PHOTOS: ದೆಹಲಿಯಲ್ಲಿ ʻವಿಕ್ರಾಂತ್‌ ರೋಣʼನ ಅಬ್ಬರ.. ಶುರುವಾಯ್ತು ಭರ್ಜರಿ ಪ್ರಮೋಷನ್‌

Sat, 16 Jul 2022-5:39 pm,

ವಿಕ್ರಾಂತ್ ರೋಣ ಸಿನಿಮಾದ ಪ್ರಚಾರಕ್ಕೆಂದು ನಟ ಸುದೀಪ್‌ ದೆಹಲಿಗೆ ತೆರಳಿದ್ದಾರೆ. ನವದೆಹಲಿ ಪ್ರವಾಸದ ವೇಳೆ ಇಂಡಿಯಾ ಗೇಟ್‌ಗೂ ಭೇಟಿ ಕೊಟ್ಟಿದ್ದಾರೆ. ಇಂದಿನಿಂದ ಉತ್ತರ ಭಾರತದಾದ್ಯಂತ ವಿಕ್ರಾಂತ್ ರೋಣ ಸಿನಿಮಾ ಪ್ರಚಾರದಲ್ಲಿ ಸುದೀಪ್‌ ಬ್ಯುಸಿಯಾಗಲಿದ್ದಾರೆ.

ವಿಕ್ರಾಂತ್​ ರೋಣ ಸಿನಿಮಾದಲ್ಲಿ ಅಭಿನಯ ಚಕ್ರವರ್ತಿ ಸುದೀಪ್‌, ಜಾಕ್ವೆಲಿನ್‌ ಫರ್ನಾಂಡೀಸ್‌, ನಿರೂಪ್​ ಭಂಡಾರಿ, ನೀತಾ ಅಶೋಕ್ ನಟಿಸಿದ್ದು ಬೇರೆ ಬೇರೆ ಭಾಷೆಗಳಿಗೆ ಡಬ್​ ಆಗಿದೆ. 3ಡಿ ಅವತರಣಿಕೆಯಲ್ಲಿ ಈ ಚಿತ್ರ ಮೂಡಿಬರುತ್ತಿದೆ. ಶಾಲಿನಿ ಆರ್ಟ್ಸ್ ಬ್ಯಾನರ್​ ಅಡಿ ಜಾಕ್​ ಮಂಜು ಚಿತ್ರ ನಿರ್ಮಾಣ ಮಾಡಿದ್ದು, ಅಲಂಕಾರ್​ ಪಾಂಡಿಯನ್​ ಸಹ-ನಿರ್ಮಾಪಕರಾಗಿದ್ದಾರೆ. 

ಭುರ್ಜ್ ಖಲೀಫಾದಿಂದ ಶುರುವಾದ ವಿಕ್ರಾಂತ್‌ ರೋಣನ ಹವಾ ದಿನ ಕಳೆದಂತೆ ಹೆಚ್ಚಾಗುತ್ತಲೇ ಇದೆ. ಕಿಚ್ಚ ಸುದೀಪ್‌ ಅಭಿನಯದ ಬಹುನಿರೀಕ್ಷಿತ ಸಿನಿಮಾ ವಿಕ್ರಾಂತ್‌ ರೋಣ ಈಗಾಗಲೇ ರಿಲೀಸ್‌ ಆದ ಹಾಡು, ಟ್ರೈಲರ್‌ ಮೂಲಕ ಸಖತ್‌ ಸದ್ದು ಮಾಡುತ್ತಿದೆ. ಬಾಲಿವುಡ್‌, ಟಾಲಿವುಡ್‌ ಸೇರಿದಂತೆ ಭಾರತ ಸಿನಿರಂಗದ ಖ್ಯಾತ ನಾಮರು ವಿಕ್ರಾಂತ್‌ ರೋಣನಿಗೆ ಸಾಥ್‌ ನೀಡಿದ್ದಾರೆ.  

ವಿಕ್ರಾಂತ್‌ ರೋಣ ಸಿನಿಮಾ ಹವಾ ಎಲ್ಲೆಲ್ಲೂ ಹಬ್ಬಿದ್ದು, ಈಗಾಗಲೇ ಮೂರು ಸಾಂಗ್‌ ವಿವಿಧ ಭಾಷೆಗಳಲ್ಲಿ ರಿಲೀಸ್‌ ಆಗಿ ಯುಟ್ಯೂಬ್‌ ಟ್ರೆಂಡ್‌ ಆಗಿವೆ. ಈ ಮಧ್ಯೆ ವಿಕ್ರಾಂತ್​ ರೋಣ ಟ್ರೈಲರ್ ನೋಡಿದ ಜನರಿಗೆ ಸಿನಿಮಾದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟಾಗಿದೆ.

ಅನೂಪ್‌ ಭಂಡಾರಿ ನಿರ್ದೇಶನದ ಈ ಸಿನಿಮಾ ಮೂಲಕ ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಸ್ಯಾಂಡಲ್‌ವುಡ್‌ಗೆ ಹೆಜ್ಜೆ ಇಡುತ್ತಿದ್ದಾರೆ. ರಕೇಲ್‌ ಡಿಕೋಸ್ಟ ಉರ್ಫ್‌ ಗಡಂಗ್‌ ರಕ್ಕಮ್ಮನಾಗಿ ತೆರೆ ಮೇಲೆ ಅವರು ಕಾಣಿಸಿಕೊಂಡಿದ್ದಾರೆ. ನಿರೂಪ್‌ ಭಂಡಾರಿ ಹಾಗೂ ನೀತಾ ಅಶೋಕ್‌ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. 

ಕನ್ನಡದ ಜೊತೆಗೆ, ಹಿಂದಿ, ತಮಿಳು, ತೆಲುಗು ಹಾಗೂ ಇಂಗ್ಲಿಷ್‌ನಲ್ಲಿ ಸುದೀಪ್‌ ಅವರೇ ಡಬ್‌ ಮಾಡಿದ್ದಾರೆ. ಇಷ್ಟೆಲ್ಲ ವಿಶೇಷತೆ ಹೊಂದಿರುವ ಈ ಸಿನಿಮಾ ಸದ್ಯ ಭಾರತದ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಸಹ ಸ್ಥಾನ ಪಡೆದುಕೊಂಡಿದೆ. ವಿಕ್ರಾಂತ್ ರೋಣ ಸಿನಿಮಾ ಜುಲೈ 28ರಂದು ರಿಲೀಸ್‌ ಆಗಲು ಸಿದ್ಧವಾಗಿದೆ.  

ZEENEWS TRENDING STORIES

By continuing to use the site, you agree to the use of cookies. You can find out more by Tapping this link