Lakshmi Narayan Rajyog 2024: ವರ್ಷದ ಬಳಿಕ ಲಕ್ಷ್ಮಿ ನಾರಾಯಣ ರಾಜಯೋಗ ರಚನೆ, ಈ ಜನರ ಜೀವನದಲ್ಲಿ ಸುವರ್ಣ ಕಾಲ ಆರಂಭ!

Wed, 20 Mar 2024-7:51 pm,

ವೃಶ್ಚಿಕ ರಾಶಿ: ಲಕ್ಷ್ಮಿ ನಾರಾಯಣ ರಾಜಯೋಗ ನಿಮ್ಮ ಪಾಲಿಗೆ ಅತ್ಯಂತ ಲಾಭದಾಯಕ ಸಾಬೀತಾಗಲಿದೆ. ಇದರಿಂದ ಮಕ್ಕಳಿಗೆ ಸಂಬಂಧಿಸಿದ ಸಂತಸದ ಸುದ್ದಿ ನಿಮಗೆ ಸಿಗಲಿದೆ. ಅರ್ಥಾತ್ ಮಕ್ಕಳಿಗೆ ವಿವಾಹ ಅಥವಾ ನೌಕರಿ ಪ್ರಸ್ತಾಪ ಬರುವ ಸಾಧ್ಯತೆ ಇದೆ.   

ವೃಶ್ಚಿಕ ರಾಶಿಯವರ ಪ್ರೇಮ ಸಂಬಂಧ ನಡೆಯುತ್ತಿದ್ದರೇ, ಯಶಸ್ಸು ಸಿಗಲಿದೆ. ಶುಕ್ರನ ಪ್ರಭಾವದಿಂದ ಭೌತಿಕ ಸುಖ ಪ್ರಾಪ್ತಿಯಾಗಲಿದೆ. ಸುಖ ಸೌಕರ್ಯಗಳು ಹೆಚ್ಚಾಗಲಿವೆ. ಎಲ್ಲಾ ರೀತಿಯ ಸವಾಲುಗಳನ್ನು ನೀವು ಮೆಟ್ಟಿನಿಲ್ಲುವಿರಿ. ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಲಾಭ ಸಿಗಲಿದೆ.   

ಧನು ರಾಶಿ: ಲಕ್ಷ್ಮಿ ನಾರಾಯಣ ರಾಜಯೋಗ ನಿಮ್ಮ ಪಾಲಿಗೆ ವರದಾನ ಸಾಬೀತಾಗಲಿದೆ. ಏಕೆಂದರೆ ಇದು ನಿಮ್ಮ ಜಾತಕದ ಚತುರ್ಥ ಭಾವದಲ್ಲಿ (laxmi narayan yoga in 4nd house) ರಚನೆಯಾಗುತ್ತಿದೆ. ಹೀಗಾಗಿ ನಿಮ್ಮ ಸುಖ-ಸೌಕರ್ಯಗಳು ಹೆಚ್ಚಾಗಲಿವೆ. ಈ ಅವಧಿಯಲ್ಲಿ ನೀವು ವಾಹನ-ಆಸ್ತಿ ಪಾಸ್ತಿ ಖರೀದಿಸುವಿರಿ.   

ಬಿಸ್ನೆಸ್ ಮಾಡುವ ಧನು ರಾಶಿಯ ಜಾತಕದವರಿಗೆ ಬಿಸ್ನೆಸ್ ನಲ್ಲಿ ಉತ್ತಮ ಮುನ್ನಡೆ ಸಿಗಲಿದೆ. ಘನತೆ ಗೌರವ ಹೆಚ್ಚಾಗಲಿದೆ, ನೌಕರ ವರ್ಗದ ಧನು ಜಾತಕದವರಿಗೆ ಕಾರ್ಯ ಸ್ಥಳದಲ್ಲಿ ಹೊಸ ಜವಾಬ್ದಾರಿ ಸಿಗಲಿದೆ. ತಂದೆ ತಾಯಿಯರ ಜೊತೆಗೆ ನಿಮ್ಮ ಸಂಬಂಧ ಸುಧಾರಿಸಲಿದೆ.   

ಹಣ ಹೂಡಿಕೆಯಲ್ಲಿ ತೊಡಗಿಸಿಕೊಳ್ಳುವ ವೃಷಭ ರಾಶಿಯ ಜಾತಕದವರಿಗೆ ಉತ್ತಮ ಲಾಭ ಸಿಗಲಿದ್ದು, ಆರ್ಥಿಕ ಸ್ಥಿತಿ ಬಲಗೊಳ್ಳಲಿದೆ. ಈ ಅವಧಿಯಲ್ಲಿ ನಿಮ್ಮ ಆದಾಯದ ಹೊಸ ಮಾರ್ಗಗಳು ತೆರೆದುಕೊಳ್ಳಲಿವೆ. ವ್ಯಾಪಾರಿಗಳಾಗಿದ್ದರೆ, ಹೊಸ ಡೀಲ್ ಮಾಡಿಕೊಳ್ಳುವಿರಿ. ಮಕ್ಕಳಿಗೆ ಸಂಬಂಧಿಸಿದ ಸಂತಸದ ಸುದ್ದಿ ಸಿಗಲಿದೆ.   

(Disclaimer- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)  

ZEENEWS TRENDING STORIES

By continuing to use the site, you agree to the use of cookies. You can find out more by Tapping this link