ರಕ್ಷಾಬಂಧನದ ದಿನ ಪೂರ್ವಾಫಾಲ್ಗುಣಿ ನಕ್ಷತ್ರಕ್ಕೆ ಸೂರ್ಯನ ಪ್ರವೇಶ, ಶ್ರೀಹರಿ ಲಕ್ಷ್ಮಿ ಕೃಪೆಯಿಂದ ಈ ಜನರ ಮೇಲೆ ಹಣದ ಸುರಿಮಳೆ!
Surya Purvafalguni Nashatra Gochar 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ರಾಜ ಎಂದೇ ಕರೆಯಲಾಗುವ ಸೂರ್ಯ ದೇವ ರಕ್ಷಾಬಂಧನದ ದಿನ ಪವರ್ಫುಲ್ ಪೂರ್ವಾಫಾಲ್ಗುಣಿ ನಕ್ಷತ್ರಕ್ಕೆ ಪ್ರವೇಶಿಸಲಿದ್ದಾನೆ. ಇದರಿಂದ ಒಟ್ಟು ಮೂರು ರಾಶಿಗಳ ಜನರ ಜೀವನದಲ್ಲಿ ಧನಲಾಭ ಹಾಗೂ ಭಾಗ್ಯೋದಯ ಯೋಗ ರೂಪಗೊಂಡು ಜೀವನದಲ್ಲಿ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ.
ವೃಷಭ ರಾಶಿ: ಸೂರ್ಯದೇವನ ಪೂರ್ವಾಫಾಲ್ಗುಣಿ ನಕ್ಷತ್ರ ಪ್ರವೇಶ ವೃಷಭ ರಾಶಿಯ ಜಾತಕದವರಿಗೆ ಸಾಕಷ್ಟು ಲಾಭದಾಯಕ ಸಿದ್ಧ ಸಾಬೀತಾಗಲಿದೆ. ಇದರಿಂದ ನಿಮಗೆ ಈ ಅವಧಿಯಲ್ಲಿ ಆಕಸ್ಮಿಕ ಧನಲಾಭ ಪ್ರಾಪ್ತಿಯಾಗಲಿದೆ. ತಂದೆಯ ಜೊತೆಗಿನ ನಿಮ್ಮ ಸಂಬಂಧದಲ್ಲಿ ಮೊದಲಿಗಿಂತ ಹೆಚ್ಚು ಅನ್ಯೋನ್ಯತೆ ಇರಲಿದೆ. ಕೆಲಸ ಕಾರ್ಯಗಳಲ್ಲಿ ಹೊಸ ಅವಕಾಶಗಳು ಪ್ರಾಪ್ತಿಯಾಗಲಿವೆ. ವಾಹನ-ಆಸ್ತಿಪಾಸ್ತಿ ಖರೀದಿಸುವ ಅವಕಾಶಗಳು ಒದಗಿಬರಲಿವೆ. ನಿವೇಶನ ಕ್ರಯ-ವಿಕ್ರಯದಿಂದ ನಿಮಗೆ ಲಾಭ ಸಿಗಲಿದೆ. ಈ ಅವಧಿಯಲ್ಲಿ ಸರ್ಕಾರದಿಂದ ಕೂಡ ನಿಮಗೆ ಲಾಭ ಸಿಗುವ ಸಾಧ್ಯತೆ ಇದೆ.
ಮಿಥುನ ರಾಶಿ: ಉದಯರವಿಯ ಪೂರ್ವಾಫಾಲ್ಗುಣಿ ನಕ್ಷತ್ರ ಪ್ರವೇಶ ಶುಭ ಫಲಪ್ರದ ಸಾಬೀತಾಗುವ ಸಾಧ್ಯತೆ ಇದೆ. ಇದರಿಂದ ನಿಮಗೆ ನಿಮ್ಮ ಎಲ್ಲಾ ಯೋಜನೆಗಳಿಂದ ಲಾಭ ಸಿಗಲಿದೆ. ಈ ಅವಧಿಯಲ್ಲಿ ನಿಮಗೆ ಆಕಷ್ಮಿಕ ಧನಲಾಭ ಯೋಗ ಕೂಡ ಪ್ರಾಪ್ತಿಯಾಗಲಿದೆ. ಒಂದು ವೇಳೆ ನೀವು ವ್ಯಾಪಾರಿಗಳಾಗಿದ್ದರೆ, ಬಿಸ್ನೆಸ್ ನಲ್ಲಿ ನಿಮಗೆ ಹೊಸ ಆರ್ಡರ್ ಗಳು ಸಿಗಲಿವೆ. ಇದರಿಂದ ನಿಮ್ಮ ಆದಾಯದಲ್ಲಿ ಅಪಾರ ಹೆಚ್ಚಳ ಸಂಭವಿಸುವ ಸಾಧ್ಯತೆ ಇದೆ. ಆದಾಯದ ಹೊಸ-ಹೊಸ ಮಾರ್ಗಗಳು ತೆರೆದುಕೊಳ್ಳಲಿವೆ. ನಿಂದುಹೋದ ಕೆಲಸಗಳಲ್ಲಿ ಪುನಃ ನಿಮಗೆ ಯಶಸ್ಸು ಸಿಗಲಿದೆ.
ಕರ್ಕ ರಾಶಿ: ಆದಿತ್ಯನ ಪೂರ್ವಾಫಾಲ್ಗುಣಿ ನಕ್ಷತ್ರ ಪ್ರವೇಶ ಕರ್ಕ ರಾಶಿಯ ಜಾತಕದವರಿಗೆ ಅತ್ಯಂತ ಲಾಭದಾಯಕ ಸಾಬೀತಾಗುವ ಸಾಧ್ಯತೆ ಇದೆ. ಅದರಲ್ಲಿಯೂ ವಿಶೇಷವಾಗಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಯಶಸ್ಸು ಸಿಗಲಿದೆ. ಅರ್ಥಾತ್ ಸರ್ಕಾರಿ ನೌಕರಿಯ ಸಿದ್ಧತೆ ನಡೆಸುತ್ತಿರುವವರಿಗೆ ನೌಕರಿ ಭಾಗ್ಯ ಸಿಗುವ ಸಾಧ್ಯತೆ ಇದೆ ಎಂದರ್ಥ. ಒಂದು ವೇಳೆ ನೀವು ನೌಕರ ವರ್ಗಕ್ಕೆ ಸೇರಿದ್ದರೆ, ಕಾರ್ಯಸ್ಥಳದಲ್ಲಿ ಹೊಸ ಜವಾಬ್ದಾರಿ ನಿಮ್ಮ ಹೆಗಲಿಗೇರಲಿದೆ. ಇದಲ್ಲದೆ ಈ ಅವಧಿಯಲ್ಲಿ ನೀವು ಯಾವುದೇ ಕೆಲಸಕ್ಕೆ ಕೈಹಾಕಿದರು ಅದರಲ್ಲಿ ಲಾಭ ನಿಮ್ಮದಾಗಲಿದೆ. ಇದು ನಿಮ್ಮ ಪಾಲಿಗೆ ಒಂದು ಸುವರ್ಣಾವಕಾಶವಾಗಿದೆ. ಈ ಅವಧಿಯಲ್ಲಿ ಯಾತ್ರೆ ಜರುಗಬಹುದು ಮತ್ತು ಅದು ಶುಭ ಸಾಬೀತಾಗಲಿದೆ.
(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)