ಬಾಳೆ ಎಲೆಯಲ್ಲಿ ಊಟ ಮಾಡುವುದರ ಹಿಂದಿರುವ ವೈಜ್ಞಾನಿಕ ಕಾರಣವಿದು
ಹಬ್ಬ-ಹರಿದಿನಗಳಲ್ಲಿ ಬಾಳೆ ಎಲೆಯಲ್ಲಿ ಊಟ ಮಾಡುವುದು ವಾಡಿಕೆ ಆಗಿದ್ದರೂ ಕೂಡ ಇದರ ಹಿಂದೆ ವೈಜ್ಞಾನಿಕ ಕಾರಣವೂ ಉಂಟು. ವೈಜ್ಞಾನಿಕ ದೃಷ್ಟಿಕೋನದಿಂದ ನೋಡುವುದಾದರೆ ಬಾಳೆ ಎಲೆಯಲ್ಲಿ ಊಟ ಮಾಡುವುದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ. ಹಾಗಿದ್ದರೆ, ಬಾಳೆ ಎಲೆಯಲ್ಲಿ ಊಟ ಮಾಡುವುದರಿಂದ ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನಗಳು ಲಭ್ಯವಿದೆ ಎಂದು ತಿಳಿಯೋಣ..
ಬಾಳೆ ಎಲೆಯಲ್ಲಿ ಊಟ ಮಾಡುವುದರಿಂದ ಊಟದ ರುಚಿ ಹೆಚ್ಚಾಗುತ್ತದೆ. ಮಾತ್ರವಲ್ಲ, ಇದು ಆಹಾರ ಸೇವಿಸಿದವರಿಗೆ ಒಂದು ರೀತಿಯ ತೃಪ್ತಿಯ ಭಾವನೆಯನ್ನು ನೀಡುತ್ತದೆ.
ಬಾಳೆ ಎಲೆಯಲ್ಲಿ ಊಟ ಮಾಡುವುದರಿಂದ ಜೀರ್ಣಾಂಗ ವ್ಯವಸ್ಥೆ ಪ್ರಬಲಗೊಳ್ಳುತ್ತದೆ. ಉತ್ತಮ ಜೀರ್ಣಾಂಗ ವ್ಯವಸ್ಥೆಯಿಂದಾಗಿ ಉದರ ಸಂಬಂಧಿತ ಬಹುತೇಕ ಸಮಸ್ಯೆಗಳಿಂದ ದೂರ ಉಳಿಯಬಹುದು.
ಬಾಳೆ ಎಲೆಯಲ್ಲಿ ಊಟ ಮಾಡುವುದರಿಂದ ಕೂದಲು ಉದ್ದವಾಗಿ ಬೆಳೆಯುವುದಲ್ಲದೆ, ಅದರ ಕಾಂತಿಯೂ ಹೆಚ್ಚುತ್ತದೆ ಎಂದು ಹೇಳಲಾಗುತ್ತದೆ.
ಬಾಳೆ ಎಲೆ ಊಟ ಕೂದಲಿಗಷ್ಟೇ ಅಲ್ಲ, ಕಾಂತಿಯುತ ತ್ವಚೆ ಪಡೆಯಲು ಕೂಡ ತುಂಬಾ ಪ್ರಯೋಜನಕಾರಿ ಆಗಿದೆ. ವಾಸ್ತವವಾಗಿ, ಆಯುರ್ವೇದದ ಪ್ರಕಾರ, ಬಾಳೆ ಎಲೆಯಲ್ಲಿ ಆಹಾರ ಸೇವಿಸುವುದರಿಂದ ಚರ್ಮಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳನ್ನು ಬಗೆಹರಿಸಬಹುದು ಎಂದು ಹೇಳಲಾಗುತ್ತದೆ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇದನ್ನು Zee ಮೀಡಿಯಾ ಖಚಿತಪಡಿಸುವುದಿಲ್ಲ.