Lok Sabha Election 2024: ಸತತ 5 ಬಾರಿ ಗೆದ್ದಿದ್ದ ಕಾಂಗ್ರೆಸ್‌ ನಾಯಕನನ್ನು ಸೋಲಿಸಿದ ಯೂಸಫ್‌ ಪಠಾಣ್!

Tue, 04 Jun 2024-7:50 pm,

ಟಿಎಂಸಿ ಅಭ್ಯರ್ಥಿ ಯೂಸುಫ್ ಪಠಾಣ್ 5,22,974 ಮತಗಳನ್ನು ಪಡೆದರೆ, ಅವರ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ ಅಧೀರ್ ರಂಜನ್ ಚೌಧರಿ 4,37,646 ಮತಗಳನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಯೂಸುಫ್ ಪಠಾಣ್ 85,328 ಮತಗಳ ಅಂತರದಿಂದ ಬಹುತೇಕ ಗೆಲುವು ಸಾಧಿಸಿದ್ದಾರೆ. 

ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರು ಲೋಕಸಭಾ ಚುನಾವಣೆಗೂ ಕೆಲವೇ ದಿನಗಳ ಮೊದಲು ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (AITC) ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಪ್ರಚಾರಕ್ಕಾಗಿ ಕ್ಷೇತ್ರಕ್ಕೆ ಹಲವು ಬಾರಿ ಭೇಟಿ ನೀಡಿದ್ದರು. 

ಈ ಹಿಂದೆ ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡದ ಆಟಗಾರರಾಗಿದ್ದ ಯೂಸುಫ್ ಪಠಾಣ್ ಪಶ್ಚಿಮ ಬಂಗಾಳದಲ್ಲಿ ಸ್ಟಾರ್ ಅಭ್ಯರ್ಥಿಯಾಗಿದ್ದರು. ಮುಸ್ಲಿಂ ಬಾಹುಳ್ಯವಿರುವ ಬಹರಂಪುರ ಕ್ಷೇತ್ರದಲ್ಲಿ ಸ್ಪರ್ಧಿಸುವ ಮೂಲಕ ಅವರು ಸತತ ಐದು ಬಾರಿ ಗೆಲುವು ಸಾಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಿದ್ದಾರೆ.

ಗೆಲುವು ಸಾಧಿಸಿದ ಬಳಿಕ ಸುದ್ದಿಗಾರರ ಜೊತೆಗೆ ಮಾತನಾಡಿದ ಯೂಸುಫ್ ಪಠಾಣ್, ತಮಗೆ ಮತ ಚಲಾಯಿಸಿದ ಕ್ಷೇತ್ರದ ಜನರಿಗೆ ಮತ್ತು ತಮ್ಮ ಪಕ್ಷದ ನಾಯಕರು, ಅಭ್ಯರ್ಥಿಗಳು ಹಾಗೂ ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಕ್ರಿಕೆಟ್‌ನಲ್ಲಿ ಸ್ಫೋಟಕ ಆಟಕ್ಕೆ ಖ್ಯಾತಿಯಾಗಿದ್ದ ಯೂಸಫ್‌ ಪಠಾಣ್‌ ಇದೀಗ ರಾಜಕೀಯ ಕ್ಷೇತ್ರದಲ್ಲಿಯೂ ಮೊದಲ ಎಸೆತದಲ್ಲಿಯೇ ಸಿಕ್ಸರ್‌ ಬಾರಿಸಿದ್ದಾರೆ. ಬಹರಂಪುರ ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಮೂಲಕ ಅವರು ಮೊದಲ ಬಾರಿಗೆ ಸಂಸತ್‌ ಪ್ರವೇಶಿಸಿದ್ದಾರೆ. 

ZEENEWS TRENDING STORIES

By continuing to use the site, you agree to the use of cookies. You can find out more by Tapping this link