KL Rahul: ಈ ಸ್ಫೋಟಕ ಆಟಗಾರರ ವೃತ್ತಿಜೀವನಕ್ಕೆ ಕೆ.ಎಲ್.ರಾಹುಲ್ ಅಡ್ಡಿ..!

ಕೆ.ಎಲ್.ರಾಹುಲ್ ಟೀಂ ಇಂಡಿಯಾದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡ ತಕ್ಷಣ ಅನೇಕ ಆಟಗಾರರು ತಂಡಕ್ಕೆ ಮರಳಲು ಸಾಧ್ಯವಾಗುತ್ತಿಲ್ಲ.

ಭಾರತ ಕ್ರಿಕೆಟ್ ಜಗತ್ತಿಗೆ ಅನೇಕ ದೊಡ್ಡ ದೊಡ್ಡ ಆಟಗಾರರನ್ನು ನೀಡಿದೆ. ಪಂಜಾಬ್ ಕಿಂಗ್ಸ್ ಪರ ಐಪಿಎಲ್‌ನಲ್ಲಿ ಆಡಿರುವ ಕೆ.ಎಲ್.ರಾಹುಲ್, ಇತ್ತೀಚಿನ ದಿನಗಳಲ್ಲಿ ಟೀಂ ಇಂಡಿಯಾ ಪರ ಹಲವು ದೊಡ್ಡ ಇನ್ನಿಂಗ್ಸ್‌ ಗಳನ್ನು ಆಡಿದ್ದಾರೆ. ತಮ್ಮ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನದ ಮೂಲಕ ಟೀಂ ಇಂಡಿಯಾಗೆ ಅನೇಕ ಗೆಲುವುಗಳನ್ನು ತಂದುಕೊಟ್ಟಿದ್ದಾರೆ. ಹೀಗಾಗಿ ಕನ್ನಡಿಗ ರಾಹುಲ್ ಟೀಂ ಇಂಡಿಯಾದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಅವರ ಆಟದ ಶೈಲಿ ಎಲ್ಲರಿಗೂ ಚೆನ್ನಾಗಿ ತಿಳಿದಿದೆ. ರಾಹುಲ್ ಟೀಂ ಇಂಡಿಯಾದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡ ತಕ್ಷಣ ಅನೇಕ ಆಟಗಾರರು ತಂಡಕ್ಕೆ ಮರಳಲು ಸಾಧ್ಯವಾಗುತ್ತಿಲ್ಲ. ಈ ಆಟಗಾರರ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /3

ಶಿಖರ್ ಧವನ್ ಅವರ ಬ್ಯಾಟ್ ಬಹಳ ದಿನಗಳಿಂದ ಸ್ತಬ್ಧವಾಗಿದೆ. ಅವರ ಬ್ಯಾಟ್‌ನಿಂದ ರನ್‌ಗಳು ಹೊರಬರುತ್ತಿಲ್ಲ. ಧವನ್ ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನು 2018ರಲ್ಲಿ ಆಡಿದ್ದರು. ಅಂದಿನಿಂದ ಅವರು ಟೀಂ ಇಂಡಿಯಾದ ಟೆಸ್ಟ್ ತಂಡದಿಂದ ಹೊರಗುಳಿಯುತ್ತಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಕೆ.ಎಲ್.ರಾಹುಲ್ ಅದ್ಭುತ ಇನ್ನಿಂಗ್ಸ್ ಆಡುವ ಮೂಲಕ ಟೀಂ ಇಂಡಿಯಾದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಧವನ್ ಈಗಾಗಲೇ ಟಿ-20 ಕ್ರಿಕೆಟ್ ಮತ್ತು ಏಕದಿನ ಕ್ರಿಕೆಟ್‌ನಿಂದ ಹೊರಗುಳಿಯುತ್ತಿದ್ದಾರೆ. ಇಂಗ್ಲೆಂಡ್ ಪ್ರವಾಸದಲ್ಲಿ ಧವನ್ ಅವರನ್ನು ಆಯ್ಕೆ ಮಾಡಲಿಲ್ಲ ಮತ್ತು ನ್ಯೂಜಿಲೆಂಡ್ ಪ್ರವಾಸದಲ್ಲಿಯೂ ಅವರಿಗೆ ಗೇಟ್ ಪಾಸ್ ನೀಡಲಾಗಿತ್ತು. ಆಯ್ಕೆಗಾರರು ಧವನ್‌ಗೆ ಹೆಚ್ಚಿನ ಅವಕಾಶ ನೀಡಿಲ್ಲ. ಇದೀಗ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಧವನ್‌ಗಿಂತ ಕೆ.ಎಲ್.ರಾಹುಲ್‌ಗೆ ಆಯ್ಕೆಗಾರರು ಹೆಚ್ಚಿನ ಆದ್ಯತೆ ನೀಡಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಧವನ್ ವೃತ್ತಿಜೀವನವು ಡೋಲಾಯಮಾನ ಸ್ಥಿತಿ ತಲುಪಿದೆ.

2 /3

ಮುರಳಿ ವಿಜಯ್ ಒಂದು ಕಾಲದಲ್ಲಿ ಟೀಂ ಇಂಡಿಯಾದ ಟೆಸ್ಟ್ ತಂಡದ ನಂ.1 ಓಪನರ್ ಆಗಿದ್ದರು. ಆದರೆ ಕಳಪೆ ಫಾರ್ಮ್‌ನಿಂದ ಈ ಸ್ಟಾರ್ ಓಪನರ್ ತಂಡದಿಂದ ಹೊರಗುಳಿಯಬೇಕಾಯಿತು. ಕಳೆದ 3 ವರ್ಷಗಳಿಂದ ಅವರು ಭಾರತದ ಟೆಸ್ಟ್ ತಂಡದಿಂದ ವಿಜಯ್ ಹೊರಗುಳಿಯುತ್ತಿದ್ದಾರೆ. ಮುರಳಿ ಅವರು 2008ರಲ್ಲಿ ಆಸ್ಟ್ರೇಲಿಯಾ ವಿರುದ್ಧ ತಮ್ಮ ಚೊಚ್ಚಲ ಟೆಸ್ಟ್ ಪಂದ್ಯವನ್ನಾಡುವ ಮೂಲಕ ಪಾದಾರ್ಪಣೆ ಮಾಡಿದ್ದರು. ಒಟ್ಟು 61 ಟೆಸ್ಟ್ ಪಂದ್ಯಗಳನ್ನು ಆಡಿರುವ ಅವರು 3,982 ರನ್ ಗಳಿಸಿದ್ದಾರೆ. ಇದೀಗ ಟೀಂ ಇಂಡಿಯಾದಲ್ಲಿ ರಾಹುಲ್ ಗಟ್ಟಿಯಾಗಿರುವುದರಿಂದ ಅವರ ವಾಪಸಾತಿ ಅಸಾಧ್ಯ ಎನಿಸುತ್ತಿದೆ.

3 /3

ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಭಾರತ ತಂಡದಲ್ಲಿ ಆರಂಭಿಕರ ಜವಾಬ್ದಾರಿಯನ್ನು ಪೃಥ್ವಿ ಶಾ ಅದ್ಭುತವಾಗಿ ನಿಭಾಯಿಸಿದ್ದರು. ಶಾ 2018ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಪಾದಾರ್ಪಣೆ ಮಾಡಿದರು. ಆದರೆ ಈ ಬ್ಯಾಟ್ಸ್‌ ಮನ್ ಕಳೆದೊಂದು ವರ್ಷದಿಂದ ಭಾರತೀಯ ಟೆಸ್ಟ್ ತಂಡದಿಂದ ಹೊರಗುಳಿಯುತ್ತಿದ್ದಾರೆ. ಕೆ.ಎಲ್.ರಾಹುಲ್ ಟೆಸ್ಟ್ ತಂಡದಲ್ಲಿ ಖಾಯಂ ಸ್ಥಾನ ಪಡೆದಿರುವ ಹಿನ್ನೆಲೆ ಶಾ ವಾಪಸಾತಿ ಕಷ್ಟಸಾಧ್ಯವಾಗಿದೆ. ಪೃಥ್ವಿ ಕಳಪೆ ಫಾರ್ಮ್‌ನಿಂದಾಗಿ ತಂಡದಿಂದ ಹೊರಗುಳಿದಿದ್ದಾರೆ. ರಾಹುಲ್ ಹೊರತುಪಡಿಸಿ ಯುವ ಬ್ಯಾಟ್ಸ್‌ ಮನ್‌ಗಳಾದ ಮಯಾಂಕ್ ಅಗರ್ವಾಲ್ ಮತ್ತು ಶುಭಮನ್ ಗಿಲ್ ಅಬ್ಬರದ ಪ್ರದರ್ಶನ ನೀಡುವ ಮೂಲಕ ಟೀಂ ಇಂಡಿಯಾದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಶಾ ಭಾರತದ ಪರ 5 ಟೆಸ್ಟ್ ಪಂದ್ಯಗಳಲ್ಲಿ 339 ರನ್ ಗಳಿಸಿದ್ದು, ಇದರಲ್ಲಿ 1 ಶತಕವೂ ಸೇರಿದೆ.