ಲೋಕಸಭಾ ಚುನಾವಣೆ: ಮತ ಚಲಾಯಿಸಿದ ಹಲವು ನಾಯಕರು See Pics
ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ. ಸದಾನಂದ ಗೌಡ ಭೂಪಸಂದ್ರ ಮತಗಟ್ಟೆ ಸಂಖ್ಯೆ 56ರಲ್ಲಿ ಕುಟುಂಬ ಸದಸ್ಯರ ಜೊತೆಗೆ ಮತದಾನ ಮಾಡಿದರು.
ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ಮಗ ನಿಖಿಲ್ ಕುಮಾರಸ್ವಾಮಿಯವರೊಂದಿಗೆ ಬೆಂಗಳೂರು ಗ್ರಾಮೀಣಾ ಲೋಕಸಭಾ ಕ್ಷೇತ್ರದ ಕೇತಿಗಾನಹಳ್ಳಿ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. (Pic Courtesy: ANI)
ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಹಾಗೂ ಕನ್ನಿಕಾ ಪರಮೇಶ್ವರ ತುಮಕೂರಿನ ಸಿದ್ದಾರ್ಥ ನಗರದ ಸರಕಾರಿ ಕಾಲೇಜಿನಲ್ಲಿ ಮತ ಚಲಾಯಿಸಿದರು. (Pic Courtesy: ANI)
ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪತ್ನಿ ತ್ರಿಷಿಕಾ ಕುಮಾರಿ ಅವರೊಂದಿಗೆ ಬಂದು ಶ್ರೀಕಾಂತ ಮಹಿಳಾ ಪದವಿ ಪೂರ್ವ ಕಾಲೇಜಿನ ಮತಗಟ್ಟೆ ಸಂಖ್ಯೆ 179ರಲ್ಲಿ ಮತ ಚಲಾಯಿಸಿದರು.
ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಪಕ್ಷೇತರರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಪ್ರಕಾಶ್ ರಾಜ್ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು. (Pic Courtesy: ANI)
ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ಹಾಗೂ ಪತ್ನಿ ಭವಾನಿ ರೇವಣ್ಣ ಮತದಾನಕ್ಕೂ ಮೊದಲು ಹಾಸನದ ಪಡುವಾಲಾಹಿಪ್ಪ ಗ್ರಾಮದ ದೇವಾಲಯವೊಂದರಲ್ಲಿ ಪ್ರಾರ್ಥನೆ ಸಲ್ಲಿಸಿದರು. (Pic Courtesy: ANI)
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 54 ರಲ್ಲಿ ರಕ್ಷಣಾ ಸಚಿವ ನಿರ್ಮಲಾ ಸೀತಾರಾಮನ್ ಅವರು ಮತ ಚಲಾಯಿಸಿದರು. (Pic Courtesy: ANI)