ಈ ಮಸಾಲೆ ಜೊತೆ ನಿಂಬೆ ರಸ ಬೆರೆಸಿ ಸೇವಿಸಿದರೆ ಒಂದೇ ವಾರದಲ್ಲಿ ಯೂರಿಕ್ ಆಸಿಡ್ ಮಟ್ಟ ಕಡಿಮೆಯಾಗಿ, ಕಿಡ್ನಿ ಸ್ಟೋನ್ ಸಹ ಕರಗಿ ಹೊರಬರುತ್ತದೆ !
ಯೂರಿಕ್ ಆಸಿಡ್ ದೇಹದಲ್ಲಿ ಹೆಚ್ಚಾದಾಗ ಕೀಲುಗಳಲ್ಲಿ ನೋವು, ಊತ, ಸಂಧಿವಾತ, ಸುಸ್ತು ಮುಂತಾದ ಸಮಸ್ಯೆಗಳು ಎದುರಾಗುತ್ತವೆ.
ಈ ಸಮಸ್ಯೆಗಳನ್ನು ತಪ್ಪಿಸಲು ಯೂರಿಕ್ ಆಸಿಡ್ ಪ್ರಮಾಣವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಮುಖ್ಯವಾಗಿದೆ.
ನಿಂಬೆ ಮತ್ತು ಅಜ್ವಾನವನ್ನು ಸರಿಯಾದ ರೀತಿಯಲ್ಲಿ ಬಳಸಿದರೆ ಗಂಟುಗಳಲ್ಲಿ ಅಂಟಿಕುಳಿತಿರುವ ಯೂರಿಕ್ ಆಸಿಡ್ ಕರಗಿ ಹೋಗುತ್ತದೆ.
ಇದನ್ನು ಪ್ರತಿದಿನ ಸೇವಿಸುವುದರಿಂದ ಯೂರಿಕ್ ಆಸಿಡ್ ಜೊತೆ ಕಿಡ್ನಿ ಸ್ಟೋನ್ ಸಮಸ್ಯೆ ಸಹ ಗುಣವಾಗುತ್ತದೆ. ನಿಂಬೆಯಲ್ಲಿರುವ ಉತ್ಕರ್ಷಣ ನಿರೋಧಕವಿದ್ದು, ಜೀರ್ಣಾಂಗ ವ್ಯವಸ್ಥೆಗೆ ಪ್ರಯೋಜನಕಾರಿಯಾಗಿದೆ.
ಒಂದು ಚಮಚ ನಿಂಬೆ ರಸ ಮತ್ತು ಒಂದು ಚಮಚ ಅಜ್ವಾನ ತೆಗೆದುಕೊಂಡು ಉಗುರುಬೆಚ್ಚಗಿನ ನೀರಿನಲ್ಲಿ ಬೆರೆಸಿ ಪ್ರತಿದಿನ ಬೆಳಿಗ್ಗೆ ಸೇವಿಸಿ.
ಅಜ್ವಾನದ ಚಹಾ ತಯಾರಿಸಿ ಇದಕ್ಕೆ ನಿಂಬೆ ರಸ ಬೆರೆಸಿ ಕುಡಿಯುವುದು ಸಹ ಯೂರಿಕ್ ಆಮ್ಲದಲ್ಲಿ ಪರಿಹಾರವನ್ನು ನೀಡುತ್ತದೆ.
ಸೂಚನೆ: ಪ್ರಿಯ ಓದುಗರೇ, ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.