Kuber Yog: ಹನ್ನೆರಡು ವರ್ಷಗಳ ಕುಬೇರ ಯೋಗ ರಚನೆ, ಲಕ್ಷ್ಮಿ ಕೃಪೆಯಿಂದ ಈ ಜನರ ಮೇಲೆ 2025ರವರೆಗೆ ಭಾರಿ ಧನವೃಷ್ಟಿ!

Mon, 29 Apr 2024-9:43 pm,

ಮೇಷ ರಾಶಿ- ಕುಬೇರ ರಾಜಯೋಗ ರಚನೆ ಮೇಷ ರಾಶಿಯ ಜನರಿಗೆ ಒಂದು ವರದಾನ ಎಂದರೆ ತಪ್ಪಾಗಲಾರದು. ಈ ಅವಧಿಯಲ್ಲಿ ಗುರು ನಿಮ್ಮ ಜಾತಕದ ಧನ ಹಾಗೂ ವಾಣಿಯ ಭಾವದಲ್ಲಿ ಸಂಚರಿಸಲಿದ್ದಾನೆ. ಇದರಿಂದ ನಿಮಗೆ ಆಕಷ್ಮಿಕ ಧನಲಾಭ ಉಂಟಾಗಲಿದೆ. ಇದರ ಜೊತೆಗೆ ನಿಮ್ಮ ಆರ್ಥಿಕ ಸ್ಥಿತಿ ಸಾಕಷ್ಟು ಬಲಗೊಳ್ಳಲಿದೆ. ಇನ್ನೊಂದೆಡೆ ನೌಕರವರ್ಗದ ಜನರಿಗೆ ಈ ಅವಧಿಯಲ್ಲಿ ಪದೋನ್ನತಿಯ ಯೋಗ ರಚನೆಯಾಗುತ್ತಿದೆ. ಕುಟುಂಬ ಸದಸ್ಯರ ಬೆಂಬಲ ನಿಮಗೆ ಪ್ರಾಪ್ತಿಯಾಗಲಿದೆ. ನಿಮ್ಮ ಆರ್ಥಿಕ ಸ್ಥಿತಿ ಸಾಕಷ್ಟು ಬಲವಾಗಿ, ನಿಮಗಾಗಿ ಆದಾಯದ ಹೊಸ ಮಾರ್ಗಗಳು ತೆರೆದುಕೊಳ್ಳಲಿವೆ.   

ವೃಷಭ ರಾಶಿ: ನಿಮ್ಮ ರಾಶಿಯ ಲಗ್ನ ಭಾವದಲ್ಲಿ ಈ ಯೋಗ ರಚನೆಯಾಗುತ್ತಿದೆ. ಇದರಿಂದ ನಿಮಗೆ ಎಲ್ಲಾ ರೀತಿಯ ಭೌತಿಕ ಸುಖಗಳು ಪ್ರಾಪ್ತಿಯಾಗಲಿವೆ. ಆಸೆ ಆಕಾಂಕ್ಷೆಗಳು ಈಡೇರಲಿವೆ. ವೃತ್ತಿಯಲ್ಲಿ ನಡೆದುಕೊಂಡು ಬಂದ ಸಮಸ್ಯೆಗಳು ಅಂತ್ಯವಾಗಲಿವೆ. ನೌಕರಿಯಲ್ಲಿ ಉನ್ನತಿಯ ಜೊತೆಗೆ ಇಂಕ್ರಿಮೆಂಟ್ ಮತ್ತು ಬೋನಸ್ ಸಿಗಲಿದೆ. ಆರ್ಥಿಕ ಜೀವನ ಉತ್ತಮವಾಗಿರಲಿದೆ.   

ಕರ್ಕ ರಾಶಿ: ನಿಮ್ಮ ಮೇಲೆ ದೇವ ಗುರು ಬೃಹಸ್ಪತಿಯ ವಿಶೇಷ ಕೃಪೆ ಇರಲಿದೆ. ಮಕ್ಕಳಿಗೆ ಸಂಬಂಧಿಸಿದ ಶುಭ ಸಮಾಚಾರ ಸಿಗಲಿದೆ. ಕೌಟುಂಬಿಕ ಸುಖ ಸಮೃದ್ಧಿ ಹೆಚ್ಚಾಗಲಿದೆ. ಆದಾಯದ ಮೂಲಗಳು ತೆರೆದುಕೊಳ್ಳುವ ಕಾರಣ, ಮನಸ್ಸು ಶಾಂತ ಚಿತ್ತದಿಂದ ಕೂಡಿರಲಿದೆ. ಜಾತಕದ ಹನ್ನೊಂದನೆಯ ಮನೆಯಲ್ಲಿ ಕುಬೇರ ಯೋಗ ರಚನೆಯಿಂದ ಆರ್ಥಿಕ ಸ್ಥಿತಿ ಉತ್ತಮವಾಗಲಿದೆ. ನೌಕರವರ್ಗದ ಜನರಿಗೆ ಪದೋನ್ನತಿ ಭಾಗ್ಯ ಪ್ರಾಪ್ತಿಯಾಗ್ಳಿದ್ದು, ಲವ್ ಲೈಫ್ ಉತ್ತಮವಾಗಿರಲಿದೆ.  

ಸಿಂಹ ರಾಶಿ: ಕುಬೇರ ರಾಜಯೋಗ ರಚನೆಯಿಂದ ಸಿಂಹ ರಾಶಿಯ ಜಾತಕದವರ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ. ಎಕೆಂದರೆ ಗುರು ಗ್ರಹ ಈ ಅವಧಿಯಲ್ಲಿ ನಿಮ್ಮ ಗೋಚರ ಜಾತಕದ ಕರ್ಮ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ನಿಮ್ಮ ವೃತ್ತಿ ವ್ಯಾಪಾರದಲ್ಲಿ ಅಪಾರ ಯಶಸ್ಸು ಸಿಗಲಿದೆ. ವೃತ್ತಿ ಜೀವನದಲ್ಲಿ ನೀವು ಅತ್ಯುತ್ತಮ ಪ್ರದರ್ಶನ ತೋರುವಿರಿ ಮತ್ತು ಕೆಲ ಉತ್ತಮ ಅವಕಾಶಗಳು ನಿಮಗೆ ಒದಗಿಬರಲಿವೆ. ನೌಕರ ವರ್ಗದ ಜನರಿಗೆ ಈ ಅವಧಿಯಲ್ಲಿ ಇಂಕ್ರಿಮೆಂಟ್, ಪದೋನ್ನತಿ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಉತ್ತಮ ಧನಲಾಭ ಉಟ್ನಾಗಲಿದೆ. ಈ ಅವಧಿಯಲ್ಲಿ ನೀವು ನಿಮ್ಮ ವ್ಯಾಪಾರವನ್ನು ವಿಸ್ತರಿಸಬಹುದು.   

ಕನ್ಯಾ ರಾಶಿ: ಈ ಯೋಗ ನಿಮ್ಮ ಪಾಳಿಗೂ ಕೂಡ ವರದಾನ ಸಾಬೀತಾಗಲಿದೆ. ಅಪಾರ ಧನ ಸಂಪತ್ತಿನ ಜೊತೆಗೆ ಭೌತಿಕ ಸುಖಗಳು ಪ್ರಾಪ್ತಿಯಾಗಲಿವೆ. ಆಧ್ಯಾತ್ಮದತ್ತ ನಿಮ್ಮ ಒಲವು ಹೆಚ್ಚಾಗಲಿದೆ. ಕಾರ್ಯ ಕ್ಷೇತ್ರದಲ್ಲಿ ನಿಮ್ಮ ಕೆಲಸಕ್ಕೆ ಹಿರಿಯ ಅಧಿಕಾರಿಗಳಿಂದ ಪ್ರಶಂಸೆ ವ್ಯಕ್ತವಾಗಲಿದೆ. ಕುಟುಂಬ ಸದಸ್ಯರ ಜೊತೆಗೆ ಉತ್ತಮ ಕಾಲವನ್ನು ಕಳೆಯುವಿರಿ. ಆರ್ಥಿಕ ಸ್ಥಿತಿಯ ಕುರಿತು ಹೇಳುವುದಾದರೆ, ಈ ಅವಧಿಯಲ್ಲಿ ನಿಮ್ಮ ಆರ್ಥಿಕ ಸ್ಥಿತಿ ಅತ್ಯುತ್ತಮವಾಗಿರಲಿದೆ. ಅದರಲ್ಲಿಯೂ ವಿಶೇಷವಾಗಿ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಜನರಿಗೆ ಉತ್ತಮ ಲಾಭ ಸಿಗಲಿದೆ.   

(Disclaimer- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)  

ZEENEWS TRENDING STORIES

By continuing to use the site, you agree to the use of cookies. You can find out more by Tapping this link