Boat Tragedy in Kerala: ಕೇರಳದಲ್ಲಿ ದೋಣಿ ಮುಳುಗಡೆ, ಮಕ್ಕಳು ಸೇರಿ 22 ಮಂದಿ ಸಾವು!
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಈ ದುರಂತ ನಡೆದಿದೆ. ತನೂರ್ ಕರಾವಳಿ ಬಳಿ ಪ್ರವಾಸಿ ದೋಣಿ ಮಗುಚಿ ಬಿದ್ದಿದೆ. ಈ ಘಟನೆ ಸಂಜೆ 7 ಗಂಟೆ ಸುಮಾರಿಗೆ ನಡೆದಿದೆ. ದೋಣಿಯಲ್ಲಿದ್ದವರೆಲ್ಲರೂ ಪ್ರವಾಸಿಗರಾಗಿದ್ದರು.
ಇದುವರೆಗೆ ನಾವು 21 ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ವರದಿಯಾಗಿದೆ. ದೋಣಿಯಲ್ಲಿ ಎಷ್ಟು ಜನರಿದ್ದರು ಎಂಬುದರ ಬಗ್ಗೆ ನಮಗೆ ನಿಖರವಾಗಿ ತಿಳಿದಿಲ್ಲ. ನೀರಿನಲ್ಲಿ ಮುಳುಗಿರುವವರಿಗಾಗಿ ನಾವು ಹುಡುಕಾಟ ಮುಂದುವರೆಸಿದ್ದೇವೆಂದು ಪ್ರಾದೇಶಿಕ ಅಗ್ನಿಶಾಮಕ ದಳದ ಅಧಿಕಾರಿ ಶಿಜು ಕೆಕೆ ತಿಳಿಸಿದ್ದಾರೆ.
ಘಟನೆಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಕೇರಳ ಸಿಎಂ ಪಿಣರಾಯಿ ವಿಜಯನ್ ಸಹ ಘಟನೆಯಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ತುರ್ತು ರಕ್ಷಣಾ ಕಾರ್ಯಾಚರಣೆ ಕೈಗೊಳ್ಳುವಂತೆ ಮಲಪ್ಪುರಂ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.
ಅಗ್ನಿಶಾಮಕ ಮತ್ತು ಪೊಲೀಸ್ ಘಟಕಗಳು, ಕಂದಾಯ ಮತ್ತು ಆರೋಗ್ಯ ಇಲಾಖೆಗಳ ಅಧಿಕಾರಿಗಳು ಮತ್ತು ಜಿಲ್ಲೆಯ ತಾನೂರ್ ಮತ್ತು ತಿರೂರು ಪ್ರದೇಶದ ಸ್ಥಳೀಯರು ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆಂದು ತಿಳಿದುಬಂದಿದೆ.