024: ವೈದಿಕ ಜೋತಿಷ್ಯ ಶಾಸ್ತ್ರದಲ್ಲಿ ಶುಕ್ರನಿಗೆ ಧನವೈಭವದ ಕಾರಕ ಗ್ರಹ ಎಂದು ಭಾವಿಸಲಾಗಿದೆ. ಶೀಘ್ರದಲ್ಲಿಯೇ ಶುಕ್ರ ಕೇಂದ್ರ ತ್ರಿಕೋನ ರಾಜಯೋಗ ರಚಿಸುತ್ತಿದ್ದಾನೆ. ಇದರಿಂದ ಕೆಲ ರಾಶಿಗಳ ಜನರಿಗೆ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭಗೊಳ್ಳಲಿದ್ದು, ಇವರಿಗೆ ಆಕಸ್ಮಿಕ ಧನಲಾಭದ ಎಲ್ಲಾ ಸಂಕೇತಗಳು ಗೋಚರಿಸುತ್ತಿವೆ. (Spiritual News In Kannada)
ಮಿಥುನ ರಾಶಿ: ಈ ಅವಧಿಯಲ್ಲಿ ಶುಕ್ರ ನಿಮ್ಮ ಗೋಚರ ಜಾತಕದ ಕರ್ಮ ಭಾವದಲ್ಲಿ ಸಂಚರಿಸಲಿದ್ದಾನೆ. ಇದರಿಂದ ಕಾಲಕಾಲಕ್ಕೆ ನಿಮಗೆ ಕೆಲಸ ಕಾರ್ಯಗಳಲ್ಲಿ ಅಪಾರ ಯಶಸ್ಸು ಸಿಗಲಿದೆ. ವಿತ್ತೀಯ ಸ್ಥಿತಿ ಮೊದಲಿಗಿಂದ ಉತ್ತಮ ವಾಗಿರಲಿದ್ದು. ವೃತ್ತಿ ಜೀವನದಲ್ಲಿ ಉಜ್ವಲ ಅವಕಾಶಗಳು ಒದಗಿಬರಲಿವೆ. ದೀರ್ಘ ಕಾಲದಿಂದ ನೆನೆಗುದಿಗೆ ಬಿದ್ದ ಯೋಜನೆಗಳೆಲ್ಲಾ ಸಾಕಾರಗೊಳ್ಳಲಿವೆ. ಒಂದು ವೇಳೆ ನೀವು ವ್ಯಾಪಾರಿಗಳಾಗಿದ್ದರೆ, ದೊಡ್ಡ ವ್ಯಾಪಾರ ಒಪ್ಪಂದ ಕುದುರುವ ಎಲ್ಲಾ ಸಾಧ್ಯತೆಗಳಿವೆ. ಇದರಿಂದ ಭವಿಷ್ಯದಲ್ಲಿ ನಿಮಗೆ ಅಪಾರ ಲಾಭ ಸಿಗಲಿದೆ.
ಕರ್ಕ ರಾಶಿ: ಕೇಂದ್ರ ತ್ರಿಕೋನ ರಾಜಯೋಗದ ಈ ಅವಧಿಯಲ್ಲಿ ಶುಕ್ರ ನಿಮ್ಮ ಗೋಚರ ಜಾತಕದ ನವಮ ಭಾವದಲ್ಲಿ ಸಂಚರಿಸಲಿದ್ದಾನೆ. ಇದರಿಂದ ನಿಮ್ಮ ಭಾಗ್ಯೋದಯವಾಗುವುದು ಬಹುತೇಕ ಪಕ್ಕಾ ಎಂದರೆ ತಪ್ಪಾಗಲಾರದು. ನಿಂತುಹೋದ ನಿಮ್ಮ ಕೆಲಸ ಕಾರ್ಯಗಳು ಮತ್ತೆ ಆರಂಭಗೊಳ್ಳಲಿವೆ. ಸಾಮಾಜಿಕ ಪ್ರತಿಷ್ಠೆ ಹೆಚ್ಚಾಗಲಿದೆ. ಕೆಲಸ ಕಾರ್ಯಗಳ ನಿಮಿತ್ತ ಯಾತ್ರೆ ಸಂಭವಿಸುವ ಸಾಧ್ಯತೆ ಇದೆ. ಈ ಯಾತ್ರೆ ನಿಮ್ಮ ಪಾಲಿಗೆ ಶುಭವಾಗಿರಲಿದೆ. ಈ ಅವಧಿ ವಿದ್ಯಾರ್ಥಿಗಳ ಪಾಲಿಗೆ ಉತ್ತಮವಾಗಿರಲಿದೆ. ಅರ್ಥಾತ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ನೀವು ಉತ್ತೀರ್ಣರಾಗುವ ಸಾಧ್ಯತೆ ಇದೆ.
ಕುಂಭ ರಾಶಿ: ಕೇಂದ್ರ ತ್ರಿಕೋನ ರಾಜಯೋಗದ ಈ ಅವಧಿಯಲ್ಲಿ ಶುಕ್ರ ಗ್ರಹ ನಿಮ್ಮ ಜಾತಕದ ಧನ ಹಾಗೂ ವಾಣಿಯ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಪ್ರಾಪ್ತಿಯಾಗಲಿದೆ. ಇದರಿಂದ ನಿಮ್ಮ ಆರ್ಥಿಕ ಸ್ಥಿತಿ ಮೊದಲಿಗಿಂತ ಬಲಿಷ್ಠವಾಗಿರಲಿದೆ. ಸಾಮಾಜಿಕ ಪ್ರತಿಷ್ಠೆ ಹೆಚ್ಚಾಗಲಿದ್ದು, ನಿಮಗೆ ಅಪಾರ ವಿತ್ತೀಯ ಲಾಭ ತಂದುಕೊಡಲಿದೆ. ಈ ಅವಧಿಯಲ್ಲಿ ನಿಮ್ಮ ವ್ಯಕ್ತಿತ್ವದಲ್ಲಿ ಹೊಸ ಹೊಳಪು ಚೈತನ್ಯ ನಿಮಗೆ ನೋಡಲು ಸಿಗಲಿದೆ. ಈ ಅವಧಿಯಲ್ಲಿ ನಿಮ್ಮ ದೈನಂದಿನ ಆದಾಯ ಹೆಚ್ಚಾಗಲಿದೆ.
(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)