SM Krishna birthday: ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶುಭ ಕೋರಿದರು.
SM Krishna birthday: ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ, ಮಾಜಿ ರಾಜ್ಯಪಾಲ ಎಸ್.ಎಂ. ಕೃಷ್ಣ ಅವರ 90 ನೇ ಹುಟ್ಟುಹಬ್ಬದ ಸಂಭ್ರಮ. ಜನ್ಮದಿನದ ನಿಮಿತ್ತ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರು ಸದಾಶಿವನಗರದಲ್ಲಿರುವ ಕೃಷ್ಣ ಅವರ ಮನೆಗೆ ಭೇಟಿ ನೀಡಿದರು. ಭಾನುವಾರ ಎಸ್.ಎಂ.ಕೃಷ್ಣ ಅವರ ಮನೆಗೆ ಭೇಟಿ ನೀಡಿದ ಡಿಕೆಶಿ ಜನ್ಮದಿನದ ಶುಭಾಶಯ ಕೋರಿದರು.
ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ, ಮಾಜಿ ರಾಜ್ಯಪಾಲ ಎಸ್.ಎಂ. ಕೃಷ್ಣ ಅವರ 90 ನೇ ಹುಟ್ಟುಹಬ್ಬದ ಸಂಭ್ರಮ. ಜನ್ಮದಿನದ ನಿಮಿತ್ತ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರು ಸದಾಶಿವನಗರದಲ್ಲಿರುವ ಕೃಷ್ಣ ಅವರ ಮನೆಗೆ ಭೇಟಿ ನೀಡಿದರು. ಭಾನುವಾರ ಎಸ್.ಎಂ.ಕೃಷ್ಣ ಅವರ ಮನೆಗೆ ಭೇಟಿ ನೀಡಿದ ಡಿಕೆಶಿ ಜನ್ಮದಿನದ ಶುಭಾಶಯ ಕೋರಿದರು.
1962ರಲ್ಲಿ ವಿಧಾನಸಭೆಗೆ ಮೊದಲ ಬಾರಿ ಆಯ್ಕೆ, 1968ರಲ್ಲಿ ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸಂಸದರಾಗಿ ಆಯ್ಕೆ, 1971ರಲ್ಲಿ ಮಂಡ್ಯ ಕ್ಷೇತ್ರದಿಂದಲೇ ಮರು ಆಯ್ಕೆಯಾದ ಎಸ್.ಎಂ.ಕೃಷ್ಣ, 1972ರಲ್ಲಿ ವಿಧಾನಪರಿಷತ್ ಸದಸ್ಯರಾಗಿ ಎಸ್.ಎಂ.ಕೃಷ್ಣ ಆಯ್ಕೆ, 1977 ರಲ್ಲಿ ಕರ್ನಾಟಕದ ವಿಧಾನ ಪರಿಷತ್ತಿಗೆ ಚುನಾಯಿತರಾದ ಎಸ್.ಎಂ.ಕೃಷ್ಣ, 1977ರಲ್ಲಿ ವಾಣಿಜ್ಯ, ಉದ್ಯಮ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದರು.
1983ರಲ್ಲೂ ಉದ್ಯಮ ಖಾತೆ ಸಚಿವರಾಗಿ ಎಸ್.ಎಂ.ಕೃಷ್ಣ ಆಯ್ಕೆ, 1984 ರಲ್ಲಿ ವಿತ್ತ ಖಾತೆಯ ಸಚಿವರಾಗಿದ್ದ ಎಸ್.ಎಂ.ಕೃಷ್ಣ, 1989 ರಿಂದ 1992ರ ವರೆಗೆ ವಿಧಾನಸಭೆಯ ಸ್ಪೀಕರ್ ಆಗಿ ನೇಮಕ, 1992 ರಿಂದ 1994ರ ವರೆಗೆ ಕರ್ನಾಟಕದ ಉಪ-ಮುಖ್ಯಮಂತ್ರಿಯಾಗಿ ನೇಮಕಗೊಂಡರು.
1996 ರಲ್ಲಿ ರಾಜ್ಯಸಭೆಗೆ ನೇಮಕಗೊಂಡ ಎಸ್.ಎಂ.ಕೃಷ್ಣ, 1999 ರಲ್ಲಿ ಕರ್ನಾಟಕದ 16ನೇ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು. 1999ರಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿದ್ದರು. 2004ರಲ್ಲಿ ಮುಖ್ಯಮಂತ್ರಿ ಅವಧಿ ಮುಕ್ತಾಯಗೊಂಡಿತು.
2004- 2008ರವರೆಗೆ ಮಹಾರಾಷ್ಟ್ರ ರಾಜ್ಯಪಾಲರಾಗಿ ಆಯ್ಕೆಯಾದರು. 2008-2014ರವರೆಗೆ ಕರ್ನಾಟಕದ ರಾಜ್ಯಸಭಾ ಸದಸ್ಯರಾಗಿದ್ದರು. 2009 - 2012ರವರೆಗೆ ವಿದೇಶಾಂಗ ಸಚಿವರಾಗಿ ಕಾರ್ಯ ನಿರ್ವಹಿಸಿದರು.