ಆಸೀಸ್ ವಿರುದ್ಧ ಏಕದಿನ ಕ್ರಿಕೆಟ್’ನಲ್ಲಿ ಅತೀ ಹೆಚ್ಚು ರನ್ ಗಳಿಸಿದ ಭಾರತೀಯ ಆಟಗಾರ ಯಾರು ಗೊತ್ತಾ?

Thu, 21 Sep 2023-10:20 am,

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ODI ಸರಣಿಯು ನಾಳೆ ಅಂದರೆ ಸೆಪ್ಟೆಂಬರ್ 22 ರಿಂದ ಪ್ರಾರಂಭವಾಗಲಿದೆ. ಸರಣಿಯ ಮೊದಲ ಪಂದ್ಯ ಮೊಹಾಲಿಯಲ್ಲಿ, ಎರಡನೇ ಪಂದ್ಯ ಸೆಪ್ಟೆಂಬರ್ 24 ರಂದು ಇಂದೋರ್‌’ನ ಹೋಲ್ಕರ್ ಕ್ರೀಡಾಂಗಣದಲ್ಲಿ ಮತ್ತು ಮೂರನೇ ಪಂದ್ಯ ಸೌರಾಷ್ಟ್ರದಲ್ಲಿ ಸೆ.27ರಂದು ನಡೆಯಲಿದೆ.

ಇಂದು ನಾವು ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯದಲ್ಲಿ ಹೆಚ್ಚು ರನ್ ಗಳಿಸಿದ 5 ಬ್ಯಾಟ್ಸ್‌ಮನ್‌’ಗಳ ಬಗ್ಗೆ ನಿಮಗೆ ಮಾಹಿತಿ ನೀಡಲಿದ್ದೇವೆ.

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ಕ್ರಿಕೆಟಿಗರ ಪಟ್ಟಿಯಲ್ಲಿ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದಾರೆ. ಸಚಿನ್ ತೆಂಡೂಲ್ಕರ್ 3077 ರನ್ ಗಳಿಸಿದ್ದು, ಇದರಲ್ಲಿ 9 ಶತಕಗಳು ಮತ್ತು 15 ಅರ್ಧ ಶತಕಗಳು ಸೇರಿವೆ.

ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. 59.23 ಸರಾಸರಿಯಲ್ಲಿ 2251 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ ರೋಹಿತ್ 8 ಶತಕ ಹಾಗೂ 8 ಅರ್ಧ ಶತಕ ಸಿಡಿಸಿದ್ದಾರೆ. ಇನ್ನು ರೋಹಿತ್ ಈ ಸರಣಿಯಲ್ಲಿ ಶತಕ ಬಾರಿಸಿದರೆ, ಆಸ್ಟ್ರೇಲಿಯಾ ವಿರುದ್ಧ ಅತಿ ಹೆಚ್ಚು ಶತಕ ಬಾರಿಸಿದ ಸಚಿನ್ ದಾಖಲೆಯನ್ನು ಸರಿಗಟ್ಟಬಹುದು.

ಈ ಪಟ್ಟಿಯಲ್ಲಿ ಭಾರತ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ವಿರಾಟ್ ಆಸ್ಟ್ರೇಲಿಯಾ ವಿರುದ್ಧ 44 ಇನ್ನಿಂಗ್ಸ್‌ಗಳಲ್ಲಿ 2172 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ ಅವರು ತಮ್ಮ ಬ್ಯಾಟ್‌ನಿಂದ 8 ಶತಕ ಮತ್ತು 11 ಅರ್ಧ ಶತಕಗಳನ್ನು ಗಳಿಸಿದ್ದಾರೆ.

ಈ ಪಟ್ಟಿಯಲ್ಲಿ ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ (ಎಂಎಸ್ ಧೋನಿ) ಕೂಡ ಸೇರಿದ್ದಾರೆ. ಆಸ್ಟ್ರೇಲಿಯ ವಿರುದ್ಧದ ODIನಲ್ಲಿ ಅತಿ ಹೆಚ್ಚು ರನ್ ಗಳಿಸಿದ ವಿಷಯದಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಧೋನಿ 48 ಇನ್ನಿಂಗ್ಸ್‌’ಗಳಲ್ಲಿ 1660 ರನ್ ಗಳಿಸಿದ್ದು, ಈ ಅವಧಿಯಲ್ಲಿ ಅವರು 11 ಅರ್ಧ ಶತಕ ಮತ್ತು ಎರಡು ಶತಕಗಳನ್ನು ಗಳಿಸಿದ್ದಾರೆ.

ಇನ್ನು ಶಿಖರ್ ಧವನ್ ಈ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದಾರೆ. ಶಿಖರ್ ಧವನ್ ಆಸ್ಟ್ರೇಲಿಯಾ ವಿರುದ್ಧ 30 ಏಕದಿನ ಪಂದ್ಯಗಳಲ್ಲಿ 45.17 ಸರಾಸರಿಯಲ್ಲಿ 1265 ರನ್ ಗಳಿಸಿದ್ದಾರೆ. ಇದರಲ್ಲಿ 4 ಶತಕ ಹಾಗೂ 7 ಅರ್ಧ ಶತಕ ಸಿಡಿಸಿದ್ದಾರೆ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link