Lava O2: ಬಜೆಟ್ ಬೆಲೆಯ ಈ ಲಾವಾ ಸ್ಮಾರ್ಟ್‌ಫೋನ್ ಮೇಲೆ ಭರ್ಜರಿ ಡಿಸ್ಕೌಂಟ್!
ಅಮೆಜಾನ್‌ನಲ್ಲಿ Lava O2 ಸ್ಮಾರ್ಟ್‌ಫೋನ್ ಮೇಲೆ ಶೇ.20ರಷ್ಟು ನೇರ ಡಿಸ್ಕೌಂಟ್ ಲಭ್ಯವಿದೆ. ಈ ಫೋನಿನ 8GB RAM + 128GB ಸ್ಟೋರೇಜ್ ವೇರಿಯಂಟ್ 7,999 ರೂ. ಗಳ ಡಿಸ್ಕೌಂಟ್ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಇದರ ಜೊತೆಗೆ ಇತರೆ ಕೆಲವು ಆಯ್ದ ಬ್ಯಾಂಕ್ ಕೊಡುಗೆಗಳು ಸಹ ಖರೀದಿದಾರರಿಗೆ ದೊರೆಯಲಿವೆ.
Lava O2 ಸ್ಮಾರ್ಟ್‌ಫೋನ್ ಯೂನಿಸೋಕ್ T616 ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದ್ದು, ಆಂಡ್ರಾಯ್ಡ್ 14OS ಸಪೋರ್ಟ್ ಸಹ ಹೊಂದಿದೆ. ಈ ಫೋನ್ ಗ್ಲಾಸ್ ಗ್ರೀನ್ ಮತ್ತು ಗ್ಲಾಸ್ ಗೋಲ್ಡ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ. ಇದು ತನ್ನ ಅದ್ಭುತ ಫೀಚರ್ಸ್‌ಗಳ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಇದರ ವೈಶಿಷ್ಟ್ಯಗಳ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ.
Lava O2 ಸ್ಮಾರ್ಟ್‌ಫೋನ್ 6.5 ಇಂಚಿನ LCD HD+ ಡಿಸ್‌ಪ್ಲೇ ಹೊಂದಿದ್ದು, ಈ ಡಿಸ್‌ಪ್ಲೇಯು 720 × 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ ಈ ಡಿಸ್‌ಪ್ಲೇಯು 269ppi ಪಿಕ್ಸೆಲ್ ಸಾಂದ್ರತೆ, 90Hz ರಿಫ್ರೆಶ್ ರೇಟ್ ಆಯ್ಕೆ ಹಾಗೂ ಪಂಚ್ ಹೋಲ್ ನಾಚ್ ಡಿಸ್‌ಪ್ಲೇ ಶೈಲಿಯಲ್ಲಿದೆ.
Lava O2 ಸ್ಮಾರ್ಟ್‌ಫೋನ್ ಯೂನಿಸೋಕ್ T616 ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸಲಿದ್ದು, ಮಾಲಿ G57 ಜಿಪಿಯು ಪವರ್ ಸಪೋರ್ಟ್ ಸಹ ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 13OSನಲ್ಲಿ ರನ್ ಆಗಲಿದ್ದು, ಆಂಡ್ರಾಯ್ಡ್ 14ಗೆ ಅಪ್‌ಗ್ರೇಡ್ ಆಯ್ಕೆ ಒಳಗೊಂಡಿದೆ. ಇದು 8GB RAM ಮತ್ತು 8GB ವರ್ಚುವಲ್ RAM ಜೊತೆಗೆ 128GB UFS 2.2 ಆಂತರೀಕ ಸ್ಟೋರೇಜ್ ಆಯ್ಕೆಗಳನ್ನ ಹೊಂದಿದೆ.
Lava O2 ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ರಚನೆ ಹೊಂದಿದೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಮತ್ತು ದ್ವಿತೀಯ ಕ್ಯಾಮೆರಾ AI ಲೆನ್ಸ್ ಹೊಂದಿದೆ. ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ 8 ಮೆಗಾ ಪಿಕ್ಸೆಲ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ. ಇದರೊಂದಿಗೆ LED ಫ್ಲ್ಯಾಶ್ ಆಯ್ಕೆ ಒದಗಿಸಲಾಗಿದೆ. ಇದು 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಒಳಗೊಂಡಿದ್ದು, ಇದಕ್ಕೆ ಸಪೋರ್ಟಿವ ಆಗಿ 18W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 3.5mm ಆಡಿಯೋ ಜಾಕ್, ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಸೌಲಭ್ಯ, USB ಟೈಪ್-ಸಿ ಚಾರ್ಜಿಂಗ್ ಪೋರ್ಟ್, ಫೇಸ್ ಅನ್‌ಲಾಕ್ ಆಯ್ಕೆ, ಡ್ಯುಯಲ್-ಸಿಮ್, 4G, ವೈ ಫೈ, ಬ್ಲೂಟೂತ್ ಆವೃತ್ತಿ 5.0 ಮುಂತಾದ ಆಯ್ಕೆಗಳನ್ನು ಹೊಂದಿದೆ.