Lok Sabha Election 2024: ಸತತ 5 ಬಾರಿ ಗೆದ್ದಿದ್ದ ಕಾಂಗ್ರೆಸ್‌ ನಾಯಕನನ್ನು ಸೋಲಿಸಿದ ಯೂಸಫ್‌ ಪಠಾಣ್!

Baharampur Lok Sabha Election Results 2024:‌ ಗೆಲುವು ಸಾಧಿಸಿದ ಬಳಿಕ ಸುದ್ದಿಗಾರರ ಜೊತೆಗೆ ಮಾತನಾಡಿದ ಯೂಸುಫ್ ಪಠಾಣ್, ತಮಗೆ ಮತ ಚಲಾಯಿಸಿದ ಕ್ಷೇತ್ರದ ಜನರಿಗೆ ಮತ್ತು ತಮ್ಮ ಪಕ್ಷದ ನಾಯಕರು, ಅಭ್ಯರ್ಥಿಗಳು ಹಾಗೂ ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಿದ್ದಾರೆ.

Lok Sabha Election 2024: ಟೀಂ ಇಂಡಿಯಾದ ಮಾಜಿ ಆಟಗಾರ ಹಾಗೂ 2 ಬಾರಿಯ ವಿಶ್ವಕಪ್ ವಿಜೇತ ಯೂಸುಫ್ ಪಠಾಣ್ 2024ರ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದು, ಇದೇ ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದ್ದಾರೆ. ಪಶ್ಚಿಮ ಬಂಗಾಳದ ಬಹರಂಪುರ ಕ್ಷೇತ್ರದಲ್ಲಿ ಟಿಎಂಸಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಯೂಸುಫ್ ಪಠಾಣ್ ಅವರು ಕಾಂಗ್ರೆಸ್ ಹಿರಿಯ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ಸೋಲಿಸಿದ್ದಾರೆ.   

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಟಿಎಂಸಿ ಅಭ್ಯರ್ಥಿ ಯೂಸುಫ್ ಪಠಾಣ್ 5,22,974 ಮತಗಳನ್ನು ಪಡೆದರೆ, ಅವರ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ ಅಧೀರ್ ರಂಜನ್ ಚೌಧರಿ 4,37,646 ಮತಗಳನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಯೂಸುಫ್ ಪಠಾಣ್ 85,328 ಮತಗಳ ಅಂತರದಿಂದ ಬಹುತೇಕ ಗೆಲುವು ಸಾಧಿಸಿದ್ದಾರೆ. 

2 /5

ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರು ಲೋಕಸಭಾ ಚುನಾವಣೆಗೂ ಕೆಲವೇ ದಿನಗಳ ಮೊದಲು ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (AITC) ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಪ್ರಚಾರಕ್ಕಾಗಿ ಕ್ಷೇತ್ರಕ್ಕೆ ಹಲವು ಬಾರಿ ಭೇಟಿ ನೀಡಿದ್ದರು. 

3 /5

ಈ ಹಿಂದೆ ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡದ ಆಟಗಾರರಾಗಿದ್ದ ಯೂಸುಫ್ ಪಠಾಣ್ ಪಶ್ಚಿಮ ಬಂಗಾಳದಲ್ಲಿ ಸ್ಟಾರ್ ಅಭ್ಯರ್ಥಿಯಾಗಿದ್ದರು. ಮುಸ್ಲಿಂ ಬಾಹುಳ್ಯವಿರುವ ಬಹರಂಪುರ ಕ್ಷೇತ್ರದಲ್ಲಿ ಸ್ಪರ್ಧಿಸುವ ಮೂಲಕ ಅವರು ಸತತ ಐದು ಬಾರಿ ಗೆಲುವು ಸಾಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಿದ್ದಾರೆ.

4 /5

ಗೆಲುವು ಸಾಧಿಸಿದ ಬಳಿಕ ಸುದ್ದಿಗಾರರ ಜೊತೆಗೆ ಮಾತನಾಡಿದ ಯೂಸುಫ್ ಪಠಾಣ್, ತಮಗೆ ಮತ ಚಲಾಯಿಸಿದ ಕ್ಷೇತ್ರದ ಜನರಿಗೆ ಮತ್ತು ತಮ್ಮ ಪಕ್ಷದ ನಾಯಕರು, ಅಭ್ಯರ್ಥಿಗಳು ಹಾಗೂ ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಿದ್ದಾರೆ.

5 /5

ಕ್ರಿಕೆಟ್‌ನಲ್ಲಿ ಸ್ಫೋಟಕ ಆಟಕ್ಕೆ ಖ್ಯಾತಿಯಾಗಿದ್ದ ಯೂಸಫ್‌ ಪಠಾಣ್‌ ಇದೀಗ ರಾಜಕೀಯ ಕ್ಷೇತ್ರದಲ್ಲಿಯೂ ಮೊದಲ ಎಸೆತದಲ್ಲಿಯೇ ಸಿಕ್ಸರ್‌ ಬಾರಿಸಿದ್ದಾರೆ. ಬಹರಂಪುರ ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಮೂಲಕ ಅವರು ಮೊದಲ ಬಾರಿಗೆ ಸಂಸತ್‌ ಪ್ರವೇಶಿಸಿದ್ದಾರೆ.